ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಎಲ್‌ಪಿಜಿ ವಿತರಣೆ ಬಗ್ಗೆ ದೈನಂದಿನ ಮಾಹಿತಿ, ಕಾಳ ಸಂತೆಯಲ್ಲಿ ಮಾರಾಟ ವಿರುದ್ಧ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ

ಇರಾನ್ ವಿರುದ್ಧ ಇಸ್ರೇಲ್ ಮತ್ತು ಯುಎಸ್ ಸೇನಾ ಪಡೆಯು ದಾಳಿ ನಡೆಸಿದ ಪರಿಣಾಮ ದೇಶದಲ್ಲಿ ಉಂಟಾಗಿರುವ ಎಲ್‌ಪಿಜಿ ಕೊರತೆಯನ್ನು ನೀಗಿಸಲು ಸರ್ಕಾರ ನಿರಂತರ ಎಚ್ಚರಿಕೆ ವಹಿಸುತ್ತಿದೆ. ಈ ನಿಟ್ಟಿನಲ್ಲಿ ಈಗ ಎಲ್‌ಪಿಜಿ ವಿತರಣೆ ಬಗ್ಗೆ ದೈನಂದಿನ ಮಾಹಿತಿ ಪಡೆಯಲು ಮತ್ತು ಕಾಳ ಸಂತೆಯಲ್ಲಿ ಮಾರಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.

ಎಲ್‌ಪಿಜಿ ಭೀತಿ ಕಡಿಮೆ ಮಾಡಲು ಸರ್ಕಾರದಿಂದ ದಿಟ್ಟ ಕ್ರಮ

ಸಂಗ್ರಹ ಚಿತ್ರ -

ನವದೆಹಲಿ: ಎಲ್‌ಪಿಜಿ ಸಿಲಿಂಡರ್ (LPG distribution) ಎಲ್ಲಿಂದ ಎಲ್ಲಿಗೆ ಎಷ್ಟು ಪೂರೈಕೆಯಾಗುತ್ತಿದೆ ಎನ್ನುವ ದೈನಂದಿನ ಮಾಹಿತಿ ಮೇಲೆ ಕೇಂದ್ರ ಸರ್ಕಾರ (central government) ಸಂಪೂರ್ಣ ನಿಗಾ ವಹಿಸಲಿದೆ. ಅಲ್ಲದೇ ಕಾಳಸಂತೆಯಲ್ಲಿ (Black Market) ಎಲ್‌ಪಿಜಿ ಮಾರಾಟವಾದರೆ ಅದಕ್ಕೆ ಸಂಬಂಧಪಟ್ಟವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ (Ministry of Petroleum and Natural Gas) ತಿಳಿಸಿದೆ. ಇರಾನ್ (Iran war effect) ವಿರುದ್ಧ ಇಸ್ರೇಲ್ ಮತ್ತು ಯುಎಸ್ ಸೇನಾ ಪಡೆಯು ದಾಳಿ ನಡೆಸಿದ ಬಳಿಕ ದೇಶದಲ್ಲಿ ತೈಲ ಕೊರತೆ ಅಷ್ಟಾಗಿ ಬಾಧಿಸದೇ ಇದ್ದರೂ ಎಲ್‌ಪಿಜಿ ತೊಂದರೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಈ ನಿಟ್ಟಿನಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿದೆ.

ದೇಶಾದ್ಯಂತ ಎಲ್‌ಪಿಜಿ ಕೊರತೆಯ ಬಗ್ಗೆ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಇದನ್ನು ನಿವಾರಿಸುವ ಸಲುವಾಗಿ ಸರ್ಕಾರ ಈಗ ಎಲ್‌ಪಿಜಿಯ ದೈನಂದಿನ ಮಾಹಿತಿಯನ್ನು ಪಡೆಯಲಿದೆ. ಅಲ್ಲದೇ ಕಾಳಸಂತೆಯಲ್ಲಿ ಎಲ್‌ಪಿಜಿ ಮಾರಾಟದ ವಿರುದ್ಧ ಕಠಿಣ ಕ್ರಮವನ್ನು ಸರ್ಕಾರ ಕೈಗೊಳ್ಳಲಿದೆ.

ಅಮೆಜಾನ್ ಬಿಸಿನೆಸ್ ಎಂಡ್ ಆಫ್ ಫೈನಾನ್ಷಿಯಲ್ ಇಯರ್ ಸೇಲ್

ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ಎಲ್‌ಪಿಜಿ ವಿತರಣಾ ವ್ಯವಸ್ಥೆಯ ಮೇಲೆ ಒತ್ತಡ ಹೆಚ್ಚಾಗಿದೆ. ಇದರಿಂದ ವದಂತಿಗಳು ಹಬ್ಬುತ್ತಿದ್ದು, ಸಾರ್ವಜನಿಕರಲ್ಲಿ ಅನಗತ್ಯ ಆತಂಕವನ್ನು ಉಂಟುಮಾಡಿವೆ. ಇದರಿಂದ ಹಲವಾರು ಪ್ರದೇಶಗಳಲ್ಲಿ ಹೆಚ್ಚುವರಿ ಸಂಗ್ರಹಕ್ಕೆ ಜನರು ಮುಗಿ ಬೀಳುತ್ತಿದ್ದಾರೆ.

ಇಸ್ರೇಲ್ ಮತ್ತು ಯುಎಸ್ ಸೇನಾ ಪಡೆಯು ಕಳೆದ ಫೆಬ್ರವರಿ ತಿಂಗಳಾಂತ್ಯದಿಂದ ಇರಾನ್ ಮೇಲೆ ನಡೆಸುತ್ತಿರುವ ದಾಳಿಯ ಪರಿಣಾಮವಾಗಿ ಜಾಗತಿಕ ಇಂಧನ ಬಿಕ್ಕಟ್ಟು ಕಾಣಿಸಿಕೊಂಡಿದೆ. ಇದರಿಂದ ಭಾರತದಲ್ಲಿ ಮುಖ್ಯವಾಗಿಎಲ್‌ಪಿಜಿ ಸಿಲಿಂಡರ್‌ ಕೊರತೆ ತೀವ್ರವಾಗಿ ಬಾಧಿಸಿದೆ ಎನ್ನುವ ವದಂತಿಗಳು ಮತ್ತು ತಪ್ಪು ಮಾಹಿತಿಯು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು, ಈ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ.

ದೈನಂದಿನ ಪತ್ರಿಕಾಗೋಷ್ಠಿಗಳನ್ನು ನಡೆಸಿ ಸಾಮಾಜಿಕ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಎಲ್‌ಪಿಜಿ ಲಭ್ಯತೆ ಕುರಿತು ನಿಖರ ಮತ್ತು ಸಕಾಲಿಕ ಮಾಹಿತಿಯನ್ನು ಹಂಚಿಕೊಳ್ಳುವಂತೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಆದೇಶಿಸಿದೆ.

ಹೊರ್ಮುಜ್‌ ಜಲಸಂಧಿ ದಾಟಲು ಭಾರತ ಪಾವತಿಸುವ ಟೋಲ್‌ ಮೊತ್ತ ಎಷ್ಟು? ಸಂದೇಹಕ್ಕೆ ಕೇಂದ್ರದಿಂದ ಸ್ಪಷ್ಟನೆ

ಈ ಹಿನ್ನೆಲೆಯಲ್ಲಿ ಪ್ರಸ್ತುತ ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಮತ್ತು ಕೇರಳ ಸೇರಿದಂತೆ 17 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಡುಗೆ ಅನಿಲ ಪರಿಸ್ಥಿತಿಯ ಕುರಿತು ಮಾಹಿತಿ ನೀಡಲಾಗುತ್ತಿದೆ.

ದೇಶದಲ್ಲಿ ಅಡುಗೆ ಅನಿಲದ ಕೊರತೆ ಇಲ್ಲ. ಆದರೆ ಇವುಗಳ ಸಮರ್ಪಕ ವಿತರಣೆಯಾಗಬೇಕಿದೆ. ಇದಕ್ಕಾಗಿ ಜನರು ವದಂತಿಗಳಿಗೆ ಕಿವಿಗೊಡಬಾರದು. ಎಂಬುದಾಗಿ ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.