Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ನ ಕೊಚ್ಚಿ ಕೊಲೆ
Murder Case: ಮನೆ ಮುಂದೆ ನಿಂತಿದ್ದಾಗಲೇ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ ಕೊಲೆ ಗೈದಿದ್ದಾರೆ. ಕೊಲೆಗೈದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಗ್ಯಾಂಗ್‌ವಾರ್ ಮತ್ತು ಹಳೆ ದ್ವೇಷದ ಪರಿಣಾಮ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಶಿವನ ವೈರಿಗಳ ಜಾತಕ ಕಲೆಹಾಕಲಾಗುತ್ತಿದೆ.


ಬೆಂಗಳೂರು: ನಗರದಲ್ಲಿ ರೌಡಿ ಶೀಟರ್ (Rowdy Sheeter) ಶಿವಕುಮಾರ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ (Murder case) ಮಾಡಲಾಗಿದೆ. ಬೆಂಗಳೂರಿನ (Bengaluru crime news) ಹಲಸೂರು ಕೆರೆ ಬಳಿಯ ಮನೆಯ ಮುಂದೆ ರೌಡಿ ಶೀಟರ್ ಶಿವಕುಮಾರ್ ಆಲಿಯಾಸ್ ಬಿಕ್ಲು ಶಿವ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.
ಮನೆ ಮುಂದೆ ನಿಂತಿದ್ದಾಗಲೇ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ ಕೊಲೆ ಗೈದಿದ್ದಾರೆ. ಕೊಲೆಗೈದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಡಿಸಿಪಿ ಡಿ.ದೇವರಾಜ, ಜಂಟಿ ಪೊಲೀಸ್ ಆಯುಕ್ತ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ಯಾಂಗ್‌ವಾರ್ ಮತ್ತು ಹಳೆ ದ್ವೇಷದ ಪರಿಣಾಮ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಶಿವನ ವೈರಿಗಳ ಜಾತಕ ಕಲೆಹಾಕಲಾಗುತ್ತಿದೆ.
ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಬೆದರಿಕೆ ಹಾಕಿದವರ ಬಂಧನ
ಬೆಂಗಳೂರು: ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಉದ್ಯಮಿಗೆ ಬೆದರಿಕೆ ಕರೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ (Bengaluru News) ಮೊಹಮ್ಮದ್ ರಫೀಕ್, ಉತ್ತರ ಪ್ರದೇಶ ಮೂಲದ ಶಿಶುಪಾಲ್ ಸಿಂಗ್, ವಂಶ್ ಸಚ್ ದೇವ್ ಹಾಗೂ ಅಮಿತ್ ಚೌಧರಿ ಬಂಧಿತರು. ಆರೋಪಿಗಳಿಂದ ಒಂದು ಕಾರು, ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉದ್ಯಮಿಯೊಬ್ಬರಿಗೆ ಜುಲೈ 8ರಂದು ರಾತ್ರಿ ಕರೆ ಮಾಡಿದ್ದ ಆರೋಪಿಗಳು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯರ ಹೆಸರಿನಲ್ಲಿ ಬೆದರಿಸಿ ಒಂದು ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ' ಹಣ ನೀಡದಿದ್ದರೆ ನಿನ್ನ ಮಗನನ್ನು ಕಿಡ್ನ್ಯಾಪ್ ಮಾಡುತ್ತೇವೆ' ಎಂದು ಬೆದರಿಸಿದ್ದರು. ಉದ್ಯಮಿಯ ಪುತ್ರ ನೀಡಿದ ದೂರಿನನ್ವಯ ಶೇಷಾದ್ರಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ತನಿಖೆಗಾಗಿ ಕೇಂದ್ರ ವಿಭಾಗ ಮತ್ತು ಸಿಸಿಬಿಯ ಅಧಿಕಾರಿಗಳನ್ನೊಳಗೊಂಡ ಪ್ರತ್ಯೇಕ ತಂಡ ರಚಿಸಿದ್ದರು. ಅದರಂತೆ ಪ್ರಕರಣದ ತನಿಖೆ ಕೈಗೊಂಡ ತಂಡ ಜೆ.ಸಿ ರಸ್ತೆಯಲ್ಲಿ ಕಾರ್ ಸೌಂಡ್ ಆಕ್ಸೆಸರೀಸ್‌ಗಳನ್ನ ವ್ಯಾಪಾರ ಮಾಡುತ್ತಿದ್ದ ಮೊಹಮ್ಮದ್ ರಫೀಕ್‌ನನ್ನು ಬಂಧಿಸಿದ್ದರು. ಆತ ನೀಡಿದ ಮಾಹಿತಿಯನ್ವಯ ಉತ್ತರ ಪ್ರದೇಶದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಿಷ್ಣೋಯ್ ಗ್ಯಾಂಗ್‌ಗೂ ಇವರಿಗೂ ಯಾವುದೇ ಸಂಬಂಧವಿಲ್ಲ:
ಪ್ರಕರಣವೊಂದರಲ್ಲಿ ದೆಹಲಿ ಪೊಲೀಸರಿಂದ ಬಂಧನವಾಗಿದ್ದ ಮೊಹಮ್ಮದ್ ರಫೀಕ್, ಕೆಲಕಾಲ ತಿಹಾರ್ ಜೈಲಿನಲ್ಲಿ ಕಳೆದಿದ್ದ. ಆ ಸಂದರ್ಭದಲ್ಲಿ ಉತ್ತರ ಪ್ರದೇಶ ಮೂಲದ ಉಳಿದ ಮೂವರು ಆರೋಪಿಗಳ ಪರಿಚಯವಾಗಿತ್ತು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೂ ಆರೋಪಿಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Physical Abuse: ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ; ವಿದ್ಯಾರ್ಥಿನಿ ಮೇಲೆ ಉಪನ್ಯಾಸಕರಿಂದಲೇ ಅತ್ಯಾಚಾರ!