About Us Advertise with us Be a Reporter E-Paper

Breaking Newsದೇಶಪ್ರಚಲಿತ

ಕಾಂಗ್ರೆಸ್‌ನಿಂದ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವಿಲ್ಲ: ಕಾಂಗ್ರೆಸ್ ಹಿರಿಯ ನಾಯಕ ಆಂಟನಿ

ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್‌ನಿಂದ ಸಾಧ್ಯವಿಲ್ಲ, ಎಂಬುದನ್ನು ಕಾಂಗ್ರೆಸ್ ಅರ್ಥ ಮಾಡಿಕೊಂಡಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಮಾಜಿ ರಕ್ಷಣಾ ಸಚಿವ ಎ ಆಂಟನಿ ಹೇಳಿದ್ದಾರೆ. ಇದನ್ನು ಕಾಂಗ್ರೆಸ್ ಹೈಕಮಾಂಡ್ ಯಾವ ರೀತಿ ತೆಗೆದುಕೊಳ್ಳುತ್ತದೆ ಎಂಬುದು ಸದ್ಯದ ಕುತೂಹಲ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಏಕಾಂಗಿಯಾಗಿ ಎದುರಿಸಲು ಸಾಧ್ಯ ವಿಲ್ಲ, ಹಾಗೆಯೇ ಕಾಂಗ್ರೆಸ್ ನಿಂದ ಮಾತ್ರ ನರೇಂದ್ರ ಮೋದಿಯವರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವಿಲ್ಲ. ಆದರೂ ಕೂಡ ಮೋದಿಯನ್ನು ಅಧಿಕಾರದಿಂದ ದೂರವಿಡುವ ಪ್ರಚಾರದಲ್ಲಿ ಕಾಂಗ್ರೆಸ್ ಪ್ರಮುಖ ಶಕ್ತಿಯಾಗಿದೆ. ಹೀಗಾಗಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಬೇರೆ ಪಕ್ಷಗಳೊಂದಿಗೆ ಕೈಜೋಡಿಸಲು ಮುಂದಾಗಿದೆ ಎಂದು ಶುಕ್ರವಾರ ಕೇರಳ ಕಾಂಗ್ರೆಸ್‌ ಪ್ರದೇಶ ಸಮಿತಿ ಸಭೆಯಲ್ಲಿ ಆಂಟನಿ ಹೇಳಿದ್ದರು.

ಮೋದಿಗೆ ರಾಹುಲ್ ಕಂಡರೆ ಭಯ: ಮೋದಿಯವರ ಜತೆ ಹೋರಾಡಲು ರಾಹುಲ್ ಗಾಂಧಿ ಪ್ರಮುಖ ನಾಯಕರಾಗಿ ಬೆಳೆದಿದ್ದು ಇಂದು ಅವರ ಎದುರು ಧೈರ್ಯದಿಂದ ಹೋರಾಡಲು ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಮೋದಿಯವರಿಗೆ ರಾಹುಲ್ ಕಂಡರೆ ಭಯವಾಗುತ್ತಿದೆ ಎಂದಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯನ್ನು ಕುರುಕ್ಷೇತ್ರ ಯುದ್ಧ ಎಂದು ಬಣ್ಣಿಸಿದ ಎ ಕೆ ಆಂಟನಿ ದೇಶವನ್ನು ಕಾಪಾಡಲು ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಬೇಕು, ಚುನಾವಣೆ ಸಮೀಪಿಸುತ್ತಿರುವಾಗ ಕೊನೆ ಹಂತದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕಾಂಗ್ರೆಸ್ ಬಿಡಬೇಕು. ಅಭ್ಯರ್ಥಿಗಳ ಆಯ್ಕೆ ಜಿಲ್ಲಾ ಸಮಿತಿಯಿಂದ ನಿರ್ಧಾರವಾಗಬೇಕು. ಕೆಲ ನಾಯಕರು ತೀರ್ಮಾನಿಸುವ ಬದಲು ಅಭ್ಯರ್ಥಿಗಳ ಆಯ್ಕೆಯು ಪ್ರಜಾಸತ್ತಾತ್ಮಕವಾಗಿ ನಡೆಯಬೇಕು ಆಂಟನಿ ಎಂದು ಅಭಿಪ್ರಾಯಪಟ್ಟರು.

Tags

Related Articles

Leave a Reply

Your email address will not be published. Required fields are marked *

Language
Close