Amara Premi Arun Movie: ʼಅಮರ ಪ್ರೇಮಿ ಅರುಣ್ʼ ಚಿತ್ರ ಏ.25ಕ್ಕೆ ರಿಲೀಸ್
Amara Premi Arun Movie: ಪ್ರವೀಣ್ ಕುಮಾರ್ ಜಿ. ಬರವಣಿಗೆ ಹಾಗೂ ನಿರ್ದೇಶನದ ʼಅಮರ ಪ್ರೇಮಿ ಅರುಣ್ʼ ಚಿತ್ರ ಈ ವಾರ (ಏಪ್ರಿಲ್ 25) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಳ್ಳಾರಿ ಭಾಗದ ಪ್ರೇಮ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಹರಿಶರ್ವ ಅಭಿನಯಿಸಿದ್ದಾರೆ. ನಾಯಕಿಯಾಗಿ ದೀಪಿಕಾ ಆರಾಧ್ಯ ಇದ್ದಾರೆ. ಈ ಕುರಿತ ವಿವರ ಇಲ್ಲಿದೆ.


ಬೆಂಗಳೂರು: ಒಲವು ಸಿನಿಮಾ ಲಾಂಛನದಲ್ಲಿ ಒಲವಿನ ಗೆಳೆಯರು ಒಂದಿಷ್ಟು ಜನ ಸೇರಿ ಒಲವಿನಿಂದ ನಿರ್ಮಾಣ ಮಾಡಿರುವ ಹಾಗೂ ಪ್ರವೀಣ್ ಕುಮಾರ್ ಜಿ. ಬರವಣಿಗೆ ಹಾಗೂ ನಿರ್ದೇಶನದ ʼಅಮರ ಪ್ರೇಮಿ ಅರುಣ್ʼ ಚಿತ್ರ (Amara Premi Arun Movie) ಈ ವಾರ (ಏಪ್ರಿಲ್ 25) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಳ್ಳಾರಿ ಭಾಗದ ಪ್ರೇಮ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಹರಿಶರ್ವ ಅಭಿನಯಿಸಿದ್ದಾರೆ. ನಾಯಕಿಯಾಗಿ ದೀಪಿಕಾ ಆರಾಧ್ಯ ಇದ್ದಾರೆ. ಧರ್ಮಣ್ಣ ಕಡೂರು, ಕ್ರಿತಿ ಭಟ್, ಮಹೇಶ್ ಬಂಗ್, ಅರ್ಚನಾ ಕೊಟ್ಟಿಗೆ, ರಂಜಿತಾ ಪುಟ್ಟಸ್ವಾಮಿ, ಮಂಜಮ್ಮ ಜೋಗತಿ, ರಾಧ ರಾಮಚಂದ್ರ, ಬಲ ರಾಜವಾಡಿ ಹೀಗೆ ಅನುಭವಿ ಕಲಾವಿದರ ದೊಡ್ಡ ದಂಡೆ ಈ ಚಿತ್ರದಲ್ಲಿದೆ.
ಬಳ್ಳಾರಿ ಆಸುಪಾಸಿನಲ್ಲೇ ʼಅಮರ ಪ್ರೇಮಿ ಅರುಣ್ʼ ಚಿತ್ರದ ಚಿತ್ರೀಕರಣ ನಡೆದಿದ್ದು, ಈ ಚಿತ್ರದ ಸಂಭಾಷಣೆ ಕೂಡ ಅಲ್ಲಿನ ಸೊಗಡಿನಲ್ಲೇ ಇರುತ್ತದೆ.
ಈ ಸುದ್ದಿಯನ್ನೂ ಓದಿ | Oxidised Jewel Fashion: ಡಿಫರೆಂಟ್ ಲುಕ್ ನೀಡುವ ಆಕ್ಸಿಡೈಸ್ಡ್ ಜ್ಯುವೆಲರಿಗಳಿವು
ಯೋಗರಾಜ್ ಭಟ್, ಜಯಂತ ಕಾಯ್ಕಿಣಿ ಹಾಗೂ ಪ್ರವೀಣ್ ಕುಮಾರ್ ಅವರು ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಕಿರಣ್ ರವೀಂದ್ರನಾಥ್ ಸಂಗೀತ ನೀಡಿದ್ದಾರೆ. ಡಿ ಬಿಟ್ಸ್ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಈಗಾಗಲೇ ಜನಪ್ರಿಯವಾಗಿದೆ. ಪ್ರವೀಣ್ ಎಸ್. ಛಾಯಾಗ್ರಹಣ ಹಾಗೂ ಮನು ಶೇಡ್ಗಾರ್ ಸಂಕಲನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಮಂಡ್ಯ ಮಂಜು ಕಾರ್ಯ ನಿರ್ವಹಿಸಿದ್ದಾರೆ.