About Us Advertise with us Be a Reporter E-Paper

Breaking Newsಕ್ರೀಡೆಪ್ರಚಲಿತ
Trending

ಆಸಿಸ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾಗೆ ಐತಿಹಾಸಿಕ ಜಯ

ಸಿಡ್ನಿ: ಭಾರತ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿಯಲ್ಲಿ ಗೆಲುವು ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದೆ. ಆಸ್ಟ್ರೇಲಿಯನ್ನರ ವಿರುದ್ಧ ಆಸಿಸ್​ ನೆಲದಲ್ಲಿ ಟೆಸ್ಟ್​ ಸರಣಿ ಗೆದ್ದ ಭಾರತ, ಐತಿಹಾಸಿಕ ದಾಖಲೆ ನಿರ್ಮಿಸಿದೆ. ಈ ಮೂಲಕ 71 ವರ್ಷಗಳ ಸರಣಿ ಗೆಲುವಿನ ಕೊರತೆಯನ್ನ ನೀಗಿಸುವಲ್ಲಿ, ವಿರಾಟ್​ ಪಡೆ ಯಶಸ್ವಿಯಾಗಿದೆ.

ಭಾರತ ಮತ್ತು ಆತಿಥೇಯ ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್​ ಪಂದ್ಯವೂ ಡ್ರಾನಲ್ಲಿ ಅಂತ್ಯವಾಗಿದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 2-1 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ಆಸಿಸ್​ ನೆಲದಲ್ಲಿ ಟೆಸ್ಟ್​ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ622 ರನ್ ಗಳಿಸಿ ಡಿಕ್ಲರ್ ಮಾಡಿಕೊಂಡಿತ್ತು. ಭಾರತದ ಪರ ಚೇತೇಶ್ವರ ಪೂಜಾರ 193 ರನ್, ರರಿಷಭ್ ಪಂತ್ ಅಜೇಯ159 ರನ್ ಗಳಿಸಿದ್ದರು. ಆಸ್ಟ್ರೇಲಿಯಾ ತಂಡ ಕೇವಲ 300 ರನ್ ಗಳಿಗೆ ಅಲ್ ಔಟ್  ಆಗುವುದರೊಂದಿಗೆ ಫಾಲೋ ಆನ್ ಗೆ ಸಿಲುಕಿತ್ತು.

ಫಾಲೋ ಆನ್​ಗೆ ಒಳಗಾಗಿ ಎರಡನೇ ಇನ್ನಿಂಗ್ಸ್​ ಆರಂಭಿಸಿದ ಆಸಿಸ್​ ಪಡೆ ನಾಲ್ಕನೇ ದಿನದಾಟದ ಅಂತ್ಯಕ್ಕೆ ಯಾವುದೇ ವಿಕೆಟ್​ ನಷ್ಟವಿಲ್ಲದೇ 6 ರನ್​ ಗಳಿಸಿ, ಐದನೇ ದಿನದಾಟವನ್ನು ಕಾಯ್ದುಕೊಂಡಿತ್ತು. ಆದರೆ, ಐದನೇ ದಿನದಾಟಕ್ಕೆ ವರುಣ ಅಡ್ಡಿಯಾದ್ದರಿಂದ ಪಂದ್ಯವನ್ನು ರದ್ದುಗೊಳಿಸಲಾಯಿತು. ನಾಲ್ಕನೇ ಮತ್ತು ಐದನೇ ದಿನದ ಮಂದ ಬೆಳಕು ಮತ್ತು ಮಳೆ ಆಸ್ಟ್ರೇಲಿಯಾಗೆ ವರವಾಗಿ ಪರಿಣಮಿಸಿತು. ಅಂತಿಮ ಟೆಸ್ಟ್​ ಪಂದ್ಯದಲ್ಲಿ ಡ್ರಾ ಸಾಧಿಸಿದ ತಂಡ, ಸರಣಿಯನ್ನ 2-1 ಅಂತರದಲ್ಲಿ ಗೆದ್ದುಕೊಂಡಿತು. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಹೊಸ ಇತಿಹಾಸ ನಿರ್ಮಿಸಿತು.

Tags

Related Articles

Leave a Reply

Your email address will not be published. Required fields are marked *

Language
Close