ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೀದರ್ ಪಶು ವೈದ್ಯಕೀಯ ವಿವಿಯ 45 ಕೋಟಿ ರೂ. ಹಗರಣ; ಮಾಜಿ ಉಪಕುಲಪತಿ ಸೇರಿ 6 ಮಂದಿ ಅರೆಸ್ಟ್‌

Bidar Veterinary University scandal: 2017-18ರ ಅವಧಿಯಲ್ಲಿ ಬೀದರ್‌ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಸಾಮಗ್ರಿ ಖರೀದಿಯಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ 45 ಕೋಟಿ ರೂ.ಗೂ ಅಧಿಕ ಹಣ ದರ್ಬಳಕೆ ಮಾಡಲಾಗಿತ್ತು. ಬಳಿಕ 2021ರಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಇದೀಗ ಆರು ಮಂದಿ ಆರೋಪಿಗಳ ಬಂಧನವಾಗಿದೆ.

ಬೀದರ್ ಪಶು ವಿವಿ ಹಗರಣ; ಮಾಜಿ ಉಪಕುಲಪತಿ ಸೇರಿ 6 ಮಂದಿ ಅರೆಸ್ಟ್‌

-

Prabhakara R
Prabhakara R May 26, 2026 3:37 PM

ಬೀದರ್: ಬೀದರ್ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂ. ಬಹುಕೋಟಿ ಹಗರಣದಲ್ಲಿ (Bidar Veterinary University scandal) ಮಾಜಿ ಉಪಕುಲಪತಿ ಸೇರಿ ಆರು ಜನರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಪಶು ವಿವಿಯ ಮಾಜಿ ಉಪಕುಲಪತಿ ಪ್ರೊ. ಎಚ್.ಡಿ. ನಾರಾಯಣಸ್ವಾಮಿ, 2017-18ರ ಅವಧಿಯಲ್ಲಿ ವಿವಿಯ ಹಣಕಾಸು ನಿಯಂತ್ರಣಾಧಿಕಾರಿಯಾಗಿದ್ದ ಕೆ.ಎಲ್. ಸುರೇಶ್, ಮೃತ್ಯುಂಜಯ ಹಿರೇಮಠ, ಬೋಪಣ್ಣ, ಮಂಜುನಾಥ ಹಾಗೂ ರಾಮಗೊಂಡ ಬಂಧಿತರು.

ಏನಿದು ಪ್ರಕರಣ?

2017-18ರ ಅವಧಿಯಲ್ಲಿ ವಿಶ್ವವಿದ್ಯಾಲಯದ ಸಾಮಗ್ರಿ ಖರೀದಿಯಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ 45 ಕೋಟಿ ರೂ.ಗೂ ಅಧಿಕ ಹಣವನ್ನು ಲೂಟಿ ಮಾಡಿದ್ದರು. ಬಳಿಕ 2021ರಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ತನಿಖೆಯನ್ನು ತೀವ್ರಗೊಳಿಸಿ ಕಳೆದ 2025ರ ಸೆಪ್ಟೆಂಬರ್ 10ರಂದು ಏಕಕಾಲಕ್ಕೆ ರಾಜ್ಯದ 25ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.

ಈ ಹಗರಣದಲ್ಲಿ ವಿಶ್ವವಿದ್ಯಾಲಯದ ಉನ್ನತಾಧಿಕಾರಿಗಳು, ಸಿಬ್ಬಂದಿ ಹಾಗೂ ಖಾಸಗಿ ಎಂಟರ್‌ಪ್ರೈಸಸ್ ಮಾಲೀಕರು ಶಾಮೀಲಾಗಿ ಯಾವುದೇ ಸಾಮಗ್ರಿ ಖರೀದಿಸದೆಯೇ ನಕಲಿ ಬಿಲ್‌ಗಳನ್ನು ಸೃಷ್ಟಿಸಿರುವುದು ಸಾಬೀತಾಗಿದೆ. ಇದೀಗ ಬೀದರ್ ಜಿಲ್ಲಾ ಸತ್ರ ನ್ಯಾಯಾಲಯ ವಾರೆಂಟ್ ಹೊರಡಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ಸದ್ಯ ಬಂಧಿತ ಆರೋಪಿಗಳನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಲಿದ್ದಾರೆ.

ಲೋಕಾಯುಕ್ತ ಎಡಿಜಿಪಿ ಮನೀಷ್ ಕರ್ಬಿಕರ್, ಐಜಿಪಿ ಎ.ಎಸ್.ಸುಬ್ರಹ್ಮಣ್ಯೇಶ್ವರರಾವ್, ಎಸ್ಪಿಗಳಾದ ಬದ್ರಿನಾಥ, ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಬೀದ‌ರ್ ಲೋಕಾಯುಕ್ತ ಡಿವೈಎಸ್ಪಿ ಹಣಮಂತರಾಯ, ಸಂತೋಷ ರಾಠೋಡ್ ಸೇರಿದಂತೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಿಯಕರ, ಸಹೋದರಿಯೊಂದಿಗೆ ಸೇರಿ ಪತಿಗೆ ಸ್ಕೆಚ್‌; ಚಿತ್ರಹಿಂಸೆ ಕೊಟ್ಟು ಗಂಡನನ್ನೇ ಕೊಂದ ಪತ್ನಿ

ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಜೂನ್ 1ಕ್ಕೆ ಮುಂದೂಡಿಕೆ

ಧಾರವಾಡ: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷೆ ಅಮಾನತ್ತಿನಲ್ಲಿಟ್ಟು, ಜಾಮೀನು ನೀಡಲು ಕೋರಿದ್ದ ಮಾಜಿ ಶಾಸಕ ವಿನಯ ಕುಲಕರ್ಣಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ.

ವಿಚಾರಣೆ ವೇಳೆ ಶಿಕ್ಷೆ ಆಗಿರುವುದರಿಂದ ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹಗೊಂಡಿದ್ದಾರೆ. ಖಾಲಿ ಸ್ಥಾನಕ್ಕೆ ಆಯೋಗ ಚುನಾವಣೆ ಘೋಷಿಸುವ ಸಾಧ್ಯತೆ ಇದೆ. ಹೀಗಾಗಿ ತುರ್ತು ವಿಚಾರಣೆಗೆ ವಿನಯ್ ಕುಲಕರ್ಣಿ ಪರ ವಕೀಲರು ಮನವಿ ಮಾಡಿದರು. ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಸಿಬಿಐ ವಕೀಲರಿಗೆ ಸೂಚನೆ ನೀಡಿ, ವಿಚಾರಣೆಯನ್ನು ಹೈಕೋರ್ಟ್ ವಿಭಾಗಿಯ ಪೀಠ ಜೂನ್ 1ಕ್ಕೆ ಮುಂದೂಡಿತು.