X&Y Movie: ʼರಾಮಾ ರಾಮಾ ರೇʼ ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ದೇಶನ, ನಟನೆಯ ʼX&Yʼ ಚಿತ್ರ ಜೂ.26ರಂದು ರಿಲೀಸ್
X&Y Movie: ʼರಾಮಾ ರಾಮಾ ರೇʼ ಖ್ಯಾತಿಯ ಡಿ. ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ ʼX&Yʼ ಚಿತ್ರ ಈ ವಾರ ಜೂನ್ 26ರಂದು ಗುರುವಾರ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ.


ಬೆಂಗಳೂರು: ʼರಾಮಾ ರಾಮಾ ರೇʼ ಖ್ಯಾತಿಯ ಡಿ. ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ ʼX&Yʼ ಚಿತ್ರ (X&Y Movie) ಈ ವಾರ ಜೂನ್ 26ರಂದು ಗುರುವಾರ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಜನಮನ್ನಣೆ ಪಡೆದಿರುವ ʼರಾಮಾ ರಾಮಾ ರೇʼ, ʼಒಂದಲ್ಲಾ ಎರಡಲ್ಲಾʼ ಮತ್ತು ʼಮ್ಯಾನ್ ಆಫ್ ದಿ ಮ್ಯಾಚ್ʼ ಚಿತ್ರಗಳನ್ನು ನಿರ್ದೇಶಿಸಿರುವ ಡಿ. ಸತ್ಯಪ್ರಕಾಶ್ ಅವರಿಗೆ ʼX&Yʼ ನಾಲ್ಕನೇ ನಿರ್ದೇಶನದ ಚಿತ್ರ. ಈಗಾಗಲೇ ಪೋಸ್ಟರ್, ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನರನ್ನು ತಲುಪಿರುವ ʼX&Yʼ ಚಿತ್ರ ಈ ವಾರ ತೆರೆಗೆ ಬರುತ್ತಿದ್ದು, ಈ ಚಿತ್ರ ಕೂಡ ಪ್ರೇಕ್ಷಕರ ಮನ ಗೆಲ್ಲಲ್ಲಿದೆ ಎಂಬ ಅಭಿಪ್ರಾಯ ಚಿತ್ರತಂಡದ್ದು.

ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಬಿ.ಎಸ್. ಕೆಂಪರಾಜು, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಅವರ ಕಲಾ ನಿರ್ದೇಶನವಿದೆ. ಸತ್ಯ ಪಿಕ್ಚರ್ಸ್ ನಿರ್ಮಾಣದ ʼX&Yʼ ಚಿತ್ರದ ತಾರಾಬಳಗದಲ್ಲಿ ಬೃಂದಾ ಆಚಾರ್ಯ, ಡಿ. ಸತ್ಯಪ್ರಕಾಶ್, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ, ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಮುಂತಾದವರಿದ್ದಾರೆ.
ಟ್ರೈಲರ್ನಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದ ಚಿತ್ರ
ಬೆಂಗಳೂರು: ʼರಾಮಾ ರಾಮಾ ರೇʼ ಖ್ಯಾತಿಯ ಡಿ. ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜತೆಗೆ ಪ್ರಮುಖ ಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ ʼX&Yʼ ಚಿತ್ರ (X&Y Movie) ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗೆ ಟ್ರೈಲರ್ ಬಿಡುಗಡೆಯಾಗಿ, ಪ್ರೇಕ್ಷಕರ ಗಮನ ಸೆಳೆದಿತ್ತು. ಈ ಮೂಲಕ ಚಿತ್ರವನ್ನು ನೋಡುವ ಕಾತುರ ಹೆಚ್ಚಿಸಿತ್ತು. ವಿಭಿನ್ನ ಕಂಟೆಂಟ್ ಹೊಂದಿರುವ ಈ ಚಿತ್ರದ ಟ್ರೈಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ, ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಈ ಸುದ್ದಿಯನ್ನೂ ಓದಿ | Jumka Fashion 2025: ಮಾನಿನಿಯರ ಮನ ಗೆದ್ದ ಬ್ಲ್ಯಾಕ್ ಮೆಟಲ್ ಜುಮಕಿಗಳು