About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ರಾಸಲೀಲೆ ಪ್ರಕರಣ: ನಿತ್ಯಾನಂದ ಸ್ವಾಮೀಜಿ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ರಾಮನಗರ: ಸ್ವಯಂ ಘೋಷಿತ ದೇವಮಾನವ ಬಿಡದಿಯ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.

ರಾಸಲೀಲೆ ಹಾಗೂ ಆರತಿ ರಾವ್ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಮೂರು ಬಾರಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾ. ಗೋಪಾಲಕೃಷ್ಣ ಅವರು ಈ ಆದೇಶ ಹೊರಡಿಸಿದ್ದಾರೆ. ಪ್ರಕರಣದ ವಿಚಾರಣೆಯು ಕಳೆದ ತಿಂಗಳಷ್ಟೇ ಆರಂಭಗೊಂಡಿತ್ತು. ಇನ್ ಕ್ಯಾಮೆರಾ ಪ್ರೊಸೀಡಿಂಗ್ ಮೂಲಕ ಪ್ರಕರಣದ ಪ್ರಮುಖ ದೂರುದಾರ ನಿತ್ಯಾನಂದನ ಮಾಜಿ ಕಾರು ಚಾಲಕ ಲೆನಿನ್ ಕುರುಪ್ಪನ್ ಎರಡು ದಿನ ತಮ್ಮ ಹೇಳಿಕೆ ದಾಖಲಿಸಿದ್ದರು.

ಆದರೆ, ಆರೋಪಿಗಳಾದ ನಿತ್ಯಾನಂದ ಹಾಗೂ ಸಹಚರರು ನೆಪ ಹೇಳಿ ವಿಚಾರಣೆಗೆ ಗೈರಾಗಿದ್ದರು. ಆದಷ್ಟು ಶೀಘ್ರ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿದೇರ್ಶನ ನೀಡಿದೆ. ನಮ್ಮ ಉದ್ದೇಶವೂ ಕೂಡ ಅದೇ ಆಗಿದೆ. ನಿತ್ಯಾನಂದ ಪದೇಪದೆ ಗೈರಾಗುವ ಮೂಲಕ ವಿಚಾರಣೆಗೆ ಹಿನ್ನಡೆ ಉಂಟು ಮಾಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸುವಂತೆ ಸಿಐಡಿ ಪರ ವಕೀಲ ವಡವಡಗಿ ಆ.31ರಂದು ನಡೆದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ನಿತ್ಯಾನಂದ ಗುರುವಾರದ ವಿಚಾರಣೆಗೂ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಜಾಮೀನು ರಹಿತ ವಾರೆಂಟ್ ಹೊಡಿಸಿ, ವಿಚಾರಣೆಯನ್ನು ಸೆ.14ಕ್ಕೆ ಮುಂದೂಡಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close