ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Landlord Movie: ದುನಿಯಾ ವಿಜಯ್ ಪುತ್ರಿ ರಿತನ್ಯಾ ಹುಟ್ಟುಹಬ್ಬಕ್ಕೆ ʼಲ್ಯಾಂಡ್ ಲಾರ್ಡ್ʼ ಫಸ್ಟ್ ಲುಕ್ ರಿಲೀಸ್‌

Landlord Movie: ಜಡೇಶ್ ಕೆ. ಹಂಪಿ ನಿರ್ದೇಶನದ, ದುನಿಯಾ ವಿಜಯ್, ರಚಿತಾ ರಾಮ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ʼಲ್ಯಾಂಡ್ ಲಾರ್ಡ್ʼ ಚಿತ್ರದಲ್ಲಿ ದುನಿಯಾ ವಿಜಯ್ ಪುತ್ರಿ ರಿತನ್ಯಾ ವಿಜಯ್ ಸಹ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ. ರಿತನ್ಯಾ ಅವರ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ʼಲ್ಯಾಂಡ್ ಲಾರ್ಡ್ʼ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ʼಲ್ಯಾಂಡ್ ಲಾರ್ಡ್ʼ ಫಸ್ಟ್ ಲುಕ್ ರಿಲೀಸ್‌

-

Profile Siddalinga Swamy Aug 30, 2025 4:52 PM

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ʼಸಾರಥಿʼ ಚಿತ್ರವನ್ನು ನಿರ್ಮಿಸಿದ್ದ ಕೆ‌.ವಿ. ಸತ್ಯಪ್ರಕಾಶ್ ಹಾಗೂ ಹೇಮಂತ್ ಗೌಡ ಕೆ.ಎಸ್. ಅವರು ʼಸಾರಥಿ ಫಿಲಂಸ್ʼ ಮೂಲಕ ನಿರ್ಮಾಣ‌ ಮಾಡುತ್ತಿರುವ, ʼಗುರುಶಿಷ್ಯರುʼ ಚಿತ್ರದ ನಿರ್ದೇಶಕ‌ ಹಾಗೂ ʼಕಾಟೇರʼ ಚಿತ್ರದ ಕಥಾ ಲೇಖಕ ಜಡೇಶ್ ಕೆ. ಹಂಪಿ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಆಭಿಮಾನಿಗಳ ಮನ ಗೆದ್ದಿರುವ ದುನಿಯಾ ವಿಜಯ್, ರಚಿತಾ ರಾಮ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ʼಲ್ಯಾಂಡ್ ಲಾರ್ಡ್ʼ ಚಿತ್ರದಲ್ಲಿ (Landlord Movie) ದುನಿಯಾ ವಿಜಯ್ ಪುತ್ರಿ ರಿತನ್ಯಾ ವಿಜಯ್ ಸಹ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ. ಆಗಸ್ಟ್ 30 ರಿತನ್ಯ ಅವರ ಜನ್ಮದಿನ. ಅಂದು ರಿತನ್ಯಾ ಅವರ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ʼಲ್ಯಾಂಡ್ ಲಾರ್ಡ್ʼ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ರಿತನ್ಯಾ ವಿಜಯ್ ಅವರು ಭಾಗ್ಯ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ʼಲ್ಯಾಂಡ್ ಲಾರ್ಡ್ʼ ಚಿತ್ರದ ರಿತನ್ಯ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್‌ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ ಹಾಗೂ ಕುತೂಹಲ ಮೂಡಿಸಿದೆ‌. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಸ್ವಾಮಿ ಜೆ. ಗೌಡ ಛಾಯಾಗ್ರಹಣ ಹಾಗೂ ಕೆ.ಎಂ. ಪ್ರಕಾಶ್ ಅವರ ಸಂಕಲನವಿರುವ ʼಲ್ಯಾಂಡ್ ಲಾರ್ಡ್ʼ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ವರ್ಷದ ಕೊನೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Onam Fashion 2025: ಫೆಸ್ಟೀವ್ ಸೀಸನ್ ಟ್ರೆಂಡ್‌ಗೆ ಸೇರಿದ ಓಣಂ ಡಿಸೈನರ್‌ವೇರ್ಸ್