ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gold Rate Today 5th March 2026: ಮತ್ತೆ ಕಡಿಮೆಯಾಯ್ತು ಚಿನ್ನದ ದರ; ಇಂದು ಇಳಿಕೆಯಾಗಿದ್ದು 900 ರುಪಾಯಿ

Gold Price Today: ಕೆಲವು ದಿನಗಳಿಂದ ಇಳಿಕೆಯ ಹಾದಿಯಲ್ಲಿರುವ ಚಿನ್ನದ ದರ ಗುರುವಾರ ಕೆಳಮುಖವಾಗಿ ಸಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 90 ರುಪಾಯಿ ಇಳಿಕೆಯಾಗಿ 14,990 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 98 ರುಪಾಯಿ ಕಡಿಮೆಯಾಗಿದ್ದು, 16,353 ರುಪಾಯಿಗೆ ಕುಸಿದಿದೆ.

ಮತ್ತೆ ಕಡಿಮೆಯಾಯ್ತು ಚಿನ್ನದ ದರ

ಸಾಂದರ್ಭಿಕ ಚಿತ್ರ. -

Ramesh Ballamoole
Ramesh Ballamoole Mar 5, 2026 1:46 PM

ಬೆಂಗಳೂರು, ಮಾ. 5: ಕೆಲವು ದಿನಗಳಿಂದ ಇಳಿಕೆಯ ಹಾದಿಯಲ್ಲಿರುವ ಚಿನ್ನದ ದರ ಗುರುವಾರವೂ (ಮಾರ್ಚ್‌ 5) ಕೆಳಮುಖವಾಗಿ ಸಾಗಿದೆ (Gold Rate Today 3rd March 2026). ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 90 ರುಪಾಯಿ ಇಳಿಕೆಯಾಗಿ 14,990 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 98 ರುಪಾಯಿ ಕಡಿಮೆಯಾಗಿದ್ದು, 16,353 ರುಪಾಯಿಗೆ ಕುಸಿದಿದೆ. ಆ ಮೂಲಕ ಯುದ್ಧದ ನಡುವೆಯೂ ಖರೀದಿದಾರರಿಗೆ ಗುಡ್‌ನ್ಯೂಸ್‌ ನೀಡಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,19,920 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,49,900 ರುಪಾಯಿ ಹಾಗೂ 100 ಗ್ರಾಂಗೆ 14,99,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,30,824 ರುಪಾಯಿ, 10 ಗ್ರಾಂಗೆ ನೀವು 1,63,530 ರುಪಾಯಿ ಹಾಗೂ 100 ಗ್ರಾಂಗೆ ನೀವು 16,35,300 ರುಪಾಯಿ ನೀಡಬೇಕಾಗುತ್ತದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,120 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 16,495 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,990 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 16,353 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,005 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 16,368 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,990 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 16,353 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,990 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 16,353 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ದರ ಪಟ್ಟಿ ಹೀಗಿದೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 15,120 ರುಪಾಯಿ 16,495 ರುಪಾಯಿ
ಮುಂಬೈ 14,990 ರುಪಾಯಿ 16,353 ರುಪಾಯಿ
ದೆಹಲಿ 15,005 ರುಪಾಯಿ 16,368 ರುಪಾಯಿ
ಕೋಲ್ಕತ್ತಾ 14,990 ರುಪಾಯಿ 16,353 ರುಪಾಯಿ
ಹೈದರಾಬಾದ್‌ 14,990 ರುಪಾಯಿ 16,353 ರುಪಾಯಿ

ಬೆಳ್ಳಿ ದರ

ಇತ್ತ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 285 ರುಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 2,850 ರುಪಾಯಿ ಹಾಗೂ 1 ಕೆಜಿಗೆ 2,85,000 ರುಪಾಯಿ ಕಂಡುಬಂದಿದೆ.

ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.