About Us Advertise with us Be a Reporter E-Paper

Breaking Newsದೇಶಪ್ರಚಲಿತ

ಜಮ್ಮು ಕಾಶ್ಮೀರ: ವಿಧಾನಸಭೆ ವಿಸರ್ಜಿಸಿದ ರಾಜ್ಯಪಾಲರು

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಬುಧವಾರ ರಾಜಕೀಯ ಹೈಡ್ರಾಮಕ್ಕೆ ಸಾಕ್ಷಿಯಾಯಿತು. ಪಿಡಿಪಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಕಾಂಗ್ರೆಸ್ ಜತೆ ಮೈತ್ರಿ ಸರಕಾರ ರಚಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ನಿರತವಾಗಿತ್ತು. ಆದರೆ ರಾತ್ರಿ ವೇಳೆಗೆ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.

ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಮುಂದಿನ ತಿಂಗಳು ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ತಮ್ಮ ಭಿನ್ನಾಭಿಪ್ರಾಯವನ್ನು ಮರೆತು ಸ್ಥಳೀಯ ಪಕ್ಷಗಳೊಂದಿಗೆ ಕೈ ಜೋಡಿಸಲು ಮುಂದಾಗಿತ್ತು.
ಈ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಪಿಡಿಪಿ ಹಿರಿಯ ನಾಯಕ ಅಲ್ತಾಫ್ ಬುಖಾರಿ ಅವರು ನ್ಯಾಷನಲ್ ಕಾಂಗ್ರೆಸ್ ಉಪಾಧ್ಯಾಕ್ಷ ಹಾಗೂ ಮುಖ್ಯಮಂತ್ರಿ ಒಮರ್ ಅಬ್ದುಲ್ಹಾ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

‘ಜಮ್ಮು ಮತ್ತು ಕಾಶ್ಮೀರ ಜನತೆಗೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುತ್ತೇವೆ. ರಾಜ್ಯದಲ್ಲಿ ಸರಕಾರ ರಚಿಸಲು ಪಿಡಿಪಿ, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾಂಗ್ರೆಸ್ ಕೈಜೋಡಿಸಲು ಮನಸ್ಸು ಮಾಡಿವೆ’ ಎಂದು ಬುಖಾರಿ ತಿಳಿಸಿದ್ದರು. ಆದರೆ ರಾಜ್ಯಪಾಲರು ವಿಧಾನಸಭೆಯನ್ನೇ ವಿಸರ್ಜಿಸುವ ಮೂಲಕ ಕಾಂಗ್ರೆಸ್ ಕನಸಿಗೆ ತಣ್ಣೀರೆರೆಚಿದರು.

Tags

Related Articles

Leave a Reply

Your email address will not be published. Required fields are marked *

Language
Close