About Us Advertise with us Be a Reporter E-Paper

Breaking Newsರಾಜ್ಯ

ಸಾಹಿತಿ ಗಿರೀಶ್ ಕಾರ್ನಾಡ್ ವಿರುದ್ಧ ದೂರು

ಬೆಂಗಳೂರು: ಸಾಹಿತಿ ಗಿರೀಶ್ ಕಾರ್ನಾಡ್ ಅವರ ವಿರುದ್ಧ ವಿಧಾನಸೌದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೈಕೋರ್ಟ್ ವಕೀಲ ಅಮೃತೇಶ್ ಎಂಬುವವರು ಈ ದೂರು ನೀಡಿದ್ದಾರೆ.

ಇತ್ತೀಚೆಗೆ ನಡೆದ ಗೌರಿ ಲಂಕೇಶ್ ಅವರ ಒಂದು ವರ್ಷದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಗಿರೀಶ್ ಕಾರ್ನಾಡ್ ’ನಾನು ನಕ್ಸಲ್’ ಎಂಬ ವಿವಾದಿತ ನಾಮಫಲಕ ಹಾಕಿಕೊಂಡು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ನಕ್ಸಲ್ ಒಂದು ನಿಷೇಧಿತ ಸಂಸ್ಥೆ. ಹೀಗಾಗಿ ಬಹಿರಂಗವಾಗಿ ನಾನು ನಕ್ಸಲ್ ಎಂದು ಹೇಳಿಕೊಂಡು ಕಾರ್ನಾಡರು ತಿರುಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಇವರ ಬಂಧನವಾಗಬೇಕು ಎಂದು ವಕೀಲ ಅಮೃತೇಶ್ ವಿಧಾನಸೌಧ ಪೊಲೀಸರಿಗೆ ಮನವಿ ಮಾಡಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close