ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Madenuru Manu: ನಟ ಮಡೆನೂರು ಮನುಗೆ ಜಾಮೀನು, ಇಂದು ರಿಲೀಸ್‌

Madenuru Manu: ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ಅರೆಸ್ಟ್ ಮಾಡಿದ್ದರು.

ನಟ ಮಡೆನೂರು ಮನುಗೆ ಜಾಮೀನು, ಇಂದು ರಿಲೀಸ್‌

ಹರೀಶ್‌ ಕೇರ ಹರೀಶ್‌ ಕೇರ Jun 7, 2025 6:52 AM

ಬೆಂಗಳೂರು : ತನ್ನ ಸಹ ಕಲಾವಿದೆಯ ಮೇಲೆ ಅತ್ಯಾಚಾರ (Physical abuse) ಎಸಗಿರುವ ಆರೋಪದ ಮೇಲೆ ಜೈಲು ಸೇರಿದ್ದ ಕಿರುತೆರೆ ನಟ ಮಡೇನೂರು ಮನುಗೆ (Madenuru Mnu) ಜಾಮೀನು ಸಿಕ್ಕಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಡೆನೂರು ಮನುಗೆ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಲಾಗಿದೆ. ಇಂದು ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ಅರೆಸ್ಟ್ ಮಾಡಿದ್ದರು. ʼಕುಲದಲ್ಲಿ ಕೀಳ್ಯಾವುದೊʼ ಚಿತ್ರದಲ್ಲಿ ಮಡೆನೂರು ಮನು ನಾಯಕನಾಗಿ ನಟಿಸಿದ್ದಾರೆ. ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಬಿಡುಗಡೆಯಾಗುವ ಒಂದು ದಿನ ಮೊದಲು ಅವರು ಬಂಧಿತರಾಗಿದ್ದರು.

ಇದನ್ನೂ ಓದಿ: Madenuru Manu: ಮಡೆನೂರು ಮನುಗೆ ಶಾಕ್‌ ಕೊಟ್ಟ ಫಿಲ್ಮ್‌ ಚೇಂಬರ್; ಸ್ಯಾಂಡಲ್‌ವುಡ್‌ನಿಂದ ಬ್ಯಾನ್‌!