About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಸೆ.10 ರಿಂದ ಸಿಎಂ ಉತ್ತರ ಕರ್ನಾಟಕ ಪ್ರವಾಸ

ಬೆಂಗಳೂರು: ಉತ್ತರ ಕರ್ನಾಟಕದ ಜನತೆಯ ಸಮಸ್ಯೆ, ಬೇಡಿಕೆಗಳನ್ನು ಆಲಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೆ.10 ರಿಂದ 15ರ ವರೆಗೆ ಈ ಭಾಗದ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಜಿಲ್ಲೆಯ ಅಭಿವೃದ್ಧಿಯೇ ಸರಕಾರದ ಮುಖ್ಯ ಧ್ಯೇಯ. ಐದು ದಿನಗಳ ಪ್ರವಾಸದಲ್ಲಿ ಈ ಭಾಗದ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದೇನೆ ಎಂದು ತಿಳಿಸಿದರು.

ಇತ್ತೀಚೆಗೆ ಉತ್ತರ ಕರ್ನಾಟಕವನ್ನು ಮುಖ್ಯಮಂತ್ರಿ ಕಡೆಗಣಿಸುತ್ತಿದ್ದಾರೆ ಎಂಬ ವಿವಾದ ಸೃಷ್ಟಿಯಾಗಿತ್ತು. ಈ ಸಂದರ್ಭದಲ್ಲಿ ಅವರು ನೀಡಿದ್ದ ಭರವಸೆಯಂತೆ ತಿಂಗಳಿಗೊಮ್ಮೆ ಈ ಪ್ರವಾಸ ಕೈಗೊಳ್ಳಲಿದ್ದಾರೆ. ಈ ತಿಂಗಳ ಸೆ.10ರಿಂದ 6 ದಿನಗಳ ಕಾಲ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಸಿಎಂ ಪ್ರವಾಸ ಮಾಡಲಿದ್ದಾರೆ. ಪ್ರವಾಸದ ವೇಳೆ ಈ ಭಾಗದ ಜನತೆಯ ಸಮಸ್ಯೆಗಳನ್ನು ಆಲಿಸಲಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close