ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bidar News: ಹೆಡ್‌ ಮಾಸ್ಟರ್‌ ಕಿರುಕುಳ ಆರೋಪ; ಶಾಲೆಯ 4ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಬೀದರ್‌ನ ಪ್ರತಾಪ್ ನಗರದ ಬಳಿ ಘಟನೆ ನಡೆದಿದೆ. ಖಾಸಗಿ ಶಾಲೆಯಲ್ಲಿ ಮುಖ್ಯ ಶಿಕ್ಷಕ ಕಿರುಕುಳ ನೀಡಿದ್ದಾರೆ ಎಂದು 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೀದರ್‌ನಲ್ಲಿ ಶಾಲೆಯ 4ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಮೃತ ವಿದ್ಯಾರ್ಥಿ ಸಮೀರ್. -

Prabhakara R
Prabhakara R Jun 10, 2026 3:18 PM

ಬೀದರ್: ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್‌ನ (Bidar News) ಪ್ರತಾಪ್ ನಗರದ ಬಳಿ ನಡೆದಿದೆ. 16 ವರ್ಷದ ಸಮೀರ್ ಮೃತಪಟ್ಟ ವಿದ್ಯಾರ್ಥಿ. ಖಾಸಗಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಎಂದು ತಿಳಿದುಬಂದಿದೆ.

ಇಂದು ಜೂ.10 ಬೆಳಗ್ಗೆ ಸ್ಕೂಲ್‌ಗೆ ಹೋಗಿ ನಾಲ್ಕನೇ ಮಹಡಿಯಿಂದ ಹಾರಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡ ವಿಷಯವನ್ನು ಪೋಷಕರಿಗೆ ಹೇಳದೇ ವಿದ್ಯಾರ್ಥಿಯ ಮೃತದೇಹವನ್ನು ಶಾಲೆಯ ಆಡಳಿತ ಮಂಡಳಿ ಬ್ರಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ್ದಾರೆ. ಹೇಳದೇ ಕೇಳದೇ ಆಸ್ಪತ್ರೆಗೆ ರವಾನಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಸದ್ಯ ಶವಗಾರದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಕುರಿತು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಸಾವು

ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಹಾಲೇನಹಳ್ಳಿಯಲ್ಲಿ ನಡೆದಿದೆ. ಸುಮ (55) ಮೃತ ಗೃಹಿಣಿ. ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ನಡೆದಿದ್ದು, ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ

ಮೃತ ಸುಮ ಪತಿ ರಾಜೇಶ್ ಉದ್ಯಮಿಯಾಗಿದ್ದಾರೆ. ಸಾವಿನ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಡೆತ್ ನೋಟ್ ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸ್ಥಳಕ್ಕೆ ಬಸವನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.