ಪತ್ನಿಗೆ ಅಕ್ರಮ ಸಂಬಂಧ; ಬೇಸತ್ತು ವಿಡಿಯೊ ಮಾಡಿ ಪತಿ ಆತ್ಮಹತ್ಯೆ
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ ಘಟನೆ ನಡೆದಿದೆ. ತಿಪಟೂರು ತಾಲೂಕಿನ ನೊಣವಿನಕೆರೆ ಗ್ರಾಮದ ಯುವತಿಯನ್ನು ವ್ಯಕ್ತಿಯೊಬ್ಬ ಪ್ರೀತಿಸಿ ಮದುವೆಯಾಗಿದ್ದ. ಆದರೆ, ಕಳೆದ 15 ದಿನಗಳ ಹಿಂದೆ ಪತ್ನಿ ಮನೆ ಬಿಟ್ಟು ತವರು ಮನೆ ಸೇರಿದ್ದಳು. ಆಕೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.