ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pendrive Movie: ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ʼಪೆನ್‌ಡ್ರೈವ್ʼ ಚಿತ್ರ ಜು.4ಕ್ಕೆ ರಿಲೀಸ್‌

Pendrive Movie: ಖ್ಯಾತ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ, ʼಬಿಗ್ ಬಾಸ್ʼ ಖ್ಯಾತಿಯ ತನಿಷಾ ಕುಪ್ಪಂಡ ಮತ್ತು ಕಿಶನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ʼಪೆನ್‌ಡ್ರೈವ್ʼ ಚಿತ್ರ ಜುಲೈ 4 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ʼಪೆನ್‌ಡ್ರೈವ್ʼ ಚಿತ್ರ ಜು.4ಕ್ಕೆ ರಿಲೀಸ್‌

Profile Siddalinga Swamy Jul 3, 2025 3:45 PM

ಬೆಂಗಳೂರು: ಎನ್. ಹನುಮಂತರಾಜು ಹಾಗೂ ಲಯನ್ ಎಸ್. ವೆಂಕಟೇಶ್ ನಿರ್ಮಾಣದ, ಖ್ಯಾತ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ, ʼಬಿಗ್ ಬಾಸ್ʼ ಖ್ಯಾತಿಯ ತನಿಷಾ ಕುಪ್ಪಂಡ ಮತ್ತು ಕಿಶನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ʼಪೆನ್‌ಡ್ರೈವ್ʼ ಚಿತ್ರ (Pendrive Movie) ಜುಲೈ 4 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ʼಪೆನ್‌ಡ್ರೈವ್ʼ ಚಿತ್ರದ ಹಾಡುಗಳು, ಟೀಸರ್ ಹಾಗೂ ಹಾಡುಗಳು ಜನಮೆಚ್ಚುಗೆ ಪಡೆದಿದೆ. ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿರುವ ಬಹುನಿರೀಕ್ಷಿತ ಈ ಚಿತ್ರ ನೋಡುವ ಕಾತುರ ಅಭಿಮಾನಿಗಳಲ್ಲಿದೆ.

ಚಿತ್ರರಂಗದೊಂದಿಗೆ ಸುಮಾರು ಮೂವತ್ತು ವರ್ಷಗಳ ನಂಟಿರುವ ಹಾಗೂ ರಾಷ್ಟ್ರೀಯ, ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿರುವ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ಅವರೆ ʼಪೆನ್‌ಡ್ರೈವ್ʼ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ‌. ಮಾಲಾಶ್ರೀ ಅವರು ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ತನಿಷಾ ಕುಪ್ಪಂಡ ಹಾಗು ಕಿಶನ್ ಅವರು ಬಹುನಿರೀಕ್ಷಿತ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು, ಎನ್. ಹನುಮಂತರಾಜು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಈ ಸುದ್ದಿಯನ್ನೂ ಓದಿ | Jewel Fashion 2025: ಸೀಸನ್‌ನಲ್ಲಿ ಟ್ರೆಂಡಿಯಾದ ವೈವಿಧ್ಯಮಯ ಪರ್ಲ್ ನೆಕ್ಲೇಸ್‌ಗಳಿವು

ಡಾ.ವಿ. ನಾಗೇಂದ್ರಪ್ರಸಾದ್ ಸಂಗೀತ ನಿರ್ದೇಶನ ಹಾಗೂ ಪಿ.ವಿ.ಆರ್. ಸ್ವಾಮಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ನಾಗೇಶ್ ಅವರು ಸಂಕಲನ ಕಾರ್ಯ ನಿರ್ವಹಿಸುವುದರೊಂದಿಗೆ ಸಂಭಾಷಣೆಯನ್ನು ಬರೆದಿದ್ದಾರೆ‌.