ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹನಿಟ್ರ್ಯಾಪ್‌ ಬಲೆಗೆ ಬಿದ್ದ ಸೇನಾ ಮಾಜಿ ಕ್ಯಾಪ್ಟನ್; ಪಾಕಿಸ್ತಾನ ಮಹಿಳೆ ಜತೆ ರಕ್ಷಣಾ ಮಾಹಿತಿ ಹಂಚಿಕೆ?

Army Former Captain Arrested: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಮಹಿಳೆಯೊಂದಿಗೆ ಹಂಚಿಕೊಂಡ ಆರೋಪದ ಮೇಲೆ ಭಾರತೀಯ ಸೇನೆಯ ನಿವೃತ್ತ ಕ್ಯಾಪ್ಟನ್ ಬಾಬು ಅವರನ್ನು ಬಂಧಿಸಲಾಗಿದೆ. ಈ ಮಾಹಿತಿಯನ್ನು ಬೇರೆ ಯಾರಿಗಾದರೂ ರವಾನಿಸಲಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಕ್ಷಣಾ ಮಾಹಿತಿ ಹಂಚಿಕೊಂಡಿದ್ದಕ್ಕಾಗಿ ಸೇನಾ ಮಾಜಿ ಕ್ಯಾಪ್ಟನ್ ಬಂಧನ

ಸೇನಾ ಮಾಜಿ ಕ್ಯಾಪ್ಟನ್ ಬಾಬು (ಸಂಗ್ರಹ ಚಿತ್ರ) -

Priyanka P
Priyanka P Oct 26, 2026 8:15 PM

ನವದೆಹಲಿ, ಅ. 26: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗೆ (DRDO) ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಮಹಿಳೆಯೊಂದಿಗೆ ಹಂಚಿಕೊಂಡ ಆರೋಪದ ಮೇಲೆ ತಮಿಳುನಾಡಿನ (Tamil Nadu) ವೆಲ್ಲೂರಿನಲ್ಲಿ 52 ವರ್ಷದ ಭಾರತೀಯ ಸೇನೆಯ ನಿವೃತ್ತ ಕ್ಯಾಪ್ಟನ್ ಬಾಬು ಅವರನ್ನು ಬಂಧಿಸಲಾಗಿದೆ. ಭಾರತದ ಭದ್ರತಾ ಪಡೆಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಲು ಆ ಮಹಿಳೆ ಈ ಸಂಬಂಧವನ್ನು ಬಳಸಿಕೊಂಡಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಈ ಮಾಹಿತಿಯನ್ನು ಬೇರೆ ಯಾರಿಗಾದರೂ ರವಾನಿಸಲಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ, ಆ ಮಹಿಳೆಯ ಗುರುತು ಮತ್ತು ರಾಷ್ಟ್ರೀಯತೆಯನ್ನು ಇನ್ನೂ ಪತ್ತೆಹಚ್ಚಬೇಕಿದೆ.

ಇಂತಹ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ. ಆರೋಪಿಯು ಈ ಹಿಂದೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಕೆಲಸ ಮಾಡಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆ ಮಹಿಳೆ ಪಾಕಿಸ್ತಾನದವಳೇ ಎಂಬ ಬಗ್ಗೆ ಪೊಲೀಸರು ಇನ್ನೂ ಖಚಿತಪಡಿಸಿಕೊಂಡಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಸ್ಥಳೀಯ ಗುಪ್ತಚರ ಮೂಲಗಳು ಹಾಗೂ ಇತರ ತನಿಖಾ ಸಂಸ್ಥೆಗಳಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ ಈ ಬಂಧನ ನಡೆದಿದೆ. ಆರೋಪಿಯನ್ನು ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ, ವೆಲ್ಲೂರಿನ ಸಮೀಪವಿರುವ ಆರಣಿ ಬಳಿಯ ಅಡಗುತಾಣದಿಂದ ಪತ್ತೆಹಚ್ಚಲಾಗಿದೆ.

ಸೇನೆ, ಗಡಿ ಭದ್ರತಾ ಪಡೆ, ರೈಲ್ವೆ ಬಗ್ಗೆ ಬೇಹುಗಾರಿಕೆ: ಪಶ್ಚಿಮ ಬಂಗಾಳದಲ್ಲಿ ಪಾಕಿಸ್ತಾನದ ವ್ಯಕ್ತಿಯ ಬಂಧನ

ವರದಿ ಪ್ರಕಾರ, ಬಾಬು 1994ರಲ್ಲಿ ನಿವೃತ್ತರಾಗುವ ಮೊದಲು ಭಾರತೀಯ ಸೇನೆಯ ಫಿರಂಗಿ ರೆಜಿಮೆಂಟ್‌ನಲ್ಲಿ ಕ್ಯಾಪ್ಟನ್ ಆಗಿ ಸೇವೆ ಸಲ್ಲಿಸಿದ್ದರು. ಅವರು ಸೇನೆಯಲ್ಲಿ ಹೊಂದಿದ್ದ ಅನುಭವ ಮತ್ತು ನಂತರ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯೊಂದಿಗಿನ ಅವರ ಸಂಬಂಧ ಇದೀಗ ತನಿಖೆಯ ವ್ಯಾಪ್ತಿಗೆ ಬಂದಿದೆ. ಅವರು ಹಂಚಿಕೊಂಡಿದ್ದಾರೆ ಎನ್ನಲಾದ ಮಾಹಿತಿಯ ಸ್ವರೂಪವೇನು ಎಂಬುದನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಸೇನಾ ರಹಸ್ಯಗಳನ್ನು ಬಹಿರಂಗಪಡಿಸಲಾಗಿದೆ ಎಂಬ ಗುಪ್ತಚರ ಮಾಹಿತಿಯ ಆಧಾರದ ಮೇಲೆ ತಮಿಳುನಾಡು ಪೊಲೀಸರು, ಬಾಬು ಅವರನ್ನು ಬಂಧಿಸಿದರು. ನಂತರ ಅವರನ್ನು ಹೆಚ್ಚಿನ ವಿಚಾರಣೆ ಮತ್ತು ತನಿಖೆಗಾಗಿ ಕೇಂದ್ರ ತನಿಖಾ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಆರೋಪಿ ಮಾಹಿತಿ ಹಂಚಿಕೆಯ ವ್ಯಾಪ್ತಿಯನ್ನು ಪತ್ತೆಹಚ್ಚಲು, ಈ ಪ್ರಕರಣದಲ್ಲಿ ಭಾಗಿಯಾಗಿರುವ ಮಹಿಳೆಯ ಗುರುತನ್ನು ಖಚಿತಪಡಿಸಿಕೊಳ್ಳಲು ಹಾಗೂ ವಿದೇಶಿ ಗುಪ್ತಚರ ಜಾಲದೊಂದಿಗೆ ಯಾವುದೇ ಸಂಪರ್ಕವಿದೆಯೇ ಎಂಬುದನ್ನು ತಿಳಿಯಲು ತನಿಖಾಧಿಕಾರಿಗಳು ಬಾಬು ಅವರ ಸಂವಹನ ದಾಖಲೆಗಳು ಮತ್ತು ಡಿಜಿಟಲ್ ದಾಖಲೆಗಳನ್ನು ಪರಿಶೀಲಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.