About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಚಿನ್ನದ ಹುಡುಗಿ ಪೂವಮ್ಮಗೆ 40 ಲಕ್ಷ ರು. ಚೆಕ್ ಜತೆಗೆ ನಿವೇಶನದ ಭರವಸೆ: ಸಿಎಂ

ಮುಖ್ಯ ಮಂತ್ರಿ ಕುಮಾರ ಸ್ವಾಮಿಯಿಂದ ಪೂವಮ್ಮಗೆ ಸನ್ಮಾನ

ಮಂಗಳೂರು: ರಾಜ್ಯ ಮತ್ತು ರಾಷ್ಟ್ರದ ಗೌರವವನ್ನು ಏಷ್ಯನ್ ಕ್ರೀಡಾಕೂಟದಲ್ಲಿ ಎತ್ತಿ ಹಿಡಿದ ರಾಜ್ಯದ ಪ್ರತಿಭೆ ಪೂವಮ್ಮಗೆ ಮುಖ್ಯ ಮಂತ್ರಿ ಕುಮಾರ ಸ್ವಾಮಿ ಅವರು ಸನ್ಮಾನಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಯಲ್ಲೇ ಆಯೋಜಿಸಲಾದ ಸಭೆಯ ಸಾಧಕಿ ಪೂವಮ್ಮ ಅವರು ಚಿನ್ನದ ಪದಕ ಪಡೆದುದಕ್ಕೆ 25 ಲಕ್ಷ ರು. ಹಾಗೂ ಬೆಳ್ಳಿ ಪದಕ ಪಡೆದುದಕ್ಕೆ ರು. 15 ಲಕ್ಷ ಒಟ್ಟು 40 ಲಕ್ಷ ರು.ಗಳ ಚೆಕ್ ಜತೆಗೆ ನಿವೇಶನದ ಭರವಸೆ ನೀಡಿದ ಮುಖ್ಯಮಂತ್ರಿಗಳು ಹೃದಯಸ್ಪರ್ಶಿ ಅಭಿನಂದನೆಯನ್ನು ಕ್ರೀಡಾ ಸಾಧಕಿಗೆ ಸಲ್ಲಿಸಿದರು.

ಶುಕ್ರವಾರ ಮುಖ್ಯಮಂತ್ರಿಗಳು ಬೆಳಗ್ಗೆ ಜಿಲ್ಲೆಗೆ ಆಗಮಿಸಿದ ವೇಳೆ ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕ್ರೀಡಾಳುವಿಗೆ ಗೌರವ ನೀಡುವ ಬಗ್ಗೆ ನಿರ್ಧರಿಸಲಾಯಿತು. ಈ ಅಭಿನಂದನೆ ರಾಜ್ಯದ ಸ್ಪೂರ್ತಿಯಾಗಲಿ ಎಂದ ಮುಖ್ಯಮಂತ್ರಿಗಳು, ಕ್ರೀಡಾ ಸಾಧಕರಿಗೆ ಇನ್ನಷ್ಟು ಪ್ರೋತ್ಸಾಹ ನೀಡಲು ಸರಕಾರ ಬದ್ಧವಾಗಿದೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಪೂವಮ್ಮ ಅವರು, ಇಷ್ಟು ತುರ್ತು ಸಮಯದಲ್ಲಿ ತನ್ನ ಸಾಧನೆಗೆ ನೀಡಿದ ಗೌರವಕ್ಕೆ ತಾನು ಅನಂತಾನಂತ ಧನ್ಯವಾದಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸುವುದಾಗಿ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಜಯಮಾಲಾ ಅವರು ಶುಭಹಾರೈಸಿದರು. ಸಂಸದ ನಳಿನ್ ಕುಮಾರ್ ಕಟೀಲ್. ಎಂಎಲ್ಸಿ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಜನಪ್ರತಿನಿಧಿಗಳು, ಅಧಿಕಾರಿಳಿ

Tags

Related Articles

Leave a Reply

Your email address will not be published. Required fields are marked *

Language
Close