ಬೆಂಗಳೂರಿನಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಯತ್ನ!
ಬೆಂಗಳೂರು ವಿಮಾನ ನಿಲ್ದಾಣ ಬಳಿಯ ತಾಜ್ ಹೋಟೆಲ್‌ನ 4ನೇ ಮಹಡಿಯ ರೂಮ್‌ನಲ್ಲಿ ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಮ್ಯಾನೇಜರ್ ಆಗಿರುವ ವ್ಯಕ್ತಿ, ತನ್ನ 5 ಹಾಗೂ 10 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ, ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.