ಲಾರಿ- ಖಾಸಗಿ ಬಸ್ ನಡುವೆ ಭೀಕರ ಅಪಘಾತ; 13 ಜನರು ಸಾವು, ಹಲವರಿಗೆ ಗಾಯ
Accident: ಆಂಧ್ರಪ್ರದೇಶದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, 13 ಮಂದಿ ಮೃತಪಟ್ಟಿದ್ದು, ಹಲವರು ಹಲವರು ಗಾಯಗೊಂಡಿದ್ದಾರೆ. ಡಿಕ್ಕಿಯ ನಂತರ, ಬಸ್‌ಗೆ ಬೆಂಕಿ ಹೊತ್ತಿಕೊಂಡು 10 ಜನರು ಸಜೀವ ದಹನವಾಗಿ, ಹಲವರು ಗಾಯಗೊಂಡರು. ಗಂಭೀರ ಗಾಯಗೊಂಡಿದ್ದ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಮೂಲಕ ಸಾವಿನ ಸಂಖ್ಯೆ 13ಕ್ಕೇರಿತು.
ಆಂಧ್ರಪ್ರದೇಶದಲ್ಲಿ ಭೀಕರ ಬಸ್ ಅಪಘಾತ -
ಅಮರಾವತಿ, ಮಾ.26: ಆಂಧ್ರಪ್ರದೇಶದಲ್ಲಿ ಭೀಕರ ಬಸ್ ಅಪಘಾತ (Accident) ಸಂಭವಿಸಿದ್ದು, 13 ಮಂದಿ ಮೃತಪಟ್ಟಿದ್ದು, ಹಲವರು ಹಲವರು ಗಾಯಗೊಂಡಿದ್ದಾರೆ. ಆಂಧ್ರಪ್ರದೇಶದ (Andhra Pradesh) ಮಾರ್ಕಪುರಂ ಬಳಿಯ ರಾಯವರಂ ಬಳಿ ಪ್ರಯಾಣಿಸುತ್ತಿದ್ದ ಖಾಸಗಿ ಬಸ್, ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದು ಈ ದುರಂತ ನಡೆದಿದೆ.
ಡಿಕ್ಕಿಯ ನಂತರ, ಬಸ್‌ಗೆ ಬೆಂಕಿ ಹೊತ್ತಿಕೊಂಡು 10 ಜನರು ಸಜೀವ ದಹನವಾಗಿ, ಹಲವರು ಗಾಯಗೊಂಡರು. ಗಂಭೀರ ಗಾಯಗೊಂಡಿದ್ದ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಮೂಲಕ ಸಾವಿನ ಸಂಖ್ಯೆ 13ಕ್ಕೇರಿತು. ಬಸ್ ತೆಲಂಗಾಣದ ನಿರ್ಮಲ್‌ನಿಂದ ನೆಲ್ಲೂರಿಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಅಪಘಾತದ ನಂತರ ತನಿಖಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿದ್ದರು. ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಪಘಾತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ನೆರವು ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ನೀಡಲಾಗುತ್ತಿರುವ ವೈದ್ಯಕೀಯ ಚಿಕಿತ್ಸೆಯ ಬಗ್ಗೆಯೂ ಅವರು ವಿಚಾರಿಸಿದರು.
ಬಸ್ ಅಪಘಾತ: 10ಕ್ಕೂ ಅಧಿಕ ಅಮರನಾಥ ಯಾತ್ರಿಕರಿಗೆ ಗಾಯ
ಸಾವಿನ ಸಂಖ್ಯೆ ಹೆಚ್ಚಾಗುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಅಪಘಾತದ ಕಾರಣಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ವಿವರವಾದ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಘಟನೆ ಬೆಳಗ್ಗೆ 6 ಗಂಟೆಗೆ ನಡೆದಿದ್ದು, ಇಲ್ಲಿಯವರೆಗೆ 13 ಜನರು ಮೃತಪಟ್ಟಿದ್ದಾರೆ, ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿರುದ್ಧ ದಿಕ್ಕಿನಿಂದ ಬಂದ ಟಿಪ್ಪರ್, ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಮತ್ತು ಲಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಅವಘಡವನ್ನು ಕಡಿಮೆ ಮಾಡಲು ನಾವು ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸುತ್ತಿದ್ದೇವೆ ಎಂದು ಆಂಧ್ರ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ತಿಳಿಸಿದ್ದಾರೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇದಲ್ಲದೆ, ಗಾಯಗೊಂಡವರಿಗೆ 50,000 ರೂ.ಗಳ ಆರ್ಥಿಕ ನೆರವು ನೀಡುವುದಾಗಿ ಪ್ರಧಾನಿ ಮೋದಿ ಹೇಳಿದರು.
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತವು ದುರಂತ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಕಚೇರಿಯ ಹೇಳಿಕೆ ತಿಳಿಸಿದೆ.
Road Accident: ಬೆಂಗಳೂರು ಬಳಿ ಸಾರಿಗೆ ಬಸ್- ಲಾರಿ ಅಪಘಾತ, ನಾಲ್ವರ ಸಾವು
ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಅಪಘಾತ
ಇತ್ತೀಚೆಗೆ ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತವೊಂದು ಸಂಭವಿಸಿತ್ತು. ಅಗಲಗುರ್ಕಿ ಬಳಿ ಮಂತ್ರಾಲಯಕ್ಕೆ ಹೋಗುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು, 10 ಮಂದಿ ಗಾಯಗೊಂಡಿದ್ದರು. ಅಪಘಾತದಲ್ಲಿ ಒಟ್ಟು 11 ಪ್ರಯಾಣಿಕರು ಗಾಯಗೊಂಡಿದ್ದು, ಒಬ್ಬ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.
ಸುಗಮ್ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಸ್ಲೀಪರ್ ಬಸ್ ಮೈಸೂರಿನಿಂದ ಬೆಂಗಳೂರು ಮೂಲಕ ಮಂತ್ರಾಲಯಕ್ಕೆ ತೆರಳುತ್ತಿತ್ತು. ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿತ್ತು. ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಬಸ್ ಕ್ಲೀನರ್ ಸೇರಿದಂತೆ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಎಲ್ಲ ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.