ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kannada New Movie: ʼನಾಯಿ ಇದೆ ಎಚ್ಚರಿಕೆʼ ಚಿತ್ರದ ಟ್ರೈಲರ್‌, ಸಾಂಗ್ಸ್‌ ಬಿಡುಗಡೆ ಮಾಡಿದ ಇಂದ್ರಜಿತ್ ಲಂಕೇಶ್

Kannada New Movie: ಕಲಿ ಗೌಡ ಅವರು ನಿರ್ದೇಶಿಸಿರುವ ʼನಾಯಿ ಇದೆ ಎಚ್ಚರಿಕೆʼ ಚಿತ್ರದ ಟ್ರೈಲರ್‌ ಹಾಗೂ ಹಾಡುಗಳನ್ನು ಇತ್ತೀಚೆಗೆ ನಿರ್ಮಾಪಕ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಬಿಡುಗಡೆ ಮಾಡಿದರು. ಡಾ.ಲೀಲಾಮೋಹನ್ ಅವರು ಈ ವಿಭಿನ್ನ ಶೀರ್ಷಿಕೆಯ ಚಿತ್ರವನ್ನು ನಿರ್ಮಾಣ ಮಾಡುವುದರ ಜತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ʼನಾಯಿ ಇದೆ ಎಚ್ಚರಿಕೆʼ ಚಿತ್ರದ ಟ್ರೈಲರ್‌, ಸಾಂಗ್ಸ್ ಬಿಡುಗಡೆ

Profile Siddalinga Swamy May 17, 2025 5:49 PM

ಬೆಂಗಳೂರು: ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ ʼನಾಯಿ ಇದೆ ಎಚ್ಚರಿಕೆʼ (Naayi Ide Yechcharike Movie). ಈಗ ಇದೇ ಚಿತ್ರದ ಶೀರ್ಷಿಕೆಯಾಗಿರುವುದು ವಿಶೇಷ. ಹೌದು, ವೃತ್ತಿಯಲ್ಲಿ ವೈದ್ಯರಾಗಿರುವ ಡಾ.ಲೀಲಾಮೋಹನ್ ಪಿವಿಆರ್ ಅವರು ಈ ವಿಭಿನ್ನ ಶೀರ್ಷಿಕೆಯ ಚಿತ್ರವನ್ನು ನಿರ್ಮಾಣ ಮಾಡುವುದರ ಜತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಡಾ. ಲೀಲಾಮೋಹನ್ ಅವರು ಸಿನಿಮಾ ಉದ್ಯಮದಲ್ಲಿ ಈಗಾಗಲೇ ಐದು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಅವರು ಈ ಚಿತ್ರದ ನಿರ್ಮಾಪಕರಾಗುವ ಮೊದಲು, 'ಗಡಿಯಾರ' ಎಂಬ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಅಲ್ಲದೆ, 'ಕೌರ್ಯ', 'ಪುಟ್ಟಾಣಿ ಪಂಟರುಗಳು', 'ರೋಡ್ ಕಿಂಗ್' ಮತ್ತು ತೆಲುಗಿನ 'ಕಲ್ಯಾಣಮಸ್ತು' ಸೇರಿದಂತೆ ಹಲವಾರು ಚಲನಚಿತ್ರಗಳಲ್ಲಿ ಪ್ರಮುಖ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ವಿಶೇಷವಾಗಿ, 'ಉಗ್ರಾವತಾರ' ಎಂಬ ಚಿತ್ರದಲ್ಲಿ ಮನಸ್ಸಿಗೆ ನೆಮ್ಮದಿಯಿಲ್ಲದ ಸೈಕೋ ಪಾತ್ರದಲ್ಲಿ ನಟಿಸಿ ಗಮನ ಸೆಳೆದಿದ್ದಾರೆ.



ಕಲಿ ಗೌಡ ಅವರು ನಿರ್ದೇಶಿಸಿರುವ ʼನಾಯಿ ಇದೆ ಎಚ್ಚರಿಕೆʼ ಚಿತ್ರದ ಟ್ರೈಲರ್‌ ಹಾಗೂ ಹಾಡುಗಳನ್ನು ಇತ್ತೀಚೆಗೆ ನಿರ್ಮಾಪಕ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಬಿಡುಗಡೆ ಮಾಡಿದರು. ನಟ ಪ್ರಥಮ್ ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಹದಿನೈದು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ನಿರ್ದೇಶಕನಾಗಿ ಇದು ಎರಡನೇ ಚಿತ್ರ. ನಾಯಿ ನೀಯತ್ತಿನ ಪ್ರಾಣಿ ಎಂದು ಎಲ್ಲರಿಗೂ ಗೊತ್ತು. ಅದು ಬದುಕಿದಾಗಷ್ಟೇ ಅಲ್ಲ. ಸತ್ತ ಮೇಲೂ ಅದರ ನೀಯತ್ತು ಕಡಿಮೆ ಆಗಲ್ಲ ಎಂಬದನ್ನು ನಮ್ಮ ಚಿತ್ರದ ಮೂಲಕ ತೋರಿಸಿದ್ದೇವೆ. ನಾನು ಹೇಳಿದ ಕಥೆ ಇಷ್ಟವಾಗಿ ಬಂಡವಾಳ ಹೂಡಿದ ನಿರ್ಮಾಪಕರಿಗೆ ಹಾಗೂ ಚಿತ್ರ ಉತ್ತಮವಾಗಿ ಮೂಡಿಬರಲು ಸಹಾಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ಕಲಿ ಗೌಡ.

ನಾನು ವೃತ್ತಿಯಲ್ಲೂ ವೈದ್ಯ. ಈ ಚಿತ್ರದಲ್ಲೂ ವೈದ್ಯ. ಇದರಲ್ಲೂ ನನ್ನ ಹೆಸರು ಲೀಲಾ ಅಂತಲೇ. ಇನ್ನೂ ಇದು ನಾಯಿ ಹಾಗೂ ಮನುಷ್ಯನ ಬಾಂಧವ್ಯದ ಕುರಿತಾದ ಸಿನಿಮಾ. ಜತೆಗೆ ನಾಯಿ ಕಚ್ಚುವುದರಿಂದ ಆಗುವ ದುಷ್ಪರಿಣಾಮಗಳನ್ನು ತೋರಿಸಿರುವ ಸಿನಿಮಾ. ಇದರ ಜತೆಗೆ ಸಸ್ಪೆನ್ಸ್, ಥ್ರಿಲ್ಲರ್, ಹಾರಾರ್, ಸೆಂಟಿಮೆಂಟ್ ಎಲ್ಲವೂ ಇರುವ ಚಿತ್ರ ಕೂಡ‌. ದಿವ್ಯಶ್ರೀ ಈ ಚಿತ್ರದ ನಾಯಕಿ. ಪ್ರಮೋದ್ ಶೆಟ್ಟಿ, ರಾಜ್ ಬಲ್ವಾಡಿ, ದಿನೇಶ್ ಮಂಗಳೂರು, ನಾಗೇಂದ್ರ ಅರಸ್, ಮಾನಸ, ಚಂದನ ಮುಂತಾದವರು ತಾರಾಬಳಗದಲ್ಲಿದ್ದಾರೆ. ಈಗಾಗಲೇ ಸೆನ್ಸಾರ್ ಅಂಗಳದಲ್ಲಿರುವ ಈ ಚಿತ್ರವನ್ನು ಮುಂದಿನ ತಿಂಗಳಲ್ಲಿ ತೆರೆಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ನಾಯಕ ಹಾಗೂ ನಿರ್ಮಾಪಕ ಡಾ. ಲೀಲಾಮೋಹನ್ ತಿಳಿಸಿದರು.

ಈ ಸುದ್ದಿಯನ್ನೂ ಓದಿ | Summer Printed Fashion: ಬೇಸಿಗೆಯಲ್ಲಿ ಮನಸ್ಸನ್ನು ಉಲ್ಲಾಸಗೊಳಿಸುವ ಪ್ರಿಂಟೆಡ್‌ ಫ್ಯಾಷನ್‌ವೇರ್ಸ್ ಹಂಗಾಮ

ನಾಯಕಿ ದಿವ್ಯಶ್ರೀ, ಚಿತ್ರದಲ್ಲಿ ನಟಿಸಿರುವ ಮಾನಸ ಹಾಗೂ ಸಂಗೀತ ನಿರ್ದೇಶಕ ಮ್ಯಾಡ್ ಡಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.