ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Eltuu Muthaa Movie: ‘ಎಲ್ಟು ಮುತ್ತಾ’ ಚಿತ್ರದ ಟ್ರೇಲರ್ ಔಟ್‌; ಆ.1ಕ್ಕೆ ಸಿನಿಮಾ ರಿಲೀಸ್‌

Eltuu Muthaa Movie: ರಾ.ಸೂರ್ಯ ನಿರ್ದೇಶನದ ಹಾಗೂ ಶೌರ್ಯ ಪ್ರತಾಪ್, ರಾ.ಸೂರ್ಯ, ಪ್ರಿಯಾಂಕ ಮಳಲಿ ಮುಂತಾದವರು ಅಭಿನಯಿಸಿರುವ ‘ಎಲ್ಟು ಮುತ್ತಾʼ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು.

‘ಎಲ್ಟು ಮುತ್ತಾ’' ಚಿತ್ರದ ಟ್ರೇಲರ್ ಔಟ್‌; ಆ.1ಕ್ಕೆ ಸಿನಿಮಾ ರಿಲೀಸ್‌

Profile Siddalinga Swamy Jul 17, 2025 5:48 PM

ಬೆಂಗಳೂರು: HIGH 5 ಸ್ಟುಡಿಯೋಸ್ ಲಾಂಛನದಲ್ಲಿ ಸತ್ಯ ಎಸ್. ಶ್ರೀನಿವಾಸನ್ ನಿರ್ಮಿಸಿರುವ, ರಾ.ಸೂರ್ಯ ನಿರ್ದೇಶನದ ಹಾಗೂ ಶೌರ್ಯ ಪ್ರತಾಪ್, ರಾ.ಸೂರ್ಯ, ಪ್ರಿಯಾಂಕ ಮಳಲಿ ಮುಂತಾದವರು ಅಭಿನಯಿಸಿರುವ ‘ಎಲ್ಟು ಮುತ್ತಾʼ ಚಿತ್ರದ (Eltuu Muthaa Movie) ಟ್ರೇಲರ್ ಇತ್ತೀಚೆಗೆ ವಿಕ್ಟರಿ ಸಿನಿಮಾಸ್‌ನಲ್ಲಿ ಅದ್ದೂರಿಯಾಗಿ ಅನಾವರಣವಾಯಿತು. ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರು ಟ್ರೇಲರ್ ಬಿಡುಗಡೆ ಮಾಡಿದರು. ನಟರಾದ ಕಿಶೋರ್ ಕುಮಾರ್, ಮನೋರಂಜನ್ ರವಿಚಂದ್ರನ್, ಜಿ.ಬಿ. ವಿನಯ್ ಕುಮಾರ್ ಹಾಗೂ ಪೊಲೀಸ್ ಅಧಿಕಾರಿ ರಾಜೇಶ್ ಅವರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು, ಚಿತ್ರಕ್ಕೆ ಶುಭ ಕೋರಿದರು. ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.



ಮೊದಲು ಮಾತನಾಡಿದ ನಿರ್ಮಾಪಕ ಸತ್ಯ ಶ್ರೀನಿವಾಸನ್, ನಮ್ಮ ಚಿತ್ರದ ಎರಡು ಹಾಡುಗಳು ಹಾಗೂ ಟೀಸರ್‌ಗೆ ದೊರಕಿರುವ ಪ್ರಶಂಸೆಗೆ ಬಹಳ ಖುಷಿಯಾಗಿದೆ. ಅದರಲ್ಲೂ ಕೊಡವ ಭಾಷೆಯ ಹಾಡಂತೂ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಇಂದು ಗಣ್ಯರಿಂದ ಟ್ರೇಲರ್ ಬಿಡುಗಡೆಯಾಗಿದೆ. ಇನ್ನೂ ಪ್ರಚಾರಕ್ಕಾಗಿ ʼಎಲ್ಟು ಮುತ್ತಾʼ ನ ಸಂಚಾರ ಆರಂಭವಾಗಿದ್ದು, ರಾಜ್ಯದ ವಿವಿಧ ಊರುಗಳಿಗೆ ಚಿತ್ರತಂಡ ಭೇಟಿ ಕೊಡಲಿದೆ. ಆಗಸ್ಟ್ 1 ರಂದು ʼಎಲ್ಟು ಮುತ್ತಾʼ ನಮ್ಮ ಚಿತ್ರ ಶ್ರೀಧರ್ ಕೃಪ ಎಂಟರ್‌ಪ್ರೈಸಸ್ ಮೂಲಕ ರಾಜ್ಯದಂತ ಬಿಡುಗಡೆಯಾಗುತ್ತಿದೆ ಎಂದರು.

ಟ್ರೇಲರ್ ಮೂಲಕ ಎಲ್ಲರ ಗಮನ ಸೆಳೆದಿರುವ ನಮ್ಮ ಚಿತ್ರ ಆಗಸ್ಟ್ 1 ರಂದು ಬಿಡುಗಡೆಯಾಗಲಿದೆ. ಈಗಾಗಲೇ ತಿಳಿಸಿದ ಹಾಗೆ ʼಎಲ್ಟು ಮುತ್ತಾʼ ಎರಡು ಪಾತ್ರಗಳ ಹೆಸರು. ಇದು ಸಾವಿಗೆ ಡೋಲು ಬಡೆಯುವವರ ಸುತ್ತ ಹೆಣೆದಿರುವ ಕಥೆ. ಕೊಡಗು ಪ್ರಾಂತ್ಯದಲ್ಲಿ ನಡೆಯುವ ಕಥೆಯೂ ಹೌದು. ಚಿಕ್ಕವಯಸ್ಸಿನಿಂದ ನಾನು ಕಂಡ ಕೆಲವು ಸನ್ನಿವೇಶಗಳನ್ನು ಚಿತ್ರದ ಮೂಲಕ ತರುತ್ತಿದ್ದೇನೆ. ನಿಮಗೂ ಚಿತ್ರ ಹಿಡಸಲಿದೆ ಎಂಬ ಭರವಸೆ ಇದೆ. ನಾನು ನಿರ್ದೇಶನದ ಜತೆಗೆ ಎಲ್ಟು ಪಾತ್ರದಲ್ಲೂ ಅಭಿನಯಿಸಿದ್ದೇನೆ. ಮುತ್ತಾ ಪಾತ್ರದಲ್ಲಿ ಶೌರ್ಯ ಪ್ರತಾಪ್ ನಟಿಸಿದ್ದಾರೆ ಎಂದು ನಿರ್ದೇಶಕ ರಾ ಸೂರ್ಯ ತಿಳಿಸಿದರು.

ನಾನು ಮುತ್ತಾ ಪಾತ್ರದಲ್ಲಿ ಅಭಿನಯಿಸಿದ್ದೇನೆ. ನಾನು ಬರವಣಿಗೆ ಹಂತದಿಂದಲೂ ಚಿತ್ರತಂಡದ ಜತೆಗಿದ್ದೇನೆ. ಇದು ನನ್ನ ಮೊದಲ ಚಿತ್ರ. ನಮ್ಮ ಚಿತ್ರದ ಟೀಸರ್, ಹಾಡುಗಳು ಹಾಗೂ ಇಂದು ಬಿಡುಗಡೆಯಾಗಿರುವ ಟ್ರೇಲರ್‌ಗೆ ಸಿಗುತ್ತಿರುವ ಪ್ರಶಂಸೆ ನೋಡಿದರೆ ಚಿತ್ರ ಗೆದ್ದೆ ಗೆಲ್ಲುವ ನಿರೀಕ್ಷೆ ಇದೆ ಎಂದರು ನಾಯಕ ಶೌರ್ಯ ಪ್ರತಾಪ್. ರುಹಾನ್ ಆರ್ಯ ಒಬ್ಬ ಉದಯೋನ್ಮುಖ ನಟ ಇವರು ನಟನೆಯ ಜತೆಗೆ ಕಾರ್ಯಕಾರಿ ನಿರ್ಮಾಪಕನಾಗಿ ಕೂಡ ಕೆಲಸ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ | Monsoon Nail Art 2025: ಈ ಸೀಸನ್‌ನಲ್ಲಿ ಟ್ರೆಂಡಿಯಾದ ಮಾನ್ಸೂನ್ ನೇಲ್ ಆರ್ಟ್‌ಗಳಿವು!

ಹಾಡುಗಳು ಹಿಟ್ ಆಗಿರುವುದಕ್ಕೆ ಸಂಗೀತ ನಿರ್ದೇಶಕ ಮತ್ತು ಗಾಯಕ ಪ್ರಸನ್ನ ಕೇಶವ ಸಂತಸಪಟ್ಟರು. ನಾಯಕಿ ಪ್ರಿಯಾಂಕ ಮಳಲಿ ಹಾಗೂ ನಟ ಕಾಕ್ರೋಜ್ ಸುಧೀ, ನವೀನ್ ಡಿ ಪಡೀಲ್ ಮತ್ತು ಯಮುನಾ ಶ್ರೀನಿಧಿ ಯಂತ ಅನುಭಾವಿ ಕಲಾವಿದರು ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಸಹ ನಿರ್ಮಾಪಕ ಪವೀಂದ್ರ ಪೊನ್ನಪ್ಪ,ಹಾಗೂ ವಿತರಕ ಶ್ರೀಧರ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.