ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

5ರ ಹರೆಯದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಭೀಕರ ಕೊಲೆ; 22 ವರ್ಷದ ಕಾಮುಕನ ಬಂಧನ

Crime News: ತಮಿಳುನಾಡಿನಲ್ಲಿ ದೇಶವೇ ಬೆಚ್ಚಿ ಬೀಳುವ ಅಪರಾಧ ಕೃತ್ಯವೊಂದು ನಡೆದಿದ್ದು, 22 ವರ್ಷದ ಕಾಮುಕನೊಬ್ಬ 5 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ. ಇದನ್ನು ವಿರೋಧಿಸಿದ ಹಸುಳೆಯನ್ನು ಕೊಂದಿದ್ದಾನೆ. ಆರೋಪಿಯನ್ನು ಅಸ್ಸಾಂ ಮೂಲದ ಬೋಲ್‌ದೇವ ಮಸುವಾ ಎಂದು ಗುರುತಿಸಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

5 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಕೊಲೆ

ಸಾಂದರ್ಭಿಕ ಚಿತ್ರ.

Profile Ramesh B Jun 22, 2025 8:52 PM

ಚೆನ್ನೈ: 22 ವರ್ಷದ ಕಾಮುಕ ಯುವಕನ ಹುಚ್ಚಾಟಕ್ಕೆ 5 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ (Crime News). ಕಾಂಚಿಪುರಂನಲ್ಲಿ ಈ ಅಮಾನುಷ ಘಟನೆ ನಡೆದಿದ್ದು, 5 ವರ್ಷದ ಬಾಲಕನ ಮೇಲೆ 22 ವರ್ಷದ ಯುವಕನೊಬ್ಬ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಇದನ್ನು ತಡೆದು ತಪ್ಪಿಸಿಕೊಳ್ಳಲು ಯತ್ನಿಸಿದ್ದಕ್ಕೆ ಕೋಪಗೊಂಡು ಬಾಲಕನ್ನು ಕೊಲೆ ಮಾಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಕೊಲೆಗೈದ ವ್ಯಕ್ತಿಯನ್ನು ಅಸ್ಸಾಂ ಮೂಲದ ಬೋಲ್‌ದೇವ ಮಸುವಾ ಎಂದು ಗುರುತಿಸಲಾಗಿದ್ದು, ಸದ್ಯ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಬಾಲಕ ಬಿಹಾರದ ಕರುಮಂಗಝನಿ ಮೂಲದ ದಂಪತಿಯ ಮಗನಾಗಿದ್ದು, ಇವರು ಕೆಲ ಸಮಯಗಳಿಂದ ಕಾಂಚಿಪುರಂನಲ್ಲಿ ವಾಸವಾಗಿದ್ದರು. ಈ ಬಾಲಕ ಜೂ. 9ರಂದು ನಾಪತ್ತೆಯಾಗಿದ್ದ. ಆತನ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ಮಧ್ಯೆ ಗ್ರಾಮದ ಸಮೀಪದ ನಿರ್ಜನ ಪ್ರದೇಶದಿಂದ ಮಗುವಿನ ಕೊಳೆತ ಶವ ಪತ್ತೆಯಾಗಿತ್ತು. ಬಾಲಕನ ಶರೀರದಲ್ಲಿ ಗಾಯ ಕಂಡುಬಂದಿತ್ತು.

ಈ ಸುದ್ದಿಯನ್ನೂ ಓದಿ: Physical Abuse: ಮೊಬೈಲ್‌ನಲ್ಲಿ ಮಹಿಳೆಯರ 13,500 ಕ್ಕೂ ಹೆಚ್ಚು ಅಶ್ಲೀಲ ಫೋಟೋ ಪತ್ತೆ; ಬ್ಲಾಕ್‌ಮೇಲ್‌ ಮಾಡುತ್ತಿದ್ದ ಸೈಕೋ ಅರೆಸ್ಟ್‌

ಆರಂಭದಲ್ಲಿ ಬಾಲಕ ಬಿದ್ದು ತಲೆಗೆ ಗಾಯವಾಗಿ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದರು. ಆದಾಗ್ಯೂ ಆ ಪ್ರದೇಶದಲ್ಲಿ ಅಳವಡಿಸಿದ್ದ ಸಿಸಿಟಿವಿಯ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಬಾಲಕನನ್ನು ಮಸುವಾ ಕರೆದುಕೊಂಡು ಹೋಗುತ್ತಿರುವುದು ಕಂಡುಬಂತು. ಈ ಸುಳಿವಿನ ಆಧಾರದ ಮೇಲೆ ಆತನನ್ನು ಪತ್ತೆಹಚ್ಚಿ ವಶಕ್ಕೆ ತೆಗೆದುಕೊಳ್ಳಲಾಯಿತು.

ವಿಚಾರಣೆಯ ವೇಳೆ ಮಸುವಾ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಹುಡುಗ ಅಳಲು ಮತ್ತು ವಿರೋಧಿಸಲು ಪ್ರಾರಂಭಿಸಿದಾಗ ಮಸುವಾ ಅವನನ್ನು ಸುಮ್ಮನಾಗಿಸಲು ಕಲ್ಲಿನಿಂದ ಹೊಡೆದು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ. ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಸದ್ಯ ಈ ಪ್ರಕರಣ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡು ಪೊಲೀಸರು ತನಿಖೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ. ʼʼನಾಪತ್ತೆ ದೂರು ದಾಖಲಿಸಿಕೊಂಡು ಮಗುವಿನ ಪತ್ತೆಗೆ ಕ್ರಮ ಕೈಗೊಂಡಿದ್ದೆವು. ತನಿಖೆ ವೇಳೆ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಯತ್ನ ಮತ್ತು ಕೊಲೆಯ ಆಘಾತಕಾರಿ ಅಂಶ ಬಯಲಾಗಿದೆ. ಸದ್ಯ ಆರೋಪಿಯನ್ನು ಪ್ರಕರಣದ ಬಗ್ಗೆ ಪ್ರಶ್ನಿಸಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆʼʼ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂತ್ರಸ್ತ ಬಾಲಕನ ಕುಟುಂಬವನ್ನು ಬೆಂಬಲಿಸುವುದರ ಜತೆಗೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಈ ಪ್ರಕರಣವು ಮಕ್ಕಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನೆಲೆಸಿರುವ ವಲಸೆ ಬಂದ ಸಮುದಾಯಗಳ ಸುರಕ್ಷತೆ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ.

80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಪಾಪಿ

ಕೆಲವು ದಿನಗಳ ಹಿಂದೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 23 ವರ್ಷದ ಸುಂದರವೇಲು ಎಂಬಾತ ವಾಕಿಂಗ್‌ ಮಾಡುತ್ತಿದ್ದ 80 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿತ್ತು. ತಲೆ ಮರೆಸಿಕೊಂಡಿದ್ದ ಆತನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ವಶಕ್ಕೆ ಪಡೆದಿದ್ದರು.