Murder Case: ಪಾಕಿಸ್ತಾನಿ ಪ್ರಜೆಯಿಂದ ದಾಳಿ: ದುಬೈನಲ್ಲಿ ತೆಲಂಗಾಣ ಮೂಲದ ಇಬ್ಬರು ವ್ಯಕ್ತಿಗಳ ಹತ್ಯೆ
ದುಬೈ ಬೇಕರಿಯಲ್ಲಿ ಪಾಕಿಸ್ತಾನಿ ಪ್ರಜೆಯೊಬ್ಬರು ಧಾರ್ಮಿಕ ಘೋಷಣೆಗಳನ್ನು ಕೂಗುತ್ತಿರುವುದನ್ನು ನಿಲ್ಲಿಸಲು ಹೇಳಿದ್ದಕ್ಕೆ ತೆಲಂಗಾಣದ ಇಬ್ಬರು ಪುರುಷರ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ನಿರ್ಮಲ್ ಜಿಲ್ಲೆಯ ಸೋನ್ ಗ್ರಾಮದ ಅಷ್ಟಪು ಪ್ರೇಮಸಾಗರ್ (35) ಅವರನ್ನು ಏಪ್ರಿಲ್ 11 ರಂದು ಕತ್ತಿಯಿಂದ ಕೊಲ್ಲಲಾಯಿತು.


ಹೈದರಾಬಾದ್: ದುಬೈ ಬೇಕರಿಯಲ್ಲಿ ಪಾಕಿಸ್ತಾನಿ ಪ್ರಜೆಯೊಬ್ಬರು ಧಾರ್ಮಿಕ ಘೋಷಣೆಗಳನ್ನು ಕೂಗುತ್ತಿರುವುದನ್ನು ನಿಲ್ಲಿಸಲು ಹೇಳಿದ್ದಕ್ಕೆ ತೆಲಂಗಾಣದ ಇಬ್ಬರು ಪುರುಷರ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ನಿರ್ಮಲ್ ಜಿಲ್ಲೆಯ ಸೋನ್ ಗ್ರಾಮದ ಅಷ್ಟಪು ಪ್ರೇಮಸಾಗರ್ (35) ಅವರನ್ನು ಏಪ್ರಿಲ್ 11 ರಂದು ಕತ್ತಿಯಿಂದ ಕೊಲ್ಲಲಾಯಿತು ಎಂದು ಅವರ ಚಿಕ್ಕಪ್ಪ ಪೋಶೆಟ್ಟಿ ತಿಳಿಸಿದ್ದಾರೆ. ಅವರು ಕೆಲಸ ಮಾಡುತ್ತಿದ್ದ ಬೇಕರಿಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಪ್ರೇಮಸಾಗರ್ ಕಳೆದ ಐದು-ಆರು ವರ್ಷಗಳಿಂದ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದರು. ಕೊನೆಯದಾಗಿ ಅವರು ಎರಡು ವರ್ಷಗಳ ಹಿಂದೆ ವರ್ಷಗಳ ಹಿಂದೆ ತಮ್ಮ ಕುಟುಂಬವನ್ನು ಭೇಟಿ ಮಾಡಿದ್ದರು ಎಂದು ಪೋಶೆಟ್ಟಿ ಹೇಳಿದರು. ಪ್ರೇಮಸಾಗರ್ ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ. ಅವರ ಕುಟುಂಬ ಸದಸ್ಯರಿಗೆ ದುರಂತದ ಬಗ್ಗೆ ಯಾವುದೇ ಮಾಹಿತಿ ನೀಡಲಾಗಿಲ್ಲ ಎಂದು ಪೋಶೆಟ್ಟಿ ಹೇಳಿದ್ದಾರೆ. ಅವರ ಮೃತ ದೇಹವನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು. ಪ್ರೇಮ್‌ಸಾಗರ್ ಅವರ ಕುಟುಂಬದ ಆರ್ಥಿಕ ಸ್ಥಿತಿ ಕಳಪೆಯಾಗಿದ್ದು, ಸರ್ಕಾರವು ಅವರಿಗೆ ನೆರವು ನೀಡಬೇಕೆಂದು ಅವರು ವಿನಂತಿಸಿದರು.
ಏತನ್ಮಧ್ಯೆ, ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರು, ಎರಡನೇ ಮೃತ ವ್ಯಕ್ತಿಯ ಹೆಸರು ಶ್ರೀನಿವಾಸ್ ಎಂದು ಹೇಳಿದ್ದು, ಅವರು ನಿಜಾಮಾಬಾದ್ ಜಿಲ್ಲೆಯವರು. ದಾಳಿಯಲ್ಲಿ ಮೂರನೇ ವ್ಯಕ್ತಿ ಸಾಗರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರ ಪತ್ನಿ ಭವಾನಿ ನಿಜಾಮಾಬಾದ್ ಜಿಲ್ಲೆಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ದುಬೈನಲ್ಲಿ ತೆಲಂಗಾಣದ ಇಬ್ಬರು ತೆಲುಗು ಯುವಕರಾದ ನಿರ್ಮಲ್ ಜಿಲ್ಲೆಯ ಅಷ್ಟಪು ಪ್ರೇಮಸಾಗರ್ ಮತ್ತು ನಿಜಾಮಾಬಾದ್ ಜಿಲ್ಲೆಯ ಶ್ರೀನಿವಾಸ್ ಅವರ ಕ್ರೂರ ಹತ್ಯೆಯಿಂದ ತೀವ್ರ ಆಘಾತವಾಗಿದೆ. ಈ ವಿಷಯದ ಬಗ್ಗೆ ಗೌರವಾನ್ವಿತ ವಿದೇಶಾಂಗ ಸಚಿವ ಎಸ್ ಜೈಶಂಕರ್ ಜಿ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಅವರು ಮೃತರ ಕುಟುಂಬಗಳಿಗೆ ಸಂಪೂರ್ಣ ಬೆಂಬಲ ಮತ್ತು ಮೃತದೇಹಗಳನ್ನು ತುರ್ತಾಗಿ ಸ್ವದೇಶಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Murder Case: ಇಡೀ ದೇಶವನ್ನೇ ಬೆಚ್ಚಿ ಬೀಳಿಸೋ ಮತ್ತೊಂದು ಘಟನೆ; 8 ತಿಂಗಳ ಗರ್ಭಿಣಿಯನ್ನು ಹತ್ಯೆಗೈದ ಪಾಪಿ ಪತಿ
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಅವರು ದುಃಖ ವ್ಯಕ್ತಪಡಿಸಿದ್ದು, ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು. ಏಪ್ರಿಲ್ 11 ರಂದು ದುಬೈನ ಮಾಡ್ರನ್ ಬೇಕರಿ ಎಲ್ಎಲ್ ಸಿ ಯಲ್ಲಿ ಕೆಲಸದ ಸಮಯದಲ್ಲಿ ಪಾಕಿಸ್ತಾನಿ ಪ್ರಜೆಯಿಂದ ಕ್ರೂರವಾಗಿ ಹಲ್ಲೆಗೊಳಗಾದ ತೆಲಂಗಾಣದ ಕಾರ್ಮಿಕರಾದ ಷ್ಟಪು ಪ್ರೇಮ್ ಸಾಗರ್ ಮತ್ತು ಶ್ರೀ ಶ್ರೀನಿವಾಸ್ ಅವರ ಹತ್ಯೆ ತೀವ್ರ ದುಃಖಿತನಾಗಿದ್ದೇನೆ ಎಂದು ಹೇಳಿದ್ದಾರೆ.