About Us Advertise with us Be a Reporter E-Paper

Breaking Newsರಾಜ್ಯ

ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಬೆಳಗಾವಿ: ನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಿವಿಲ್ ನಾಲ್ಕನೇ ಸೆಮಿಸ್ಟರ್ ಓದುತ್ತಿದ್ದ ವಿದ್ಯಾರ್ಥಿ ಕಾಲೇಜಿನ ಮೇಲ್ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಗ್ಗೆ 10.30ರ ಸುಮಾರಿಗೆ ನಡೆದಿದೆ.

ನಾಲ್ಕನೇ ಮಹಡಿಯಿಂದ ಬಿದ್ದು ಶಿವಪ್ರಸಾದ ಪವಾರ(18) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಖಾಸಗಿ ಹೋಟೆಲ್‌‍ನಲ್ಲಿ ಕಳೆದ ಒಂದು ತಿಂಗಳ ಹಿಂದೆ ಕೆಲಸಕ್ಕೆ ಸೇರಿಕೊಂಡಿದ್ದ. ಕೆಲಸದ ಜತೆಗೆ ಕಾಲೇಜುಗೆ ಹೋಗುತ್ತಿದ್ದ. ಬೆಳಗ್ಗೆ ಎಂದಿನಂತೆ ತನ್ನ ಸಹಪಾಠಿಗಳೊಂದಿಗೆ ಆಟವಾಡಿದ್ದಾನೆ. ಏಕಾಏಕಿ 10.30ಕ್ಕೆ ಕಾಲೇಜಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಖಡೇಬಜಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close