ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

PM Kisan Scheme: ಜೂನ್‌ನಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ 19ನೇ ಕಂತು ಬಿಡುಗಡೆ? ಅರ್ಜಿ ಸಲ್ಲಿಕೆ ಹೇಗೆ?

ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ 20ನೇ ಕಂತಿನ ಹಣವನ್ನು ಜೂನ್‌ ತಿಂಗಳಲ್ಲಿ ವಿತರಿಸುವ ನಿರೀಕ್ಷೆಯಿದೆ. ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಪಿಎಂ ಕಿಸಾನ್ ಪಾವತಿಗಳನ್ನು ಸಾಮಾನ್ಯವಾಗಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ, ಸ್ಥಿರವಾದ ವೇಳಾಪಟ್ಟಿಯನ್ನು ಅನುಸರಿಸಿ ನೀಡಲಾಗುತ್ತದೆ.

ಜೂನ್‌ನಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ 19ನೇ ಕಂತು ಬಿಡುಗಡೆ?

Profile Rakshita Karkera Apr 28, 2025 12:33 PM

ನವದೆಹಲಿ: ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2019ರ ಫೆಬ್ರವರಿ 24ರಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ (PM Kisan Scheme) ನಿಧಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಮೂಲಕ ಅರ್ಹ ರೈತರು ವಾರ್ಷಿಕವಾಗಿ 6,000 ರೂ.ಗಳನ್ನು ಮೂರು ಸಮಾನ ಕಂತುಗಳಲ್ಲಿ 2 ಸಾವಿರ ರೂ. ಗಳಂತೆ ನೀಡಲಾಗುತ್ತದೆ. ಸದ್ಯ ಈ ಯೋಜನೆಯ ಅನುಗುಣವಾಗಿ ಈವರೆಗೆ 19 ಕಂತು ಜಾರಿಯಾಗಿದ್ದು, ಫಲಾನುಭವಿಗಳು ಈಗ ಯೋಜನೆಯ 20ನೇ ಕಂತಿಗಾಗಿ ಕಾಯುತ್ತಿದ್ದಾರೆ.

20ನೇ ಕಂತಿನ ಹಣವನ್ನು ಜೂನ್‌ ತಿಂಗಳಲ್ಲಿ ವಿತರಿಸುವ ನಿರೀಕ್ಷೆಯಿದೆ. ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಪಿಎಂ ಕಿಸಾನ್ ಪಾವತಿಗಳನ್ನು ಸಾಮಾನ್ಯವಾಗಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ, ಸ್ಥಿರವಾದ ವೇಳಾಪಟ್ಟಿಯನ್ನು ಅನುಸರಿಸಿ ನೀಡಲಾಗುತ್ತದೆ. ಪ್ರಧಾನಮಂತ್ರಿ ಕಿಸಾನ್ ಯೋಜನೆಯ 19 ನೇ ಕಂತನ್ನು ಫೆಬ್ರವರಿ 24, 2025 ರಂದು ಬಿಡುಗಡೆ ಮಾಡಲಾಯಿತು, ಇದು 2.4 ಕೋಟಿ ಮಹಿಳಾ ರೈತರೂ ಸೇರಿದಂತೆ 9.8 ಕೋಟಿಗೂ ಹೆಚ್ಚು ರೈತರಿಗೆ ಪ್ರಯೋಜನವನ್ನು ನೀಡಿತ್ತು.

ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡುವುದು ಹೇಗೆ?

ಹೊಸ ಅಧಿಸೂಚನೆಗಳನ್ನು ಪಡೆಯಲು ಹಾಗೂ ಹಣ ಜಮಾವಣೆಯ ಬಗ್ಗೆ ತಿಳಿಯಲು ಮೊಬೈಲ್ ಸಂಖ್ಯೆಯನ್ನು ಪಿಎಂ ಕಿಸಾನ್ ಪೋರ್ಟಲ್‌ಗೆ ಲಿಂಕ್ ಮಾಡುವುದು ಬಹಳ ಮುಖ್ಯ. ಒಟಿಪಿ OTP ಆಧಾರಿತ eKYC ಅನ್ನು ಪೂರ್ಣಗೊಳಿಸಲು ಮೊಬೈಲ್‌ ಸಂಖ್ಯೆ ಲಿಂಕ್‌ ಮಾಡುವುದು ಕಡ್ಡಾಯವಾಗಿದೆ.

  • ಮೊಬೈಲ್‌ ಸಂಖ್ಯೆಯನ್ನು ಲಿಂಕ್ ಮಾಡಲು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ (CSC) ಭೇಟಿ ನೀಡಿ ಅಥವಾ PM ಕಿಸಾನ್ ವೆಬ್‌ಸೈಟ್‌ಗೆ ಲಾಗಿನ್ ಮಾಡಿ: https://pmkisan.gov.in
  • ಮೊಬೈಲ್ ಸಂಖ್ಯೆಯನ್ನು ನವೀಕರಿಸಿ ಎಂಬುದನ್ನು ಆಯ್ಕೆ ಮಾಡಿ.
  • ನೋಂದಾಯಿತ ಆಧಾರ್ ಸಂಖ್ಯೆ ಮತ್ತು ಹೊಸ ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ಅಪ್‌ಡೇಟ್‌ ಮಾಡಿ. ಅಷ್ಟೇ ಮೊಬೈಲ್‌ ಸಂಖ್ಯೆ ನೋಂದಣಿಯಾಗಿರುತ್ತದೆ.

ಪಿಎಂ ಕಿಸಾನ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲು ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್‌ pmkisan.gov.in ಗೆ ಭೇಟಿ ನೀಡಬೇಕು.
  • ಹೊಸ ರೈತರು ನೋಂದಣಿ ಬಟನ್‌' ಮೇಲೆ ಕ್ಲಿಕ್ ಮಾಡಿ.
  • ನಂತರ ಆಧಾರ್ ಸಂಖ್ಯೆ, ರಾಜ್ಯ, ಜಿಲ್ಲೆ ಮತ್ತು ವೈಯಕ್ತಿಕ ಬ್ಯಾಂಕ್ ಮಾಹಿತಿ ಸೇರಿದಂತೆ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.
  • ನಂತರ ಫಾರ್ಮ್ ಅನ್ನು ಸಲ್ಲಿಸಿ ಮತ್ತು ಸೇವ್‌ ಮಾಡಿ ಇಟ್ಟುಕೊಳ್ಳಿ.
  • ನಿಮ್ಮ ಅರ್ಜಿ ಸಲ್ಲಿಕೆ ಆದ ನಂತರ ಅನುಮೋದನೆ ನೀಡುವ ಮೊದಲು ಸ್ಥಳೀಯ ಅಧಿಕಾರಿಗಳು ಅದನ್ನು ಪರಿಶೀಲಿಸುತ್ತಾರೆ.
  • ಅರ್ಜಿಯ ಸ್ಥಿತಿಯನ್ನು ಹೀಗೆ ಪರಿಶೀಲಿಸಿ
  • ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ — pmkisan.gov.in
  • ಈಗ, ಪುಟದ ಬಲಭಾಗದಲ್ಲಿರುವ ‘ನಿಮ್ಮ ಸ್ಥಿತಿಯನ್ನು ತಿಳಿದುಕೊಳ್ಳಿ’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಕ್ಯಾಪ್ಚಾ ಕೋಡ್ ಅನ್ನು ಭರ್ತಿ ಮಾಡಿ ಮತ್ತು ‘ಡೇಟಾ ಪಡೆಯಿರಿ’ ಆಯ್ಕೆಯನ್ನು ಆರಿಸಿ
  • ನಿಮ್ಮ ಫಲಾನುಭವಿ ಸ್ಥಿತಿ ಪರದೆಯ ಮೇಲೆ ಬರುತ್ತದೆ.

ಈ ಸುದ್ದಿಯನ್ನೂ ಓದಿ: ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ 'ಸೇಹತ್' ಯೋಜನೆ ಉದ್ಘಾಟನೆ

PM-KISAN: ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ?

ಹಂತ 1: PM ಕಿಸಾನ್ ಅಧಿಕೃತ ವೆಬ್‌ಸೈಟ್ www.pmkisan.gov.in ಗೆ ಭೇಟಿ ನೀಡಿ

ಹಂತ 2: ‘ಫಲಾನುಭವಿಗಳ ಪಟ್ಟಿ’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.

ಹಂತ 3: ರಾಜ್ಯ, ಜಿಲ್ಲೆ, ಉಪ-ಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ಕೆ ಮಾಡುವಂತಹ ಡ್ರಾಪ್-ಡೌನ್‌ನಿಂದ ವಿವರಗಳನ್ನು ಆಯ್ಕೆಮಾಡಿ

ಹಂತ 4: ‘ವರದಿ ಪಡೆಯಿರಿ’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಇದರ ನಂತರ, ಫಲಾನುಭವಿಗಳ ಪಟ್ಟಿ ಅಲ್ಲಿ ಕಾಣುತ್ತದೆ