ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sonu Nigam: ಕನ್ನಡ ಹಾಡು ಹೇಳಿ ಎಂದದ್ದಕ್ಕೆ ಪಹಲ್ಗಾಂ ದಾಳಿ ಲಿಂಕ್‌ ಮಾಡಿದ ಸೋನು ನಿಗಮ್!‌

ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ (Sonu Nigam) ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದ. ಅದಕ್ಕೆ ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ ಪ್ರತಿಕ್ರಿಯಿಸಿದರಲ್ಲದೆ ತಮಗೆ ಕನ್ನಡ ಮೇಲಿರುವ ಪ್ರೀತಿ, ಇಲ್ಲಿನ ಜನರ ಮೇಲಿರುವ ಗೌರವದ ಬಗ್ಗೆಯೂ ಹೇಳಿಕೊಂಡರು.

ಕನ್ನಡ ಹಾಡು ಹೇಳಿ ಎಂದದ್ದಕ್ಕೆ ಪಹಲ್ಗಾಂ ದಾಳಿ ಲಿಂಕ್‌ ಮಾಡಿದ ಸೋನು ನಿಗಮ್!‌

ಸೋನು ನಿಗಮ್

ಹರೀಶ್‌ ಕೇರ ಹರೀಶ್‌ ಕೇರ May 2, 2025 8:16 AM

ಬೆಂಗಳೂರು: ರಸಮಂಜರಿ ಕಾರ್ಯಕ್ರಮವೊಂದರಲ್ಲಿ ಕನ್ನಡ (Kannada song) ಹಾಡು ಹೇಳಿ ಎಂದಿದ್ದಕ್ಕೆ, ಇದಕ್ಕೇನೇ ಪಹಲ್ಗಾಮ್ ದಾಳಿ (Pahalgam terror attack) ನಡೆದಿದ್ದು ಎಂದು ಗಾಯಕ ಸೋನು ನಿಗಮ್ (Sonu Nigam) ಹೇಳಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡದ ಮೇಲಿರುವ ತಮ್ಮ ಪ್ರೇಮವನ್ನೂ ಅವರು ಹೇಳಿಕೊಂಡಿದ್ದಾರೆ. ಆದರೆ ಕನ್ನಡ ಪ್ರೇಮವನ್ನು ಪಹಲ್ಗಾಂ ದಾಳಿಯ ಜೊತೆಗೆ ಹೋಲಿಸಿರುವುದು ಕನ್ನಡಿಗರಿಗೆ ಇಷ್ಟವಾಗಿಲ್ಲ. ಸೋಶಿಯಲ್‌ ಮೀಡಿಯಾದಲ್ಲಿ ಹಲವು ಕನ್ನಡಪ್ರಿಯರು ಈ ಬಗ್ಗೆ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ.

ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದ. ಅದಕ್ಕೆ ಸೋನು ನಿಗಮ್ ಪ್ರತಿಕ್ರಿಯಿಸುತ್ತಾ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, ತಮಗೆ ಕನ್ನಡ ಮೇಲಿರುವ ಪ್ರೀತಿ, ಇಲ್ಲಿನ ಜನರ ಮೇಲಿರುವ ಗೌರವದ ಬಗ್ಗೆ ಹೇಳಿಕೊಂಡರು.

ನನ್ನ ವೃತ್ತಿಜೀವನದಲ್ಲಿ ನಾನು ಬೇರೆ ಬೇರೆ ಭಾಷೆಗಳಲ್ಲಿ ಹಾಡಿದ್ದೇನೆ. ಆ ಪೈಕಿ ನಾನು ಹಾಡಿದ ಅತ್ಯುತ್ತಮ ಹಾಡುಗಳು ಕನ್ನಡದಲ್ಲಿವೆ. ನಾನು ಕರ್ನಾಟಕಕ್ಕೆ ಬಂದಾಗಲೆಲ್ಲಾ ತುಂಬಾ ಪ್ರೀತಿ, ಗೌರವದಿಂದ ಬರುತ್ತೇನೆ. ನೀವೆಲ್ಲ ನನ್ನನ್ನು ನಿಮ್ಮ ಕುಟುಂಬದವರಂತೆ ನೋಡಿಕೊಂಡಿದ್ದೀರಿ. ಪ್ರತಿ ಬಾರಿ ನಾನು ಯಾವುದೇ ಕಾರ್ಯಕ್ರಮಕ್ಕೆ ಹೋದಾಗಲೂ, ಯಾರಾದರೂ ಕನ್ನಡ ಎಂದು ಕೂಗಿದಾಗ ಅವರಿಗಾಗಿ ಒಂದು ಸಾಲು ಕನ್ನಡ ಹಾಡನ್ನಾದರೂ ಹಾಡಿರುತ್ತೇನೆ. ಆ ಹುಡುಗನ ವಯಸ್ಸಿಗಿಂತ ಮೊದಲಿನಿಂದಲೂ ನಾನು ಕನ್ನಡ ಹಾಡು ಹಾಡುತ್ತಿದ್ದೇನೆ. ಆದರೆ ಕನ್ನಡ, ಕನ್ನಡ ಎಂದು ಕಿರುಚಿಕೊಂಡು ಆ ಹುಡುಗ ಹೇಳಿದ್ದು ನನಗೆ ಇಷ್ಟವಾಗಲಿಲ್ಲ. ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು ಎಂದು ಹೇಳಿದರು.

ಸೋನು ನಿಗಮ್ ಮಾತಿಗೆ ಕನ್ನಡಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಕನ್ನಡ ಹಾಡುವಂತೆ ಹೇಳಿದ್ದಕ್ಕೂ, ಭಯೋತ್ಪಾದಕರ ದಾಳಿಗೂ ಏನು ಸಂಬಂಧ? ಎಂದು ಆಕ್ರೋಶ ಹೊರಹಾಕಿದ್ದಾರೆ. ಸೋನು ನಿಗಮ್‌ರನ್ನು ಕನ್ನಡ ಚಿತ್ರೋದ್ಯಮದಿಂದ ದೂರ ಇಡಿ ಹಾಗೂ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Viral News: ಸಿಂಗರ್‌ ಸೋನು ನಿಗಮ್ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ