ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಒನ್‌ವೇನಲ್ಲಿ ಕಾರು ಚಲಾಯಿಸಿ ಬೈಕ್‌ಗೆ ಡಿಕ್ಕಿ; ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದು ಮಹಿಳೆ ಸಾವು

ಭಾನುವಾರ ಬೆಳ್ಳಂ ಬೆಳಿಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್‌ಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ (flyover) ಮೇಲಿಂದ ಕೆಳಗೆ ಬಿದ್ದು ಮಹಿಳೆ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಬಚ್ಚಳ್ಳಿ ಗೇಟ್ ಫ್ಲೈಓವರ್​ನಲ್ಲಿ ನಡೆದಿದೆ.

ಅಪಘಾತ; ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದು ಮಹಿಳೆ ಸಾವು

Vishakha Bhat Vishakha Bhat Aug 24, 2025 11:16 AM

ಬೆಂಗಳೂರು: ಭಾನುವಾರ ಬೆಳ್ಳಂ ಬೆಳಿಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್‌ಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ (flyover) ಮೇಲಿಂದ ಕೆಳಗೆ ಬಿದ್ದು ಮಹಿಳೆ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಬಚ್ಚಳ್ಳಿ ಗೇಟ್ ಫ್ಲೈಓವರ್​ನಲ್ಲಿ ನಡೆದಿದೆ. ಬೆಂಗಳೂರಿನ ಬಾಣಸವಾಡಿ ಮೂಲದ ನೇತ್ರಾವತಿ (31) ಮೃತ ಮಹಿಳೆ. ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಬಚ್ಚಳ್ಳಿ ಗೇಟ್ ಫ್ಲೈಓವರ್​ನಲ್ಲಿ ನಡೆದಿದೆ. ಬೆಂಗಳೂರಿನ ಬಾಣಸವಾಡಿ ಮೂಲದ ನೇತ್ರಾವತಿ (31) ಮೃತ ಮಹಿಳೆ. ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೂಪರ್‌ವೈಸರ್ ಆಗಿದ್ದ ನೇತ್ರಾವತಿ ಪತಿ, 2 ತಿಂಗಳ ಹಿಂದೆ ಕೆಲಸ ಬಿಟ್ಟಿದ್ದರು. ನೇತ್ರಾವತಿ ಕೂಡ ಖಾಸಗಿ ಟೀ ಶಾಪ್‌ನಲ್ಲಿ ಸೂಪರ್‌ವೈಸರ್ ಆಗಿದ್ದರು. ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಕಡೆ ದಂಪತಿ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಒನ್‌ವೇನಲ್ಲಿ ವೇಗವಾಗಿ ಬಂದ ಕಾರಿನಿಂದ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿ ರಭಸಕ್ಕೆ ನೇತ್ರಾವತಿ ಫ್ಲೈಓವರ್‌ ಮೇಲಿಂದ ಕೆಳಗೆ ಬಿದಿದ್ದು, ತಲೆಗೆ ಬಲವಾದ ಪೆಟ್ಟು ಹಿನ್ನಲೆ ಸಾವನ್ನಪ್ಪಿದ್ದಾರೆ. ಇನ್ನು ಬೈಕ್‌ನ ಎಡ ಭಾಗಕ್ಕೆ ಬಿದ್ದಿದ್ದರಿಂದ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡಿರುವ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಪಘಾತವೆಸಗಿ ಕಾರಿನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಸದ್ಯ ಪೊಲೀಸರು ಕಾರು ಚಾಲಕನ ಹುಡುಕಾಟ ನಡೆಸಿದ್ದಾರೆ.

ಈ ಸುದ್ದಿಯನ್ನೂ ಓದಿ: Road Accident: ನ್ಯೂಯಾರ್ಕ್ ಹೆದ್ದಾರಿಯಲ್ಲಿ ಭಾರತೀಯ ಪ್ರವಾಸಿಗರಿದ್ದ ಬಸ್‌ ಅಪಘಾತ; 5 ಸಾವು

ಪ್ರತ್ಯೇಕ ಘಟನೆಯಲ್ಲಿ, ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣದ ಹೆದ್ದಾರಿಯಲ್ಲಿ ಸಂಭವಿಸಿದೆ. ಸದ್ಯ ಪೊಲೀಸರು ಮೃತ ಬೈಕ್‌ ಸವಾರನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯಿಂದ ಬೈಕ್ ಸಮೇತ ಸವಾರನನ್ನ ಸೈಡಿಗೆ ಎಳೆದೊಯ್ದಿದೆ. ಲಾರಿ ಮುಂಭಾಗ ಹಾಗೂ ಬೈಕ್‌ ನಜ್ಜುಗುಜ್ಜು ಆಗಿದೆ. ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಮೃತದೇಹ ಶಿಫ್ಟ್‌ ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.