Bike Accident: ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ, ಬಾಲಕ ದಾರುಣ ಸಾವು.!
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಸೋಮೇಶ್ವರ ಗ್ರಾಮದ ಸಮೀಪ ಭೀಕರ ಅಪಘಾತವೊಂದು ಸಂಭವಿಸಿದೆ. ಶಿಡ್ಲಘಟ್ಟ ತಾಲೂಕಿನ ಸಾದಲಿ ಗ್ರಾಮದ ಅರವಿಂದ್ (17) ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ಪೇರೆಸಂದ್ರದಿಂದ ಸ್ವಗ್ರಾಮ ಸಾದಲಿಯತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
-
ಶಿಡ್ಲಘಟ್ಟ: ತಾಲೂಕಿನ ಸಾದಲಿ ಗ್ರಾಮದ 17 ವರ್ಷದ ಅರವಿಂದ್ ಎಂಬ ಬಾಲಕ ಬೈಕ್ ಚಾಲನೆ ಮಾಡುವಾಗ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದು ಮತ್ತೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಕಳೆದ ತಿಂಗಳಷ್ಟೇ ಕುಟುಂಬದವರೊಂದಿಗೆ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿ ಕೊಂಡಿದ್ದ ಬಾಲಕ, ಕೇವಲ ಹದಿನೈದು ದಿನ ಕಳೆಯುವಷ್ಟರಲ್ಲಿ ಸಾವನ್ನಪ್ಪಿರುವುದು ಕುಟುಂಬದವರ ಆಕ್ರಂದನಕ್ಕೆ ಕಾರಣವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಸೋಮೇಶ್ವರ ಗ್ರಾಮದ ಸಮೀಪ ಭೀಕರ ಅಪಘಾತವೊಂದು ಸಂಭವಿಸಿದೆ. ಶಿಡ್ಲಘಟ್ಟ ತಾಲೂಕಿನ ಸಾದಲಿ ಗ್ರಾಮದ ಅರವಿಂದ್ (17) ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ಪೇರೆಸಂದ್ರದಿಂದ ಸ್ವಗ್ರಾಮ ಸಾದಲಿಯತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಇದನ್ನೂ ಓದಿ: Road Accident: ಅವಲಗುರ್ಕಿ ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್ ಆಗಿದ್ದ ಪ್ರಕಾಶ್ ಸಾವು
ಬೈಕ್‌ನಲ್ಲಿ ಮೂವರು ಸ್ನೇಹಿತರು ಪ್ರಯಾಣಿಸುತ್ತಿದ್ದು, ವೇಗವಾಗಿ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನುವ ಮಾಹಿತಿ ಯಿದ್ದು ಡಿಕ್ಕಿಯ ರಭಸಕ್ಕೆ ಮೂವರೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದಾರೆ.
ಅಪಘಾತದಿಂದ ಅರವಿಂದ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿ ದ್ದಾನೆ. ಮತ್ತೋರ್ವ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಇನ್ನೊಬ್ಬನಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಗಾಯಾಳುಗಳನ್ನು ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ಚಿಕ್ಕಬಳ್ಳಾ ಪುರ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಅರವಿಂದ್‌ನನ್ನು ಉಳಿಸಿಕೊಳ್ಳಲು ಸಾಧ್ಯ ವಾಗಿಲ್ಲ.
ಇನ್ನೂ ಅಪಘಾತದಲ್ಲಿ ಮಗನನ್ನು ಕಳೆದುಕೊಂಡ ತಂದೆ-ತಾಯಿ ಹಾಗೂ ಬಂಧುಗಳ ಆಕ್ರಂದನ ಮುಗಿಲು ಮುಟ್ಟಿದ್ದು, ಜಿಲ್ಲಾಸ್ಪತ್ರೆ ಆವರಣದಲ್ಲಿ ಮನಕಲಕುವ ದೃಶ್ಯಗಳು ಕಂಡುಬAದವು. ಬಾಲಕನ ಸ್ನೇಹಿತರು ಹಾಗೂ ಗ್ರಾಮಸ್ಥರೂ ದುಃಖದಲ್ಲಿ ಮುಳುಗಿದ್ದಾರೆ. ಘಟನಾ ಸ್ಥಳಕ್ಕೆ ಪೇರೆಸಂದ್ರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿ ದ್ದಾರೆ.