About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾದ ನಾಲ್ವರು ಶಾಸಕರಿಗೆ ನೋಟಿಸ್: ಸಿದ್ದರಾಮಯ್ಯ

ಬೆಂಗಳೂರು: ಶುಕ್ರವಾರ ನಡೆದಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾದ ನಾಲ್ವರು ಶಾಸಕರಿಗೆ ನೋಟಿಸ್ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಾಸಕಾಂಗ ಪಕ್ಷದ ಸಭೆಯ ನಂತರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಶಾಸಕಾಂಗ ಸಭೆಗೆ 76 ಶಾಸಕರು ಹಾಜರಾಗಿದ್ದು, ನಾಲ್ವರು ಗೈರಾಗಿದ್ದಾರೆ. ಗೈರಾದ ಶಾಸಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುವುದು ಎಂದರು. ಇಬ್ಬರು ಶಾಸಕರು ಗೈರು ಆಗಿದ್ದಕ್ಕೆ ಕಾರಣ ನೀಡಿದ್ದಾರೆ. ಆದರೆ ಇನ್ನು ಇಬ್ಬರು ಶಾಸಕರು ಯಾವುದೇ ಮಾಹಿತಿ ನೀಡಿಲ್ಲ. ಉಮೇಶ್ ಜಾಧವ್ ಅವರು ಅನಾರೋಗ್ಯದಿಂದ ಸಭೆಗೆ ಬಂದಿಲ್ಲ. ನಾಗೇಂದ್ರ ಅವರು ಕೋರ್ಟ್ ವಿಚಾರಣೆಯ ಕಾರಣ ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟ್ಟಳ್ಳಿ ಯಾವುದೇ ಮಾಹಿತಿ ನೀಡಿಲ್ಲ. ಈ ನಾಲ್ವರು ಶಾಸಕರಿಗೆ ವಿವರಣೆ ಕೇಳಿ ನೋಟಿಸ್ ನೀಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ

Tags

Related Articles

Leave a Reply

Your email address will not be published. Required fields are marked *

Language
Close