ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದೆಹಲಿಯಲ್ಲಿ ಬಸ್‌ ಒಳಗೆ ಸಾಮೂಹಿಕ ಅತ್ಯಾಚಾರದ ಬೆನ್ನಲ್ಲೇ ಅಂತಹದ್ದೇ ಮತ್ತೊಂದು ರಾಕ್ಷಸೀ ಕೃತ್ಯ; ಬಿಹಾರದಲ್ಲಿ ಚಲಿಸುವ ಕಾರಿನಲ್ಲಿ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

Crime News: ಚಲಿಸುವ ಕಾರಿನೊಳಗೆ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವುದಾಗಿ ಹೇಳಿ ಪಾಪಿಗಳು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಈ ಕೃತ್ಯ ಎಸಗಿದ್ದಾರೆ.

ಚಲಿಸುವ ಕಾರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಸಾಂದರ್ಭಿಕ ಚಿತ್ರ -

Priyanka P
Priyanka P Sep 1, 2026 6:11 PM

ಪಾಟ್ನಾ, ಆ. 1: ಚಲಿಸುವ ಕಾರಿನೊಳಗೆ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬಿಹಾರದ (Bihar) ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ (Crime News). ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ಊರಿನವರಾದ ಮೂವರು ಯುವಕರು, ಆಸ್ಪತ್ರೆಯಲ್ಲಿರುವ ಆಕೆಯ ತಾಯಿಯ ಬಳಿಗೆ ಕರೆದೊಯ್ಯುವುದಾಗಿ ಭರವಸೆ ನೀಡಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದಾರೆ. ಅಪರಾಧಿಗಳ ಮಾತನ್ನು ನಂಬಿ ಕಾರ್‌ ಹತ್ತಿ ಬಾಲಕಿಯನ್ನು 50 ಕಿ.ಮೀ. ದೂರ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಮೂಲಗಳು ತಿಳಿಸಿವೆ.

ʼʼಅಪ್ರಾಪ್ತ ಬಾಲಕಿಯ ತಾಯಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದರು. ಅವರು ತಮ್ಮ ಮಗಳಿಗೆ ಕರೆ ಮಾಡಿ ಆಸ್ಪತ್ರೆಗೆ ಬರುವಂತೆ ಹೇಳಿದ್ದರು. ಅದರಂತೆ ಬಾಲಕಿ ಆಸ್ಪತ್ರೆಗೆ ತೆರಳಲು ಮುಂದಾಗಿದ್ದಳು. ಮಧ್ಯಾಹ್ನ 12:30ರ ಸುಮಾರಿಗೆ ಆಕೆಯ ಗ್ರಾಮದ ಮೂವರು ಯುವಕರು, ತಮ್ಮ ಕಾರಿನಲ್ಲಿ ಆಕೆಯನ್ನು ಆಸ್ಪತ್ರೆಗೆ ಬಿಡುವುದಾಗಿ ಹೇಳಿದ್ದರುʼʼ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಮದನ್‌ಪುರದವರೆಗೆ 50 ಕಿ.ಮೀ.ಗೂ ಹೆಚ್ಚು ದೂರ ನಿರ್ಜನ ಪ್ರದೇಶದತ್ತ ಬಾಲಕಿಯನ್ನು ಕರೆದೊಯ್ದರು. ಅಲ್ಲಿ ಮೂವರೂ ಆಕೆಯ ಮೇಲೆರಿ ಬಲಾತ್ಕಾರ ಮಾಡಿದ್ದಾರೆ. ಬಳಿಕ ದುಷ್ಕರ್ಮಿಗಳು ಯಾರಲ್ಲೂ ಹೇಳದಂತೆ ಅಪ್ರಾಪ್ತ ಬಾಲಕಿಯನ್ನು ಬೆದರಿಸಿದ್ದರು. ಸಂಜೆ 6:30ರ ವೇಳೆಗೆ ಆಕೆಯನ್ನು ಕಾಲುವೆಯ ಬಳಿ ಬಿಟ್ಟು ಹೋಗಿದ್ದರು. ಸಂತ್ರಸ್ತೆ ಹೇಗೋ ಮನೆಗೆ ತಲುಪಿ ತನಗಾದ ದುಸ್ಥಿತಿಯನ್ನು ಪೋಷಕರಿಗೆ ತಿಳಿಸಿದಳು. ನಂತರ ಪೋಷಕರು ಆರೋಪಿಗಳ ವಿರುದ್ಧ ದೂರು ದಾಖಲಿಸಿದರು.

ಮತ್ತೆ ಪೆರೋಲ್‌ನಲ್ಲಿ ಜೈಲಿನಿಂದ ಹೊರಗೆ ಬಂದ ಗುರುಮೀತ್ ರಾಮ್ ರಹೀಮ್‌

ಆರೋಪಿಗಳ ವಿರುದ್ಧ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮತ್ತೋರ್ವ ತಲೆಮರೆಸಿಕೊಂಡಿದ್ದಾನೆ. ಮೂರನೇ ಅಪರಾಧಿಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

ಅಪ್ರಾಪ್ತ ಬಾಲಕಿಯು ಸದ್ಯ ಮಕ್ಕಳ ಕಲ್ಯಾಣ ಸಮಿತಿಯ ಮೇಲ್ವಿಚಾರಣೆಯಲ್ಲಿದ್ದಾಳೆ. ಆಕೆಗೆ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ನ್ಯಾಯಾಲಯದಲ್ಲಿ ಆಕೆಯ ಹೇಳಿಕೆಯನ್ನು ದಾಖಲಿಸಲಾಗುತ್ತದೆ. ವಿಧಿವಿಜ್ಞಾನ ಪ್ರಯೋಗಾಲಯ (FSL) ಮತ್ತು ತಾಂತ್ರಿಕ ತನಿಖಾ ತಂಡಗಳು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿವೆ ಎಂದು ಪೊಲೀಸರು ಹೇಳಿದ್ದಾರೆ.

ಚಲಿಸುತ್ತಿದ್ದ ಬಸ್‌ನಲ್ಲಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದಿಂದ ತಮ್ಮ ಸಂಬಂಧಿಕರ ಮನೆಗೆ ತೆರಳುತ್ತಿದ್ದ 16 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಸ್ಲೀಪರ್ ಬಸ್‌ನಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ದೆಹಲಿ ಎನ್‌ಸಿಆರ್ ವ್ಯಾಪ್ತಿಯಲ್ಲಿ ಇತ್ತೀಚೆಗಷ್ಟೆ ನಡೆದಿತ್ತು. ಬಾಲಕಿ ಮಾರ್ಗಮಧ್ಯೆ ತಪ್ಪಾಗಿ ಬೇರೆ ನಿಲ್ದಾಣದಲ್ಲಿ ಇಳಿದಿದ್ದಳು ಎನ್ನಲಾಗಿದೆ. ರಾತ್ರಿ ವೇಳೆ ಅಪರಿಚಿತ ಪ್ರದೇಶದಲ್ಲಿ ಸಿಲುಕಿದ್ದ ಆಕೆ ಆ ಮಾರ್ಗವಾಗಿ ತೆರಳುತ್ತಿದ್ದ ಖಾಲಿ ಸ್ಲೀಪರ್ ಬಸ್‌ ಏರಿದ್ದಳು. ಈ ವೇಳೆ ಡ್ರೌರ್‌ ಮತ್ತು ಕಂಡಕ್ಟರ್‌ ಸಾಮೂಹಿಕ ಅತ್ಯಾಚಾರ ಎಸಗಿದ್ದರು.

ಉತ್ತರ ಪ್ರದೇಶದ ಮೈನ್‌ಪುರಿ ಮೂಲದ 11ನೇ ತರಗತಿಯ ವಿದ್ಯಾರ್ಥಿನಿ, ಆಗಸ್ಟ್ 4ರಂದು ಕುಟುಂಬದವರೊಂದಿಗೆ ಮನಸ್ತಾಪ ಮಾಡಿಕೊಂಡು ನೋಯ್ಡಾದಲ್ಲಿರುವ ಸೋದರ ಸಂಬಂಧಿ ಮನೆಗೆ ಹೊರಟಿದ್ದಳು. ಆದರೆ ರಾತ್ರಿ ವೇಳೆ ಭಾರಿ ಮಳೆಯಿಂದಾಗಿ ಆಕೆ ತಪ್ಪಾಗಿ ನೋಯ್ಡಾದ ಪರಿ ಚೌಕ್ ಎಂಬಲ್ಲಿ ಇಳಿದುಕೊಂಡಿದ್ದಳು. ಈ ವೇಳೆ ಆ ದಾರಿಯಾಗಿ ಬರುತ್ತಿದ್ದ ಖಾಲಿ ಸ್ಲೀಪರ್ ಬಸ್‌ ಹತ್ತಿದ್ದಳು. ಬಾಲಕಿಯ ಸಂಕಷ್ಟದಲ್ಲಿರುವುದನ್ನು ಗಮನಿಸಿದ ದುಷ್ಕರ್ಮಿಗಳು ಸಹಾಯ ಮಾಡುವುದಾಗಿ ನಂಬಿಸಿ 47 ಕಿಲೋ ಮೀಟರ್‌ ದೂರ ಕರೆದೊಯ್ದು ಕೃತ್ಯ ಎಸಗಿದ್ದರು.