ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಮೌಲ್ವಿ; ಮಗುವಿಗೆ ಜನ್ಮಕೊಟ್ಟ ಅಪ್ರಾಪ್ತೆ!

Crime News: 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ ಮೌಲಾನನೊಬ್ಬನನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಬಾಲಕಿಗೆ ಹಠಾತ್ತನೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡ ಬಳಿಕವೇ ವಿಚಾರ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಮೌಲಾನಾ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಮೌಲಾನಾ ಅರೆಸ್ಟ್ -

Priyanka P
Priyanka P Feb 19, 2026 6:21 PM

ಲಖನೌ, ಫೆ.19: 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೌಲಾನನೊಬ್ಬನನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದಲ್ಲಿ (Uttar Pradesh) ಈ ಘಟನೆ ನಡೆದಿದೆ. ಬಾಲಕಿಯ (Physical Assault) ನೆರೆಹೊರೆಯವನಾದ ಮೌಲಾನಾ ಇಸ್ಲಾಂ, ಆಕೆಗೆ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಮೌಲಾನ ನಡೆಸಿದ ಲೈಂಗಿಕ ದೌರ್ಜನ್ಯದಿಂದ ಅಪ್ರಾಪ್ತೆ ಗರ್ಭಿಣಿಯಾಗಿದ್ದು, ಮಗುವಿಗೆ ಜನ್ಮ ನೀಡಿದ್ದಾಳೆ (Crime News).

ಬಾಲಕಿಯ ಕುಟುಂಬದವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಪಿಲ್ಖುವಾ ಕೊಟ್ವಾಲಿ ಪ್ರದೇಶದ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಫೆಬ್ರವರಿ 14 ರಂದು 14 ವರ್ಷದ ಬಾಲಕಿಗೆ ಹಠಾತ್ತನೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಾಗ, ಆಕೆಯ ಕುಟುಂಬದವರು ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯರು ಆಕೆ ಗರ್ಭಿಣಿ ಎಂದು ಮಾಹಿತಿ ನೀಡಿದರು.

ಕುಟುಂಬವು ಅವಳನ್ನು ಮನೆಗೆ ಕರೆದುಕೊಂಡು ಬಂದರು. ಸ್ವಲ್ಪ ಸಮಯದ ನಂತರ, ಅವಳು ಮನೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದಳು. ಬಾಲಕಿಗೆ ತಾನು ಗರ್ಭಿಣಿಯಾಗಿರುವ ವಿಷಯ ತಿಳಿದಿರಲಿಲ್ಲ. ಈ ವಿಷಯವನ್ನು ತನ್ನ ಕುಟುಂಬಕ್ಕೆ ತಿಳಿಸಿರಲಿಲ್ಲ. ಫೆಬ್ರವರಿ 14 ರ ರಾತ್ರಿ 8 ಗಂಟೆ ಸುಮಾರಿಗೆ, ಆಕೆಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತು. ಕೂಡಲೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಬಾಲಕಿ ಗರ್ಭಿಣಿ ಎಂದು ದೃಢಪಡಿಸಿದರು.

ಮಹಿಳೆಯನ್ನು ಮಂತ್ರವಾದಿ ಎಂದು ಆರೋಪಿಸಿ ಮಗು ಸಮೇತ ಸುಟ್ಟು ಹಾಕಿದ ಗ್ರಾಮಸ್ಥರು; ಕೂದಲೆಳೆ ಅಂತರದಲ್ಲಿ ಪತಿ ಪಾರು

ನಂತರ ಆಕೆಯನ್ನು ಮನೆಗೆ ಕರೆದುಕೊಂಡು ಬರಲಾಯಿತು. ಅದೇ ದಿನ ಅವಳು ಮನೆಯಲ್ಲಿಯೇ ಮಗುವಿಗೆ ಜನ್ಮ ನೀಡಿದಳು. ಈ ಸಂಬಂಧ ಪಿಲ್ಖುವಾ ಕೊಟ್ವಾಲಿಯಲ್ಲಿ ದೂರು ದಾಖಲಾಗಿದ್ದು, ನಂತರ ಎಫ್‌ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಸಂತ್ರಸ್ತೆಯ ತಂದೆ ಮೂಲತಃ ಅಮ್ರೋಹಾ ಜಿಲ್ಲೆಯ ಹಸನ್‌ಪುರದವರಾಗಿದ್ದರೂ, ಪಿಲ್ಖುವಾ ಗ್ರಾಮದಲ್ಲಿ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದಾರೆ. ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುತ್ತಿದ್ದಾರೆ. ತಾನು ಮನೆಯಲ್ಲಿ ಒಬ್ಬಂಟಿಯಾಗಿರುವಾಗ ನೆರೆಮನೆಯ ಮೌಲಾನಾ ಇಸ್ಲಾಂ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಮತ್ತು ಬೆದರಿಕೆ ಹಾಕುತ್ತಿದ್ದ ಎಂದು ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ. ಈ ಕಾರಣದಿಂದಾಗಿ ಈ ವಿಷಯವನ್ನು ತನ್ನ ಕುಟುಂಬಕ್ಕೆ ತಿಳಿಸಿರಲಿಲ್ಲ ಎಂದು ಹೇಳಿದ್ದಾಳೆ.

ಪಿಲ್ಖುವಾ ಕೊಟ್ವಾಲಿಯ ಉಸ್ತುವಾರಿ ಇನ್ಸ್‌ಪೆಕ್ಟರ್ ಮನೀಶ್ ಚೌಹಾಣ್ ಮಾತನಾಡಿ, ಪೊಲೀಸರು ಮೊದಲು ಬಾಲಕಿ ಮತ್ತು ಆಕೆಯ ನವಜಾತ ಶಿಶುವನ್ನು ಆಕೆಯ ಮನೆಯಲ್ಲಿಯೇ ನೋಡಿದರು. ನಂತರ ಅವರನ್ನು ಒನ್-ಸ್ಟಾಪ್ ಸೆಂಟರ್‌ಗೆ ಸ್ಥಳಾಂತರಿಸಲಾಯಿತು. ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ.

ತಂದೆಯ ದೂರಿನ ಆಧಾರದ ಮೇಲೆ, ಫೆಬ್ರವರಿ 17 ರಂದು ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಲಾಯಿತು ಮತ್ತು ಬಾಲಕಿಯ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಯಿತು. ಅಪ್ರಾಪ್ತೆ ಮತ್ತು ಆಕೆಯ ಕುಟುಂಬದವರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಆರೋಪಿಯನ್ನು ಫೆಬ್ರವರಿ 18 ರಂದು ಬಂಧಿಸಲಾಗಿದ್ದು, ಕಾನೂನು ಕ್ರಮಗಳ ನಂತರ ಜೈಲಿಗೆ ಕಳುಹಿಸಲಾಗುತ್ತದೆ.