ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Techie Self Harming: ರಾಜಧಾನಿಯಲ್ಲಿ ಓಲಾ ಕಂಪನಿ ಟೆಕ್ಕಿ ಆತ್ಮಹತ್ಯೆ; ಕೆಲಸದ ಒತ್ತಡಕ್ಕೆ ಬಲಿ?

ಮೃತ ಟೆಕ್ಕಿ ನಿಖಿಲ್ ಸೋಮವಂಶಿ ಅವರಿಗೆ ಅಮೆರಿಕದಲ್ಲಿರುವ ಮ್ಯಾನೇಜರ್ ನಿರಂತರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಹಲವು ಕೆಲಸಗಾರರು ಕೆಲಸ ಬಿಟ್ಟಿದ್ದರು. ನಂತರ ಕೆಲಸ ಬಿಟ್ಟ ನೌಕರರ ಕೆಲಸವನ್ನೂ ನಿಖಿಲ್ ಒಬ್ಬರೇ ನಿರ್ವಹಿಸುತ್ತಿದ್ದರು. ಈ ಒತ್ತಡ ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜಧಾನಿಯಲ್ಲಿ ಓಲಾ ಕಂಪನಿ ಟೆಕ್ಕಿ ಆತ್ಮಹತ್ಯೆ; ಕೆಲಸದ ಒತ್ತಡಕ್ಕೆ ಬಲಿ?

ಮೃತ ನಿಖಿಲ್ ಸೋಮವಂಶಿ

ಹರೀಶ್‌ ಕೇರ ಹರೀಶ್‌ ಕೇರ May 19, 2025 12:50 PM

ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ (Bengaluru Crime News) ಓಲಾ ಕಂಪನಿಯ ಟೆಕ್ಕಿಯೊಬ್ಬ ಆತ್ಮಹತ್ಯೆ (Techie Self Harming) ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆಯಿಂದ, ಈ ಟೆಕ್ಕಿಗೆ ಅತಿಯಾದ ಕೆಲಸದ ಒತ್ತಡವಿತ್ತು ಎಂದು ಗೊತ್ತಾಗಿದೆ. ಇದನ್ನು ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ. ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಪದವೀಧರರಾದ ನಿಖಿಲ್ ಸೋಮವಂಶಿ ಮೃತ ಟೆಕ್ಕಿ ಎಂದು ಗುರುತಿಸಲಾಗಿದೆ. ಕೋರಮಂಗಲ ಭಾಗದಲ್ಲಿರುವ ಓಲಾದ AI ಘಟಕದಲ್ಲಿ ನಿಖಿಲ್ ಸೋಮವಂಶಿ ಮೆಷಿನ್ ಲರ್ನಿಂಗ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಿಖಿಲ್ ಸೋಮವಂಶಿ ಆಗಸ್ಟ್ 2024ರಲ್ಲಿ ಕೆಲಸಕ್ಕೆ ಸೇರಿದ್ದರು. ಅವರು ವರ್ಷಕ್ಕೆ 9.30 ಲಕ್ಷ ರೂ. ವೇತನ ಪಡೆದುಕೊಳ್ಳುತ್ತಿದ್ದರು. ಆದರೆ, ಅಮೆರಿಕದಲ್ಲಿರುವ ಮ್ಯಾನೇಜರ್ ರಾಜ್ಕಿರಣ್ ಪನುಗಂಟಿ ಎಂಬವರು ನಿರಂತರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಹಲವು ಕೆಲಸಗಾರರು ಕೆಲಸ ಬಿಟ್ಟಿದ್ದರು. ನಂತರ ಕೆಲಸ ಬಿಟ್ಟ ನೌಕರರ ಕೆಲಸವನ್ನೂ ನಿಖಿಲ್ ಒಬ್ಬರೇ ನಿರ್ವಹಿಸುತ್ತಿದ್ದರು. ಇದರಿಂದ ಕೆಲಸದ ಒತ್ತಡ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕಾರಿನೊಳಗೆ ಉಸಿರುಗಟ್ಟಿ ನಾಲ್ವರು ಮಕ್ಕಳ ಸಾವು

ಹೈದರಾಬಾದ್‌: ಆಂಧ್ರಪ್ರದೇಶದ (Andhra Horror) ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ಘೋರ ದುರಂತವೊಂದು ನಡೆದಿದೆ. ಮಂಡಲದ ದ್ವಾರಪುಡಿ ಗ್ರಾಮದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಸಿಲುಕಿ ಮೂವರು ಬಾಲಕಿಯರು ಸೇರಿದಂತೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ನಾಲ್ವರು ಮಕ್ಕಳು ಆಟವಾಡುತ್ತಿದ್ದಾಗ ನಿಲ್ಲಿಸಿದ್ದ ಕಾರಿನೊಳಗೆ ಹೋಗಿದ್ದಾರೆ. ಎಷ್ಟು ಹೊತ್ತಾದರೂ ಮಕ್ಕಳು ಬಾರದ ಕಾರಣ ಪೋಷಕರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ಹುಡುಕಿದ ನಂತರ ಕಾರಿನಲ್ಲಿ ಸಿಲುಕಿರುವುದು ಪತ್ತೆಯಾಗಿದೆ.

ಬಳಿಕ ಕಾರಿನ ಕಿಟಕಿಗಳನ್ನು ಒಡೆದು ಮಕ್ಕಳನ್ನು ಹೊರಗೆ ತಂದಿದ್ದಾರೆ. ಕೂಡಲೇ ವಿಜಯನಗರದ ಸರ್ಕಾರಿ ಜನರಲ್ ಆಸ್ಪತ್ರೆಗೆ (ಜಿಜಿಹೆಚ್) ಕರೆದೊಯ್ದಿದ್ದಾರೆ. ತಪಾಸಣೆ ನಡೆಸಿದ ವೈದ್ಯರು ಮಕ್ಕಳು ಉಸಿರುಗಟ್ಟಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತ ಮಕ್ಕಳನ್ನು ಮಂಗಿ ಉದಯ್ (8), ಬುರ್ಲೆ ಚಾರುಮತಿ (8), ಬುರ್ಲೆ ಚರಿಷ್ಮಾ (6) ಮತ್ತು ಕಂಡಿ ಮನಸ್ವಿನಿ (6) ಎಂದು ಗುರುತಿಸಲಾಗಿದೆ, ಚಾರುಮತಿ ಮತ್ತು ಚರಿಷ್ಮಾ ಸಹೋದರಿಯರಾಗಿದ್ದು, ನಾಲ್ವರು ಮಕ್ಕಳು ಒಂದೇ ಗ್ರಾಮಕ್ಕೆ ಸೇರಿದವರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮೂಲಗಳ ಪ್ರಕಾರ, ಎರಡು ದಿನಗಳ ಹಿಂದೆ ದ್ವಾರಪುಡಿ ಗ್ರಾಮದ ಮಹಿಳಾ ಮಂಡಳಿ ಕಚೇರಿಯ ಬಳಿ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಕಾರನ್ನು ನಿಲ್ಲಿಸಿದ್ದ. ಕಾರು ಲಾಕ್ ಮಾಡುವುದನ್ನು ಮರೆತಿದ್ದ ಎನ್ನಲಾಗಿದೆ. ಈ ನಡುವೆ ಭಾನುವಾರ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಕಾರಿನೊಳಗೆ ಹೋಗಿದ್ದು, ಕಾರಿನ ಬಾಗಿಲು ಲಾಕ್‌ ಆಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಜಯನಗರ ಜಿಜಿಹೆಚ್‌ಗೆ ರವಾನಿಸಿದ್ದಾರೆ. ಸ್ಥಳೀಯ ಶಾಸಕಿ ಅದಿತಿ ವಿಜಯಲಕ್ಷ್ಮಿ ಆಸ್ಪತ್ರೆಗೆ ಭೇಟಿ ನೀಡಿ ಮೃತ ಮಕ್ಕಳ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಈ ನಡುವೆ ಸ್ಥಳೀಯ ನಿವಾಸಿಗಳ ಮಾಹಿತಿಯ ಮೇರೆಗೆ, ವಿಜಯನಗರ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಕಾರಿನ ಮಾಲೀಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಇದನ್ನೂ ಓದಿ: Young Woman Death: ಧರ್ಮಸ್ಥಳದ ಯುವತಿ ಪಂಜಾಬ್‌ನಲ್ಲಿ ಸಾವಿನ ಹಿನ್ನೆಲೆಯಲ್ಲಿದ್ದಾನೆ ಇನ್ನೊಬ್ಬ ವ್ಯಕ್ತಿ