ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karavali Movie: ಪ್ರಜ್ವಲ್ ದೇವರಾಜ್‌ ಅಭಿನಯದ 'ಕರಾವಳಿ' ಸದ್ಯದಲ್ಲೇ ತೆರೆಗೆ

Karavali Movie: ಗುರುದತ್ ಗಾಣಿಗ ನಿರ್ದೇಶನದ, ಪ್ರಜ್ವಲ್ ದೇವರಾಜ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಕರಾವಳಿ’ ಸಿನಿಮಾದ ಚಿತ್ರೀಕರಣ ಸಂಪೂರ್ಣವಾಗಿದೆ. ʼಕರಾವಳಿʼ ಹೆಸರೇ ಹೇಳುವ ಹಾಗೆ ಅಲ್ಲಿನ ಸಂಸ್ಕೃತಿ, ಸೊಗಡಿನ ಬಗ್ಗೆ ಇರುವ ಸಿನಿಮಾ. ಬೆಂಗಳೂರಿನ ದೊಡ್ಡಾಲದ ಮರದ ಬಳಿ ಸೆಟ್ ಹಾಕಿ ಕೊನೆಯ ದಿನದ ಚಿತ್ರೀಕರಣ ಮಾಡಲಾಯಿತು.

ಪ್ರಜ್ವಲ್ ದೇವರಾಜ್‌ ಅಭಿನಯದ 'ಕರಾವಳಿ' ಚಿತ್ರ ಸದ್ಯದಲ್ಲೇ ತೆರೆಗೆ

-

Profile Siddalinga Swamy Sep 5, 2025 3:02 PM

ಬೆಂಗಳೂರು: 'ಕರಾವಳಿ...' ಭಾರಿ ನಿರೀಕ್ಷೆ ಮೂಡಿಸಿರುವ ಕನ್ನಡದ ಮತ್ತೊಂದು ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಸದ್ಯ ಚಿತ್ರೀಕರಣ ಮುಗಿಸುವ ಮೂಲಕ ʼಕರಾವಳಿʼ ಸಿನಿಮಾ (Karavali Movie) ಚಿತ್ರಮಂದಿರದ ಅಂಗಳಕ್ಕೆ ಲಗ್ಗೆ ಇಡಲು ಸಜ್ಜಾಗಿದೆ. ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿಬರುತ್ತಿರುವ ʼಕರಾವಳಿʼ ಸಿನಿಮಾದ ಚಿತ್ರೀಕರಣ ಸಂಪೂರ್ಣವಾಗಿದೆ. ಇತ್ತೀಚಿಗಷ್ಟೆ ಮಾಧ್ಯಮದ ಮುಂದೆ ಹಾಜರಾಗಿದ್ದ ಸಿನಿಮಾತಂಡ ಚಿತ್ರೀಕರಣ ಮುಗಿದ ಖುಷಿಯನ್ನು ಹಂಚಿಕೊಡಿದೆ. ಪ್ರಜ್ವಲ್ ದೇವರಾಜ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಕರಾವಳಿ ಈಗಾಗಲೇ ಪೋಸ್ಟರ್ ಮತ್ತು ಟೀಸರ್ ಮೂಲಕ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದೆ. ಸಿನಿಮಾ ಯಾವಾಗ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು ಕೊನೆಗೂ ಚಿತ್ರಮಂದಿರಕ್ಕೆ ಎಂಟ್ರಿ ಕೊಡುವ ಸಮಯ ಹತ್ತಿರ ಬಂದಿದೆ. ಸಿನಿಮಾದ ಬಹುತೇಕ ಕೆಲಸಗಳು ಮುಗಿದಿದ್ದು ಅಭಿಮಾನಿಗಳ ಮುಂದೆ ಬರುವುದೊಂದೇ ಬಾಕಿ ಇದೆ.

ಕರಾವಳಿ ಹೆಸರೇ ಹೇಳುವ ಹಾಗೆ ಅಲ್ಲಿನ ಸಂಸ್ಕೃತಿ, ಸೊಗಡಿನ ಬಗ್ಗೆ ಇರುವ ಸಿನಿಮಾ. ಬೆಂಗಳೂರಿನ ದೊಡ್ಡಾಲದ ಮರದ ಬಳಿ ಸೆಟ್ ಹಾಕಿ ಕೊನೆಯ ದಿನದ ಚಿತ್ರೀಕರಣ ಮಾಡಲಾಯಿತು. ಯಕ್ಷಗಾನ ರಂಗಸ್ಥಳ, ಕರಾವಳಿ ಶೈಲಿ ಊಟ ಕೊನೆಯ ದಿನದ ಶೂಟಿಂಗ್‌ನ ಹೈಲೆಟ್ ಆಗಿತ್ತು. ಚಿತ್ರದ ಫೈಟಿಂಗ್ ದೃಶ್ಯಗಳನ್ನು 2 ಬಾರಿ ರಾಷ್ಟ್ರ ಪ್ರಶಸ್ತಿ ಗೆದ್ದಿರುವ ವಿಕ್ರಮ್ ಮೋರ್ ಸಾಹಸ ಸಂಯೋಜನೆ ಮಾಡುತ್ತಿದ್ದರು. ಪ್ರಜ್ವಲ್ ದೇವರಾಜ್ ಮಹಿಷಾಸುರನ ಅವತಾರವೆತ್ತಿದ್ದರು.

ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಪ್ರಜ್ವಲ್ ದೇವರಾಜ್, ʼನಾನೆಂದು ಈ ರೀತಿಯ ಪಾತ್ರದಲ್ಲಿ ಕಾಣಿಸಿಕೊಂಡಿರಲಿಲ್ಲ. ಸಿಕ್ಕಾಪಟ್ಟೆ ಶ್ರಮ ಹಾಕಿದ್ದೀವಿ. ಭಯಪಟ್ಟು ಮಾಡಿರುವ ಪಾತ್ರವಿದು, ತುಂಬಾ ಖುಷಿ ಇದೆ' ಎಂದು ಹೇಳಿದರು. ಇನ್ನೂ ಚಿತ್ರದ ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಮಾವೀರ ಎನ್ನುವ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ರಾಜ್ ಬಿ ಶೆಟ್ಟಿ ಪಾತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದ್ದು ಇಂಟ್ರೆಸ್ಟಿಂಗ್ ಆಗಿದೆ. ರಾಜ್ ಬಿ ಶೆಟ್ಟಿ ಎಂಟ್ರಿ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಇನ್ನೂ ಉಳಿದಂತೆ ಸಿನಿಮಾದ ಪವರ್ ಫುಲ್ ಪಾತ್ರದಲ್ಲಿ ನಟ ಮಿತ್ರ, ರಮೇಶ್ ಇಂದಿರ, ಶ್ರೀಧರ್ ಹಾಗೂ ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ. ‌

ಈ ಸುದ್ದಿಯನ್ನೂ ಓದಿ | Beauty Trend 2025: ಹುಬ್ಬಿನ ಇನ್‌ಸ್ಟಂಟ್ ಸೌಂದರ್ಯ ಹೆಚ್ಚಿಸಲು ಬಂತು ಐಬ್ರೋ ಟ್ಯಾಟೂ ಪೆನ್!

ʼಕರಾವಳಿʼ ಗುರುದತ್ ಗಾಣಿಗ ನಿರ್ದೇಶನದ ಜತೆಗೆ ವಿಕೆ ಫಿಲ್ಮಂ ಅಸೋಸಿಯೇಷನ್‌ನಲ್ಲಿ ಗಾಣಿಗ ಫಿಲ್ಮ್ಸ್‌ನಲ್ಲಿ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್‌ನಲ್ಲಿ ಸಿನಿಮಾ ಮೂಡಿಬರಲಿದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಕ್ಯಾಮರ ವರ್ಕ್ ಚಿತ್ರಕ್ಕಿದೆ.