ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Snehamayi Krishna: ಸ್ನೇಹಮಯಿ ಕೃಷ್ಣ ಮೇಲೆ ಮತ್ತೊಬ್ಬ ಮಹಿಳೆ ದೂರು

ಪ್ರೊ. ಮೈಲಾರಪ್ಪ ವಿರುದ್ಧ ಕೊಟ್ಟಿರುವ ಕೇಸ್ ವಾಪಸ್ ಪಡೆದುಕೊಳ್ಳುವಂತೆ ಬೆದರಿಕೆ ಹಾಗೂ ಒತ್ತಡ ಹಾಕುತ್ತಿದ್ದಾರೆಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದಾರೆ. ಸದ್ಯ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಸ್ನೇಹಮಯಿ ಕೃಷ್ಣ ಅವರನ್ನು ಎ1 ಆರೋಪಿಯನ್ನಾಗಿ ಬಸವೇಶ್ವರ ನಗರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಸ್ನೇಹಮಯಿ ಕೃಷ್ಣ ಮೇಲೆ ಮತ್ತೊಬ್ಬ ಮಹಿಳೆ ದೂರು

ಸ್ನೇಹಮಯಿ ಕೃಷ್ಣ -

ಹರೀಶ್‌ ಕೇರ
ಹರೀಶ್‌ ಕೇರ Feb 23, 2026 10:13 AM

ಬೆಂಗಳೂರು, ಫೆ.23: ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ (Snehamayi Krishna) ವಿರುದ್ಧ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ. ಪವಿತ್ರ ಎಂಬ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆದರಿಕೆ ಹಾಗೂ ಪ್ರೊ. ಮೈಲಾರಪ್ಪ ವಿರುದ್ಧ ಕೊಟ್ಟಿರುವ ಕೇಸ್ ವಾಪಸ್ ಪಡೆದುಕೊಳ್ಳುವಂತೆ ಬೆದರಿಕೆ ಹಾಗೂ ಒತ್ತಡ ಹಾಕುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸದ್ಯ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಸ್ನೇಹಮಯಿ ಕೃಷ್ಣ ಅವರನ್ನು ಎ1 ಆರೋಪಿಯನ್ನಾಗಿ ಬಸವೇಶ್ವರ ನಗರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ, ಇನ್ನೊಂದು ದೂರಿಗೆ ಸಂಬಂಧಿಸಿದಂತೆ ಬಂಧನದಲ್ಲಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ನೀಡಿದ ದೂರಿನನ್ವಯ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣನನ್ನ ಬಂಧಿಸಿದ್ದಾರೆ.

ಮುಂಬಡ್ತಿಗಾಗಿ ನಟೇಶ್, ಸಿಎಸ್ ಶಾಲಿನಿ ರಜನೀಶ್‌ಗೆ ಒಂದೂವರೆ ಕೋಟಿ ಲಂಚ ನೀಡಿದ್ದಾರೆಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು. ತಮ್ಮ ವಿರುದ್ಧದ ಆರೋಪ ನಿರಾಧಾರ ಎಂದು ಸಿಎಸ್‌ ಹೇಳಿದ್ದರು. ಈ ಸಂಬಂಧ ಪೊಲೀಸ್ ಆಯುಕ್ತರಿಗೆ ಮುಡಾ ಮಾಜಿ ಆಯುಕ್ತ ನಟೇಶ್ ದೂರು ನೀಡಿದ್ದರು. ಅದರಂತೆ ಆರೆಸ್ಟ್ ಮಾಡಲಾಗಿದೆ.

ಲಂಚ ಆರೋಪ; ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಕ್ಷಮೆ ಕೋರಿದ ಸ್ನೇಹಮಯಿ ಕೃಷ್ಣ

ಸ್ನೇಹಮಯಿ ಕೃಷ್ಣ ನಕಲಿ ಆಡಿಯೋ, ನಕಲಿ ವಿಡಿಯೋ ಸೃಷ್ಟಿಸಿ ಆರೋಪ ಮಾಡಿದ್ದಾರೆಂದು ನಟೇಶ್ ದೂರು ನೀಡಿದ್ದರು. ಐಟಿ ಆಕ್ಟ್, ನಕಲಿ ದಾಖಲೆ ಸೃಷ್ಟಿ ಸೆಕ್ಷನ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ ಆರೆಸ್ಟ್ ಮಾಡಲಾಗಿದೆ. ಅಲ್ಲದೇ, ಇದೇ ವಿಚಾರವಾಗಿ ಬೆಂಗಳೂರಿನ ಶಾಂತಿನಗರದಲ್ಲಿರುವ ಸಿಸಿಬಿ ಕಚೇರಿಯಲ್ಲಿ ಸ್ನೇಹಮಯಿ ಕೃಷ್ಣರನ್ನು ವಿಚಾರಣೆ ಮಾಡಿದ್ದಾರೆ.

ಅತ್ತ ಬೆಂಗಳೂರಿನಲ್ಲಿ ಸ್ನೇಹಮಯಿ ಕೃಷ್ಣರನ್ನು ಬಂಧಿಸಿದ ಬೆನ್ನಲ್ಲೇ, ಮೈಸೂರಿನಲ್ಲಿರುವ ಸ್ನೇಹಮಯಿ ಕೃಷ್ಣ ಮನೆ ಹಾಗೂ ಕಚೇರಿ ಮೇಲೆ ಸಿಸಿಬಿ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಸ್ನೇಹಮಯಿ ಕೃಷ್ಣ ಬಳಸುತ್ತಿದ್ದ ಕಂಪ್ಯೂಟರ್‌ನಲ್ಲಿ ನೂರಾರು ಆಡಿಯೋ ಸಂದೇಶಗಳು ಸೇವ್ ಆಗಿರುವುದು ಪತ್ತೆಯಾಗಿದೆ. ಕಳೆದ 4 ದಿನಗಳ ಹಿಂದೆ ನಟೇಶ್ ಸಂಬಂಧ 6 ಸೆಕೆಂಡ್‌ಗಳ ಆಡಿಯೋವೊಂದನ್ನು ರಿಲೀಸ್ ಮಾಡಿದ್ದರು. ಆ ಆಡಿಯೋಗಳ ಬಗ್ಗೆಯೂ ಪೊಲೀಸರು ತಲಾಶ್ ಮಾಡಿದ್ದಾರೆ. ಸ್ನೇಹಮಯಿ ಕೃಷ್ಣ ಅವರ ಪತ್ನಿಯನ್ನು ಕೂಡ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Snehamayi Krishna: ಬಂಧಿತ ಸ್ನೇಹಮಯಿ ಕೃಷ್ಣ ಮನೆ, ಕಚೇರಿಯಲ್ಲಿ ತೀವ್ರ ತಲಾಶೆ, ಮಹತ್ವದ ದಾಖಲೆ ಜಪ್ತಿ