About Us Advertise with us Be a Reporter E-Paper

Breaking Newsದೇಶಪ್ರಚಲಿತ

ಸಂಸದರಿಗೆ ತ್ರಿ ಲೈನ್ ವಿಪ್ ಜಾರಿ ಮಾಡಿದ ಕಾಂಗ್ರೆಸ್‌

ದೆಹಲಿ:  ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟದ ಸರಕರದ ವಿರುದ್ಧ ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡನೆ ಮಾಡಿ ಕೇಂದ್ರ ಸರಕಾರವನ್ನು ಮುಜುಗರಕ್ಕೀಡುಮಾಡುವ ಶಪಥ ಮಾಡುವ ಉದ್ದೇಶದಿಂದ ಕಾಂಗ್ರೆಸ್‌, ತನ್ನ ಪಕ್ಷದ ಎಲ್ಲ ಸಂಸದರಿಗೆ ತ್ರಿ ಲೈನ್ ವಿಪ್‌ ಜಾರಿಗೊಳಿಸಿದೆ.

ಆಮ್ ಆದ್ಮಿ ಪಕ್ಷವು ಸಹ ತನ್ನ ಸಂಸದರಿಗೆ ವಿಪ್ ಜಾರಿಗೊಳಿಸಿದೆ. ಇದರಿಂದಾಗಿ ಅಧಿಕಾರದ ಗದ್ದುಗೆಗೆ ಏರಿದ ಬಳಿಕ ಮೋದಿಗೆ ಲೋಕಸಭೆಯಲ್ಲಿ ಮೊದಲ ಬಾರಿಗೆ ಅಗ್ನಿ ಪರೀಕ್ಷೆ ಎದುರಾಗಿದೆ.

ಎಲ್ಲ ಪ್ರತಿಪಕ್ಷಗಳು ಒಂದಾಗಿ ಕೇಂದ್ರ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ  ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್‌ ಖರ್ಗೆ ಜು. 17 ರಂದು ಘೋಷಿಸಿದ್ದರು.

ಕಾಂಗ್ರೆಸ್‌ಗೆ ಮತ್ತೆ ವಿಫಲ ಪ್ರಯತ್ನ ನಡೆಸುತ್ತಿದೆ. 1999ರಲ್ಲಿ ಆದ ಮುಖಭಂಗವು ಕಾಂಗ್ರೆಸ್‌ಗೆ ಮರುಕಳಿಸಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಅನಂತ ಕುಮಾರ ಹೇಳಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close