About Us Advertise with us Be a Reporter E-Paper

Breaking Newsದೇಶಪ್ರಚಲಿತ

ಭಯ ಪಡಲು ಕೋರ್ಟ್‌ ಹುಲಿಯಲ್ಲ: ಸುಪ್ರೀಂ

ದೆಹಲಿ: ಸುಪ್ರೀಂ ಕೋರ್ಟ್ ನರಭಕ್ಷಕ ಹುಲಿಯಲ್ಲ. ಹೀಗಾಗಿ ನ್ಯಾಯಾಲಯ ಕಂಡು ಹೆದರುವ ಅಗತ್ಯವಿಲ್ಲ ಎಂದು ನ್ಯಾಯಾಲಯದ ಪೀಠ ತಿಳಿಸಿದೆ.

ಆಂಧ್ರ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪದ ಮೇಲೆ ಟ್ರೈಮೆಕ್ಸ್ ಗ್ರೂಪ್ ಸಂಸ್ಥೆಯ ವಿರುದ್ಧದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಪೀಠ ಈ ಹೇಳಿಕೆ ನೀಡಿದೆ. ಸಂಸ್ಥೆಯ ವಿರುದ್ಧ ದೂರು ಸಲ್ಲಿಸುವ ಮೂಲಕ ರಾಜ್ಯ ಸರಕಾರದ ಮೇಲೆ ಹೇರುವ ತಂತ್ರ ಮಾಡಲಾಗುತ್ತಿದೆ. ಹೀಗಾಗಿ ರಾಜ್ಯ ಸರಕಾರ ಸಂಸ್ಥೆಯ ಗಣಿಗಾರಿಕೆ ಕಾರ್ಯಚರಣೆ ತಡೆ ನೀಡಿ ಆದೇಶ ಹೊರಡಿಸಿದೆ ಎಂದು ಕಂಪನಿ ಪರ ವಾದ ಮಂಡಿಸಿದ ವಕೀಲ ಮುಕುಲ್ ರೊಹಟಗಿ ಹೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿಗಳಾದ ಮದನ್ ಬಿ. ಲೋಕರ್ ಮತ್ತು ದೀಪಕ್ ಗುಪ್ತಾ ಅವರ ಪೀಠ, ‘ಸುಪ್ರೀಂ ಕೋರ್ಟಿನಲ್ಲಿ ಪ್ರಕರಣ ವಿಚಾರಣೆ ನಡೆಯುತ್ತಿದೆ ಎಂಬ ಮಾತ್ರಕ್ಕೆ ರಾಜ್ಯ ಸರಕಾರಗಳು ಭಯಪಡುವ ಅಗತ್ಯವಿಲ್ಲ’ ಎಂದು ತಿಳಿಸಿದೆ.

Tags

Related Articles

Leave a Reply

Your email address will not be published. Required fields are marked *

Language
Close