ಪೋಕ್ಸೋ ಕೇಸ್: ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿ ಬಂಧನ
ಪೋಕ್ಸೋ ಪ್ರಕರಣದಲ್ಲಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಬಂಡಿ ಭಗೀರಥ ಅವರನ್ನು ಶನಿವಾರ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ತಮ್ಮ ಮಗನನ್ನು ಪೊಲೀಸರು ಬಂಧಿಸಿಲ್ಲ, ಆತನೇ ಪೊಲೀಸರ ಮುಂದೆ ಹಾಜರಾಗಿದ್ದಾನೆ ಎಂದು ಬಂಡಿ ಸಂಜಯ್ ಹೇಳಿಕೊಂಡಿದ್ದಾರೆ.
ಸಂಗ್ರಹ ಚಿತ್ರ -
ಹೈದರಾಬಾದ್: ಪೋಕ್ಸೋ ಪ್ರಕರಣದಲ್ಲಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಬಂಡಿ ಭಗೀರಥ ಅವರನ್ನು ಶನಿವಾರ ರಾತ್ರಿ ಬಂಧಿಸಲಾಗಿದೆ ಎಂದು (Central Minister Bandi Sanjay Kumar) ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ತಮ್ಮ ಮಗನನ್ನು ಪೊಲೀಸರು ಬಂಧಿಸಿಲ್ಲ, ಆತನೇ ಪೊಲೀಸರ ಮುಂದೆ ಹಾಜರಾಗಿದ್ದಾನೆ ಎಂದು ಬಂಡಿ ಸಂಜಯ್ ಹೇಳಿಕೊಂಡಿದ್ದಾರೆ. ಬಂಡಿ ಭಾಗೀರಥ ಪರ ವಕೀಲರಾದ ವಕೀಲ ಕರುಣಾಸಾಗರ್, ತಾವು ಮತ್ತು ಹಿರಿಯ ವಕೀಲ ಆಂಥೋನಿ ರೆಡ್ಡಿ ಸ್ವಯಂಪ್ರೇರಣೆಯಿಂದ ಆತನನ್ನು ಪೊಲೀಸರಿಗೆ ಒಪ್ಪಿಸಿ ತನಿಖೆಗೆ ಸಂಪೂರ್ಣವಾಗಿ ಸಹಕರಿಸಿದ್ದೇವೆ ಎಂದು ಹೇಳಿದರು.
ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಬಂಡಿ ಭಗೀರಥನಿಗೆ ಮಧ್ಯಂತರ ಪರಿಹಾರ ನೀಡಲು ತೆಲಂಗಾಣ ಹೈಕೋರ್ಟ್ ನಿರಾಕರಿಸಿದ ಒಂದು ದಿನದ ನಂತರ, ಅವರ ತಂದೆ ಬಂಡಿ ಸಂಜಯ್ ಕುಮಾರ್ ಶನಿವಾರ ತಮ್ಮ ಮಗನನ್ನು ಪೊಲೀಸರ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ತಿಳಿಸಿದ್ದರು.
ನನ್ನ ಮಗನ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಮತ್ತು ಕಾನೂನನ್ನು ಗೌರವಿಸುತ್ತಾ, ನಾನು ಭಗೀರಥನನ್ನು ವಕೀಲರ ಮೂಲಕ ಪೊಲೀಸರಿಗೆ ಒಪ್ಪಿಸಿದ್ದೇನೆ. ಕಾನೂನಿನ ಮುಂದೆ ಎಲ್ಲರೂ ಸಮಾನರು, ಅದು ನನ್ನ ಮಗನಾಗಿರಲಿ ಅಥವಾ ಸಾಮಾನ್ಯ ನಾಗರಿಕನಾಗಿರಲಿ, ಎಲ್ಲರೂ ಕಾನೂನನ್ನು ಪಾಲಿಸಬೇಕು" ಎಂದು ಕೇಂದ್ರ ಸಚಿವರು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೂ ಮೊದಲು, ತೆಲಂಗಾಣ ಬಿಜೆಪಿ ನಾಯಕರು ತಮ್ಮ ಕುಟುಂಬವನ್ನು ಗುರಿಯಾಗಿಸಿಕೊಂಡು ಮಾನಹಾನಿ ಮಾಡಲಾಗುತ್ತಿದೆ ಎಂದು ಹೇಳಿಕೊಂಡಿದ್ದರು.
ಸೈಬರಾಬಾದ್ ಪೊಲೀಸರು ಶನಿವಾರದಂದು ಭಾಗೀರಥ್ ವಿರುದ್ಧ ಲುಕ್ ಔಟ್ ಸುತ್ತೋಲೆ ಹೊರಡಿಸಿದ್ದರು ಮತ್ತು ಆತನನ್ನು ಪತ್ತೆಹಚ್ಚಲು ದೇಶಾದ್ಯಂತ ಶೋಧ ಆರಂಭಿಸಿದ್ದರು. ಕರೀಂನಗರ, ದೆಹಲಿ ಮತ್ತು ಅವನು ಆಗಾಗ್ಗೆ ಭೇಟಿ ನೀಡುತ್ತಿದ್ದ ಇತರ ಸ್ಥಳಗಳಿಗೆ ಪೊಲೀಸ್ ತಂಡಗಳನ್ನು ಕಳುಹಿಸಲಾಯಿತು. ಭಾಗೀರಥ ನಗರದ ಪೊಲೀಸ್ ಅಕಾಡೆಮಿ ಬಳಿ ಇರುವುದು ತಿಳಿದು ಬಂದ ಮೇಲೆ ನಕಾ ಬಂದಿ ಹಾಕಲಾಗಿತ್ತು. ನಂತರ ವಿಶೇಷ ಕಾರ್ಯಾಚರಣೆ ತಂಡ (ಎಸ್‌ಒಟಿ) ನರಸಿಂಗಿ ಪೊಲೀಸ್ ವ್ಯಾಪ್ತಿಯ ಮಂಚಿರೆವುಲಾದಲ್ಲಿ ಆತನನ್ನು ಬಂಧಿಸಿ ಪೆಟ್‌ಬಶೀರಾಬಾದ್ ಪೊಲೀಸ್ ಠಾಣೆಗೆ ಸ್ಥಳಾಂತರಿಸಿತು.
ಬೀದಿ ನಾಯಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನಿಗೆ ತಕ್ಕ ಪಾಠ: ಅಟ್ಟಾಡಿಸಿ ಹೊಡೆದ ಸ್ಥಳೀಯರು
17 ವರ್ಷದ ಅಪ್ರಾಪ್ತ ಬಾಲಕಿಯ ತಾಯಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಮೇ 8 ರಂದು ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಭಾಗೀರಥ ತನ್ನ ಮಗಳೊಂದಿಗೆ ಸಂಬಂಧ ಹೊಂದಿದ್ದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಂತ್ರಸ್ತೆ ಹೇಳಿಕೆಯನ್ನು ದಾಖಲಿಸಿದ ನಂತರ, ಪೊಲೀಸರು ಪೋಕ್ಸೊ ಕಾಯ್ದೆಯ ಹೆಚ್ಚು ಕಠಿಣ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇಷ್ಟೇ ಅಲ್ಲದೇ ಇದೀಗ ಬಾಲಕಿಯ ತಾಯಿ ತಾವು ಭಯದಲ್ಲಿ ಬದುಕುತ್ತಿರುವುದಾಗಿ ಬಾಲಕಿಯ ತಾಯಿ ಹೇಳಿದ್ದಾರೆ. ಶುಕ್ರವಾರ ನಾಲ್ಕು ಪುಟಗಳ ಪತ್ರವನ್ನು ಬಿಡುಗಡೆ ಮಾಡಿರುವ ಅವರು, ತಮ್ಮ ಕುಟುಂಬ ಎದುರಿಸುತ್ತಿರುವ ಅಗ್ನಿಪರೀಕ್ಷೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.