About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಶ್ರೀಕೃಷ್ಣ ಮಠಕ್ಕೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಭೇಟಿ

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರಿಶೀಲನೆಗಾಗಿ ಶುಕ್ರವಾರ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶ್ರೀಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನದ ಬಳಿಕ ಪರ್ಯಾಯ ಪಲಿಮಾರು ವಿದ್ಯಾಧೀಶ ಶ್ರೀಗಳ ಆರ್ಶೀವಾದ ಪಡೆದರು.

ಮಠಕ್ಕೆ ಆಗಮಿಸಿದ ಸಿಎಂ ಕುಮಾರಸ್ವಾಮಿ ಅವರನ್ನು ಪರ್ಯಾಯ ಶ್ರೀಗಳು ದೇವರ ದರ್ಶನ ಮಾಡಿಸಿ, ಅನುಗ್ರಹ ಮಂತ್ರಾಕ್ಷತೆ ಹಾರೈಸಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಉಡುಪಿಗೆ ಆಗಮಿಸಿದ ಸಿಎಂ ಅವರನ್ನು ಹೆಜಮಾಡಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ, ಕಾರ್ಯಾಧ್ಯಕ್ಷ ವಾಸುದೇವ ರಾವ್ , ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಇದ್ದರು.

Tags

Related Articles

Leave a Reply

Your email address will not be published. Required fields are marked *

Language
Close