Murder Case: ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬಲಿ, ನಡುರಸ್ತೆಯಲ್ಲಿ ಕೊಚ್ಚಿ ಕೊಲೆ
Doddaballapuara news: ಯುವತಿಯೊಬ್ಬಳನ್ನು ಈತ ಪ್ರೀತಿ ಮಾಡುತ್ತಿದ್ದ ವಿಚಾರಕ್ಕೆ ಈ ಮೊದಲು ಗಲಾಟೆ ಸಹ ಆಗಿತ್ತು. ಕೆಲವರು ನಿನ್ನನ್ನು ನೋಡಿಕೊಳ್ಳುವುದಾಗಿ ಈತನಿಗೆ ಧಮಕಿ ಹಾಕಿದ್ದರು. ಬಳಿಕ ಇಬ್ಬರೂ ಬೇರೆ ಬೇರೆಯಾಗಿದ್ದರು. ಇತ್ತೀಚೆಗೆ ಮತ್ತೆ ಇಬ್ಬರೂ ಜೊತೆಯಲ್ಲಿರುವ ಬಗ್ಗೆ ಮಾಹಿತಿ ಇತ್ತು. ಇದೇ ವಿಚಾರಕ್ಕೆ ಕೊಲೆ ಮಾಡಿರುವ ಸಂಶಯ ಇದೆ ಎಂದು ಮೃತ ಯುವಕನ ಚಿಕ್ಕಮ್ಮ ಅನಿತಾ ಅನುಮಾನ ವ್ಯಕ್ತಪಡಿಸಿದ್ದಾರೆ.
ಕೊಲೆಯಾದ ಪವನ್ ಕುಮಾರ್ -
ಬೆಂಗಳೂರು, ಡಿ.05 : ಬೆಂಗಳೂರಿನಲ್ಲಿ (Bengaluru crime news) ನಡುಬೀದಿಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder Case) ಮಾಡಲಾಗಿದೆ. ಯುವತಿಯೊಬ್ಬಳನ್ನು ಆತ ಪ್ರೀತಿಸಿದ್ದು, ಇದಕ್ಕಾಗಿ ತಗಾದೆ ಉಂಟಾಗಿತ್ತು. ಇದೇ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ದೊಡ್ಡಬಳ್ಳಾಪುರ (Doddaballapuara) ನಗರದ ಯಲಹಂಕ- ಹಿಂದೂಪುರ ರಸ್ತೆಯ ಚರ್ಚ್ ಮುಂಭಾಗದಲ್ಲಿ ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ.
ಪವನ್ ಕುಮಾರ್ (30) ಕೊಲೆಯಾದ ಯುವಕ. ಮೃತ ಪವನ್ ಕುಮಾರ್, ಜಾಲಪ್ಪ ಕಾಲೇಜಿನಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದರು. ಕಾಲೇಜಿನ ವಸತಿ ಗೃಹದಲ್ಲಿ ತನ್ನ ತಾಯಿ ಜೊತೆ ವಾಸವಾಗಿದ್ದರು. ಗುರುವಾರ ರಾತ್ರಿ 9 ಗಂಟೆ ಸಮಯದಲ್ಲಿ ದುಷ್ಕರ್ಮಿಗಳು ಫೋನ್ ಮಾಡಿ ಹೊರಗೆ ಕರೆಸಿಕೊಂಡಿದ್ದಾರೆ. ಆಟೋದಲ್ಲಿ ಬರುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಆಟೋವನ್ನು ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ತೀವ್ರ ಹಲ್ಲೆಯಿಂದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಯುವತಿಯೊಬ್ಬಳನ್ನು ಈತ ಪ್ರೀತಿ ಮಾಡುತ್ತಿದ್ದ ವಿಚಾರಕ್ಕೆ ಈ ಮೊದಲು ಗಲಾಟೆ ಸಹ ಆಗಿತ್ತು. ಕೆಲವರು ನಿನ್ನನ್ನು ನೋಡಿಕೊಳ್ಳುವುದಾಗಿ ಈತನಿಗೆ ಧಮಕಿ ಹಾಕಿದ್ದರು. ಬಳಿಕ ಇಬ್ಬರೂ ಬೇರೆ ಬೇರೆಯಾಗಿದ್ದರು. ಇತ್ತೀಚೆಗೆ ಮತ್ತೆ ಇಬ್ಬರೂ ಜೊತೆಯಲ್ಲಿರುವ ಬಗ್ಗೆ ಮಾಹಿತಿ ಇತ್ತು. ಇದೇ ವಿಚಾರಕ್ಕೆ ಕೊಲೆ ಮಾಡಿರುವ ಸಂಶಯ ಇದೆ ಎಂದು ಮೃತ ಯುವಕನ ಚಿಕ್ಕಮ್ಮ ಅನಿತಾ ಅನುಮಾನ ವ್ಯಕ್ತಪಡಿಸಿದ್ದಾರೆ.
ಸತ್ತು ಮಲಗಿದ ಪ್ರಿಯಕರನ ಶವದೊಂದಿಗೆ ಮದುವೆಯಾದ ಯುವತಿ
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಡಿವೈಎಸ್ಪಿ ಪಾಡುರಂಗ, ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶಗೌಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.