ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

First Salary Short Film: ಪವನ್ ವೆಂಕಟೇಶ್ ನಿರ್ದೇಶನದ ʼಫಸ್ಟ್ ಸ್ಯಾಲರಿʼ ಕಿರುಚಿತ್ರದ ಪೋಸ್ಟರ್ ರಿಲೀಸ್‌

Sandalwood News: ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಮುನ್ನೆಡೆಸುತ್ತಿರುವ ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ತಮ್ಮ ಪುತ್ರ ಪವನ್ ವೆಂಕಟೇಶ್ ಆಕ್ಷನ್ ಕಟ್ ಹೇಳಿರುವ ʼಫಸ್ಟ್ ಸ್ಯಾಲರಿʼ ಕಿರುಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಶೀರ್ಷಿಕೆ ಕೆಳಗೆ ಕನಸುಗಳ ಹಾದಿ ಎನ್ನುವ ಅಡಿಬರಹವಿದೆ. ʼಫಸ್ಟ್ ಸ್ಯಾಲರಿʼ ಕಿರುಚಿತ್ರದ ಪೋಸ್ಟರ್ ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗಿದೆ.

ʼಫಸ್ಟ್ ಸ್ಯಾಲರಿʼ ಕಿರುಚಿತ್ರದ ಪೋಸ್ಟರ್ ರಿಲೀಸ್‌

-

Profile Siddalinga Swamy Oct 22, 2025 6:45 PM

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರು, ನಿರ್ದೇಶಕರೂ ಆದಿಯಾಗಿ ಚಿತ್ರತಂಡ ಮತ್ತು ಸಿನಿಮಾ ಪತ್ರಕರ್ತರೊಂದಿಗೆ ಸಂಪರ್ಕಕೊಂಡಿಯಾಗಿ ಕಳೆದ 5 ದಶಕಗಳಿಂದ ಕೆಲಸ ಮಾಡುತ್ತಿರುವ ʼಶ್ರೀ ರಾಘವೇಂದ್ರ ಚಿತ್ರವಾಣಿʼ ಸಂಸ್ಥೆ ಹಲವು ಚಿತ್ರಗಳನ್ನು ನಿರ್ಮಾಣದಲ್ಲಿಯೂ ಗುರುತಿಸಿಕೊಂಡು ಚಿತ್ರರಂಗಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ಮತ್ತು ಸೇವೆ ನೀಡಿದೆ. ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಮುನ್ನೆಡೆಸುತ್ತಿರುವ ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ತಮ್ಮ ಪುತ್ರ ಪವನ್ ವೆಂಕಟೇಶ್ ಆಕ್ಷನ್ ಕಟ್ ಹೇಳಿರುವ ʼಫಸ್ಟ್ ಸ್ಯಾಲರಿʼ ಕಿರುಚಿತ್ರಕ್ಕೆ (First Salary Short Film) ಬಂಡವಾಳ ಹಾಕಿದ್ದಾರೆ. ಶೀರ್ಷಿಕೆ ಕೆಳಗೆ ಕನಸುಗಳ ಹಾದಿ ಎನ್ನುವ ಅಡಿಬರಹವಿದೆ. ʼಫಸ್ಟ್ ಸ್ಯಾಲರಿʼ ಕಿರುಚಿತ್ರದ ಪೋಸ್ಟರ್ ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗಿದೆ.

ಕರೋನ ಸಮಯದಲ್ಲಿ ʼಕರಾಳ ರೋಗ ನಾಶʼ ಎಂಬ ಕಿರುಚಿತ್ರ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶನ ಮಾಡಿ ಅನುಭವ ಹೊಂದಿರುವ ಪವನ್ ವೆಂಕಟೇಶ್, ಈಗ ʼಫಸ್ಟ್ ಸ್ಯಾಲರಿʼ ಎಂಬ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.

First Salary Short Film 1

ಈ ಕಿರುಚಿತ್ರದಲ್ಲಿ ಹಿರಿಯ ಕಲಾವಿದರಾದ ಹರಿಣಿ ಶ್ರೀಕಾಂತ್ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದು ವಿಜಯ್ ಶಿವಕುಮಾರ್, ಯತಿರಾಜ್, ತ್ರಿಶೂಲ್, ಸ್ನೇಹಶ್ರೀ ಮತ್ತು ರಕ್ಷಿತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀರಾಘವೇಂದ್ರ ಚಿತ್ರವಾಣಿ ಯೂಟೂಬ್‍ನಲ್ಲೇ ಈ ಕಿರುಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಕರೋನಾ ಸೋಂಕಿನ ಸಮಯದಲ್ಲಿ ‘ಕರೋನಾ ಕರಾಳ ನಾಶ’ ಕಿರುಚಿತ್ರ ಮಾಡಿದ್ದೆ ,ಇದರ ಜತೆ ಕನ್ನಡದ ಅಗ್ರಗಣ್ಯ ಸಿನಿಮಾ ಪ್ರಚಾರಕರ್ತ ದಿ ಡಿ.ವಿ. ಸುಧೀಂದ್ರ ಅವರ ಬದುಕಿನ ಕುರಿತಾದ ‘ಡಿ.ವಿ. ಸುಧೀಂದ್ರ ಸಿನಿ ಪಯಣ’ ಸಾಕ್ಷ್ಯಚಿತ್ರ ಹಾಗೂ ಆನಿಮೇಷನ್‌ನಲ್ಲಿ ʼರಾಮಜನ್ಮ ಭೂಮಿʼ ಕಿರುಚಿತ್ರ ನಿರ್ದೇಶನ ಮಾಡಿದ್ದೆ, ಈಗ ʼಫಸ್ಟ್ ಸ್ಯಾಲರಿʼ ಕಿರುಚಿತ್ರ ಮಾಡಿದ್ದೇನೆ. ನೋಡುಗರಿಗೆ ಬೇಕಾದ ಎಲ್ಲಾ ಕಮರ್ಷಿಯಲ್ ಅಂಶ ಇದೆ.

ಇದು ತಾಯಿಯ ಸೆಂಟಿಮೆಂಟ್ ಆಧರಿಸಿದ ಕಿರುಚಿತ್ರ. ಐದು ದಿನಗಳ ಕಾಲ ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಹೆಚ್ಚು ಕಡಿಮೆ ಒಂದು ತಿಂಗಳು ಆಗಿದೆ. ಕಿರುಚಿತ್ರದಲ್ಲಿ ಒಂದು ಹಾಡಿದೆ, ಡಿಐ ಸೇರಿದಂತೆ ಒಟ್ಟಾರೆ ಕಿರುಚಿತ್ರದ ತಯಾರಿಕೆಗೆ ಎರಡರಿಂದ ಮೂರು ತಿಂಗಳು ಹಿಡಿದಿದೆ . ʼಫಸ್ಟ್ ಸ್ಯಾಲರಿʼ ಕಿರುಚಿತ್ರ ಒಟ್ಟಾರೆ 24 ನಿಮಿಷದ ಅವಧಿ ಇದೆ‌ ಎಂದು ನಿರ್ದೇಶಕ ಪವನ್ ವೆಂಕಟೇಶ್ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Deepavali Jewel Fashion 2025: ದೀಪಾವಳಿ ಸೀಸನ್‌ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡ ಆಭರಣಗಳು

ನಿರ್ದೇಶನ ತಂಡದಲ್ಲಿ ಮನೋಜ್ ಕುಮಾರ್ ಎಚ್.ಎನ್. ರವಿ ಸಾಸನೂರು ಕೆಲಸ ಮಾಡಿದ್ದು ಪ್ರಚಾರ ಕಲೆ ಮಣಿ ಅವರದು. ವಿಜಯ್ ಶಿವಕುಮಾರ್ ರಚನೆ, ರಿಚರ್ಡ್ ಡ್ಯಾನಿಯಲ್ ಛಾಯಾಗ್ರಾಹಣದ ಜತೆಗೆ ಸಂಕಲನ ಮಾಡಿದ್ದು ವಿಜಯ್ ಹರಿತ್ಸ ಸಂಗೀತ ನೀಡಿದ್ಧಾರೆ. ಡಿ.ಎಸ್. ಸುನೀಲ್ ಸುಧೀಂದ್ರ ಮತ್ತು ಡಿ.ಜಿ ವಾಸುದೇವ್ ಪತ್ರಿಕಾ ಸಂಪರ್ಕವಿದ್ದು ಡಿಜಿಟಲ್ ಮಾರ್ಕೆಟಿಂಗ್‍ನಲ್ಲಿ ಚಂದನ ಪ್ರಸನ್ನ ಕಾರ್ಯನಿರ್ವಹಿಸಿದ್ದಾರೆ ಎಂದು ನಿರ್ದೇಶಕ ಪವನ್ ವೆಂಕಟೇಶ್ ʼಫಸ್ಟ್ ಸ್ಯಾಲರಿʼ ಬಗ್ಗೆ ಮಾಹಿತಿ ನೀಡಿದ್ದಾರೆ.