ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pendrive Movie: ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ʼಪೆನ್‌ಡ್ರೈವ್ʼ ಚಿತ್ರ ಜು.4ಕ್ಕೆ ರಿಲೀಸ್‌

Pendrive Movie: ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ʼಬಿಗ್ ಬಾಸ್ʼ ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ ʼಪೆನ್‌ಡ್ರೈವ್ʼ ಚಿತ್ರ ಜುಲೈ 4ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ‌‌.

ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ʼಪೆನ್‌ಡ್ರೈವ್ʼ ಚಿತ್ರ ಜು.4ಕ್ಕೆ ರಿಲೀಸ್‌

Profile Siddalinga Swamy Jun 18, 2025 8:22 PM

ಬೆಂಗಳೂರು: ಆರ್‌ಎಚ್ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಎನ್. ಹನುಮಂತರಾಜು ಹಾಗೂ ಲಯನ್ ಎಸ್. ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ʼಬಿಗ್ ಬಾಸ್ʼ ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ ʼಪೆನ್‌ಡ್ರೈವ್ʼ ಚಿತ್ರದ (Pendrive Movie) ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಡಾ.ವಿ.ನಾಗೇಂದ್ರ ಪ್ರಸಾದ್ ಹಾಡುಗಳನ್ನು ಬರೆದು ಸಂಗೀತ ನೀಡಿದ್ದಾರೆ. ಆಡಿಯೋ ಬಿಡುಗಡೆ ಸಮಾರಂಭಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಪದಾಧಿಕಾರಿಗಳಾದ ಶಿಲ್ಪ ಶ್ರೀನಿವಾಸ್, ಕುಶಾಲ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ʼಪೆನ್‌ಡ್ರೈವ್ʼ ಆರಂಭವಾಗಲು ನಿರ್ಮಾಪಕ ಲಯನ್ ವೆಂಕಟೇಶ್ ಕಾರಣ. ಅನಂತರ ಹನುಮಂತರಾಜು ಅವರು ನಿರ್ಮಾಣಕ್ಕೆ ಸಾಥ್ ನೀಡಿದರು. ನಿರ್ಮಾಪಕರು ಹಾಗೂ ಚಿತ್ರತಂಡದ ಸಹಕಾರದಿಂದ ಅಂದುಕೊಂಡ ಹಾಗೆ ಸಿನಿಮಾ ಮೂಡಿಬಂದಿದೆ. ವಿ. ನಾಗೇಂದ್ರ ಪ್ರಸಾದ್ ಸಂಗೀತ ನೀಡಿರುವ ಚಿತ್ರದ ಎಲ್ಲಾ ಹಾಡುಗಳು ಚೆನ್ನಾಗಿದೆ. ನನ್ನ ಹಿಂದಿನ ಚಿತ್ರಗಳಲ್ಲೂ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಥಾಹಂದರವಿತ್ತು. ಇದರಲ್ಲೂ ಜನರು ಅದನ್ನು ನಿರೀಕ್ಷಿಸಬಹುದು‌.‌ ʼಪೆನ್‌ಡ್ರೈವ್ʼ, ಕಳೆದ ವರ್ಷ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿದ ಪದ. ನಮ್ಮ ಚಿತ್ರಕ್ಕೆ ಈ ಶೀರ್ಷಿಕೆಯಿಟ್ಟ ಮೇಲೆ‌ ಅನೇಕ ಅನಾಮಾಧೇಯ ಕರೆಗಳನ್ನು ಸ್ವೀಕರಿಸಿದ್ದೇನೆ.‌ ಈ ಶೀರ್ಷಿಕೆ ಇಟ್ಟಿದ್ದು ಏಕೆ? ಎಂಬ ಪ್ರಶ್ನೆಯನ್ನು ಸಾಕಷ್ಟು ಜನ ಕೇಳಿದ್ದಾರೆ. ಸಾಕಷ್ಟು ಅಡೆತಡೆಗಳನ್ನು ದಾಟಿ ನಮ್ಮ ಚಿತ್ರ ಜುಲೈ 4ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ‌‌. ಎಲ್ಲರೂ ನೋಡಿ ಹಾರೈಸಿ ಎಂದರು ನಿರ್ದೇಶಕ ಸೆಬಾಸ್ಟಿನ್ ಡೇವಿಡ್.

ನಾನು ಈ ಚಿತ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿ. ಒಂದೊಳ್ಳೆ ತಂಡದ ಜತೆಗೆ ಕೆಲಸ ಮಾಡಿದ್ದೇನೆ. ಕಿಶನ್ ಅವರ ಜತೆಗೆ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದೇನೆ ಎಂದು ನಟಿ ತನಿಷಾ ಕುಪ್ಪಂಡ ತಿಳಿಸಿದರು.

ʼಬಿಗ್ ಬಾಸ್ʼ ನಂತರ ನಾನು ನಟಿಸಿರುವ ಮೊದಲ ಚಿತ್ರವಿದು. ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಟ ಕಿಶನ್.

ಈ ಸುದ್ದಿಯನ್ನೂ ಓದಿ | Monsoon jewel Fashion 2025: ಮಾನ್ಸೂನ್ ಫ್ಯಾಷನ್ ಜ್ಯುವೆಲರಿಯಲ್ಲಿ ಮಿನಿ ಛತ್ರಿಗಳ ಹಂಗಾಮ!

ಹಾಡು ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಹಾಗೂ ಚಿತ್ರತಂಡದವರಿಗೆ ಧನ್ಯವಾದ ತಿಳಿಸಿ ಮಾತನಾಡಿದ ನಿರ್ಮಾಪಕರಾದ ಹನುಮಂತ ರಾಜು ಹಾಗೂ ಲಯನ್ ಎಸ್. ವೆಂಕಟೇಶ್ ಅವರು, ಚಂದನ್ ಫಿಲಂಸ್ ಮೂಲಕ ರಾಜ್ಯಾದ್ಯಂತ 150 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಜುಲೈ 4 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ಎಲ್ಲರೂ ಪ್ರೋತ್ಸಾಹ ನೀಡಿ. ಚಿತ್ರಮಂದಿರಗಳಿಗೆ ಬಂದು ಚಿತ್ರ ನೋಡಿ ಎಂದರು. ಸಂಗೀತ ನಿರ್ದೇಶಕ ಹಾಗೂ ಗೀತರಚನೆಕಾರ ವಿ. ನಾಗೇಂದ್ರ ಪ್ರಸಾದ್, ಛಾಯಾಗ್ರಾಹಕ ಪಿ.ವಿ.ಆರ್. ಸ್ವಾಮಿ, ಸಹ ನಿರ್ದೇಶಕ ನಾಗೇಶ್, ನಟ ಕರಿಸುಬ್ಬು, ಟೈಗರ್ ವೆಂಕಟೇಶ್ ಮುಂತಾದವರು ʼಪೆನ್ ಡ್ರೈವ್ʼ ಕುರಿತು ಮಾತನಾಡಿದರು.