About Us Advertise with us Be a Reporter E-Paper

Breaking Newsದೇಶಪ್ರಚಲಿತ

ಮಸೂದೆ ಅಂಗೀಕಾರವಾಗದಿರಲು ಕಾಂಗ್ರೆಸ್ ಕಾರಣವಲ್ಲ: ಶರ್ಮಾ

ದೆಹಲಿ: ತ್ರಿವಳಿ ತಲಾಖ್ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗದಿರುವುದಕ್ಕೆ ಕಾಂಗ್ರೆಸ್ ಕಾರಣ ಎಂಬ ಬಿಜೆಪಿ ಆರೋಪವನ್ನು ಹಿರಿಯ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

ತ್ರಿವಳಿ ತಲಾಖ್ ಮಸೂದೆಯನ್ನು ಕಾಂಗ್ರೆಸ್ ಎಂದಿಗೂ ವಿರೋಧಿಸಿಲ್ಲ. ಬಿಜೆಪಿ ಮಿತ್ರಪಕ್ಷಗಳೇ ಅದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿವೆ. ಬಿಜೆಪಿಗೆ ದೇಶದ ಮುಸ್ಲಿಂ ಮಹಿಳೆಯರ ಬಗ್ಗೆ ಕಾಳಜಿ ಇದ್ದರೆ ಒಳ್ಳೆಯ ವಿಚಾರ. ಆದರೆ ದೇಶದ ಪ್ರತಿ ಮಹಿಳೆಯ ಸ್ಪಷ್ಟ ಬಹುಮತ ಇದ್ದರೂ ಮಹಿಳಾ ಮೀಸಲು ಮಸೂದೆಯನ್ನು ಏಕೆ ಮಂಡಿಸುತ್ತಿಲ್ಲ? ಎಂದು ಶರ್ಮಾ ಪ್ರಶ್ನಿಸಿದ್ದಾರೆ.

ಮನಮೋಹನ್ ಸಿಂಗ್ ಅವರು ಪ್ರಜಾಪ್ರಭುತ್ವದ ಪ್ರಧಾನಿಯಾಗಿದ್ದರು. ಆದರೆ ಪ್ರಧಾನಿ ಮೋದಿ ಸರ್ವಾಧಿಕಾರಿಯಾಗಿದ್ದು, ನೋಟ್ಯಂತರದಿಂದಾಗಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಜಿಎಸ್‌ಟಿ ಮತ್ತು ನೋಟ್ಯಂತರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

Tags

Related Articles

Leave a Reply

Your email address will not be published. Required fields are marked *

Language
Close