Mithya Movie: ಅಮೆಜಾನ್ ಪ್ರೈಮ್‌ನಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ʼಮಿಥ್ಯʼ
Mithya Movie: ನಟ ರಕ್ಷಿತ್ ಶೆಟ್ಟಿ ನಿರ್ಮಾಣದ, ಸುಮಂತ್ ಭಟ್ ನಿರ್ದೇಶನದ ʼಮಿಥ್ಯʼ ಚಿತ್ರ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಅಮೇಜಾನ್ ಪ್ರೈಮ್‌ನಲ್ಲಿ ನೋಡಲು ಲಭ್ಯವಿದೆ. ಚಿತ್ರದಲ್ಲಿ ಮೂರು ಮುಖ್ಯ ಪಾತ್ರಗಳಿವೆ. ಮಾಸ್ಟರ್ ಅತೀಶ್ ಎಸ್. ಶೆಟ್ಟಿ ಮಿಥುನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ತುಮ್ಮಿನಾಡು, ರೂಪ ವರ್ಕಾಡ್ ಸಹ ಮುಖ್ಯಭೂಮಿಕೆಯಲ್ಲಿದ್ದಾರೆ. ಈ ಕುರಿತ ವಿವರ ಇಲ್ಲಿದೆ.


ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ಪರಂವಃ ಪಿಕ್ಚರ್ಸ್ ಮೂಲಕ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ, ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಇತ್ತೀಚೆಗಷ್ಟೇ ರಕ್ಷಿತ್ ಶೆಟ್ಟಿ ನಿರ್ಮಾಣದ ʼಮಿಥ್ಯʼ ಎಂಬ ಚಿತ್ರ (Mithya Movie) ತೆರೆ ಕಂಡಿತ್ತು. ಹೆತ್ತವರನ್ನು ಕಳೆದುಕೊಂಡ ಮಿಥುನ್ ಎಂಬ ಹುಡುಗನ ಹೊಸ ಕನಸ್ಸಿನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನೋಡುಗರು ಫಿದಾ ಆಗಿದ್ದರು. ವಿಮರ್ಶಕರ ಪ್ರಶಂಸೆಗೂ ಪಾತ್ರವಾಗಿದ್ದ ʼಮಿಥ್ಯʼ ಚಿತ್ರ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ ಮೆಚ್ಚುಗೆ ಗಳಿಸಿದೆ. ಈಗ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಅಮೇಜಾನ್ ಪ್ರೈಮ್‌ನಲ್ಲಿ ನೋಡಲು ಲಭ್ಯವಿದೆ.
ʼಏಕಂʼ ಎಂಬ ವೆಬ್ ಸಿರೀಸ್ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಸುಮಂತ್ ಭಟ್ ʼಮಿಥ್ಯʼ ಚಿತ್ರದ ನಿರ್ದೇಶಕರು. ಚಿತ್ರದಲ್ಲಿ ಮೂರು ಮುಖ್ಯ ಪಾತ್ರಗಳಿವೆ. ಮಾಸ್ಟರ್ ಅತೀಶ್ ಎಸ್. ಶೆಟ್ಟಿ ಮಿಥುನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ತುಮ್ಮಿನಾಡು, ರೂಪ ವರ್ಕಾಡ್ ಸಹ ಮುಖ್ಯಭೂಮಿಕೆಯಲ್ಲಿದ್ದಾರೆ.
ಈ ಸುದ್ದಿಯನ್ನೂ ಓದಿ | Sling Bag Fashion: ಯುವತಿಯರ ಟ್ರಾವೆಲ್ ಫ್ಯಾಷನ್‌ಗೆ ಸಾಥ್ ನೀಡುವ ಶೋಲ್ಡರ್ ಸ್ಲಿಂಗ್ ಬ್ಯಾಗ್
ಉದಿತ್ ಕುರಾನ ಛಾಯಾಗ್ರಹಣ, ಭುವನೇಶ್ ಮಣಿವಣನ್ ಸಂಕಲನ ಹಾಗೂ ಮಿಥುನ್ ಮುಕುಂದನ್ ಸಂಗೀತ ನಿರ್ದೇಶನ ʼಮಿಥ್ಯʼ ಚಿತ್ರಕ್ಕಿದೆ.