ತಟಸ್ಥ ಸ್ಥಳದಲ್ಲಿ ಏಷ್ಯಾ ಕಪ್ ಟೂರ್ನಿಯನ್ನು ಆಯೋಜಿಸಲು ಬಿಸಿಸಿಐ ಒಪ್ಪಿಗೆ!
ಮುಂಬರುವ 2025ರ ಏಷ್ಯಾ ಕಪ್ ಟೂರ್ನಿಯು ಭಾರತದ ಆತಿಥ್ಯದಲ್ಲಿ ನಡೆಯಲಿದೆ. ಪಾಕಿಸ್ತಾನದ ಜೊತೆ ರಾಜಕೀಯ ಸಮಸ್ಯೆಗಳ ಕಾರಣ ಭಾರತ ತಂಡ, ಏಷ್ಯಾ ಕಪ್ ಟೂರ್ನಿಯನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸಲು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ. ಈ ಬಾರಿ ಟೂರ್ನಿಯನ್ನು ಟಿ20 ಸ್ವರೂಪದಲ್ಲಿ ಆಯೋಜಿಸಲಾಗುತ್ತದೆ.