ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bengaluru Crime News: ಸರಗಳ್ಳರಿಂದ ಬಿಡಿಸಿಕೊಳ್ಳಲು ಹೋಗಿ ಬಿದ್ದು ಮಹಿಳೆ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಮನೆಯ ಮುಂದೆ ಕಸ ಗುಡಿಸುತ್ತಿದ್ದಾಗ ಸರಗಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗುತ್ತಿದ್ದರು. ಇದೇ ವೇಳೆ ಕಳ್ಳರು ಸ್ಪ್ರೇ ಸಿಂಪಡಿಸಿದ್ದರಿಂದ ಮಹಿಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಸರಗಳ್ಳರಿಂದ ಬಿಡಿಸಿಕೊಳ್ಳಲು ಹೋಗಿ ಬಿದ್ದು ಮಹಿಳೆ ಸಾವು

ಮೃತ ಮಹಿಳೆ ಜ್ಯೋತಿ -

ಹರೀಶ್‌ ಕೇರ
ಹರೀಶ್‌ ಕೇರ Feb 9, 2026 10:45 AM

ಬೆಂಗಳೂರು, ಫೆ.09 : ಸರಗಳ್ಳರು (chain snatchers) ಕತ್ತಿನಲ್ಲಿದ್ದ ಸರ ಕದಿಯಲು ಯತ್ನಿಸುತ್ತಿದ್ದಾಗ ಅವರಿಂದ ಬಿಡಿಸಿಕೊಳ್ಳಲು ಯತ್ನಿಸಿ ಕುಸಿದು ಬಿದ್ದು ಮಹಿಳೆ ಒಬ್ಬರು ಸಾವನ್ನಪ್ಪಿರುವ (woman death) ದಾರುಣ ಘಟನೆ ಬೆಂಗಳೂರು (Bengaluru Crime News) ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಜ್ಯೋತಿ (45) ಎಂದು ಗುರುತಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಮನೆಯ ಮುಂದೆ ಕಸ ಗುಡಿಸುತ್ತಿದ್ದಾಗ ಸರಗಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗುತ್ತಿದ್ದರು. ಇದೇ ವೇಳೆ ಕಳ್ಳರು ಸ್ಪ್ರೇ ಸಿಂಪಡಿಸಿದ್ದರಿಂದ ಮಹಿಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸರಗಳ್ಳರ ಮೇಲೆ ಕೊಲೆ ಪ್ರಕರಣ ದಾಖಲಿಸಲಾಗಿದೆ.

ನೇಣು ಬಿಗಿದು ತಾಯಿ ಮಗಳು ಆತ್ಮಹತ್ಯೆ

ಮಂಡ್ಯ : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣು ಬಿಗಿದುಕೊಂಡು ಶಂಕುತಲಾದೇವಿ (46) ಪ್ರಿಯಾಂಕ (19) ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಿಯಾಂಕಾಳ ಮದುವೆಗೆ ಕುಟುಂಬದ ಸದಸ್ಯರು ಸಿದ್ಧತೆ ನಡೆಸಿದ್ದರು. ಮದುವೆ ಸಿದ್ಧತೆ ನಡುವೆಯೇ ತಾಯಿ ಮತ್ತು ಮಗಳು ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತಂತೆ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕಾರ್‌ ರೇಸ್‌ನಲ್ಲಿ ನಿಯಂತ್ರಣ ತಪ್ಪಿ ಪಲ್ಟಿ, ಗಂಭೀರ ಗಾಯ

ಮೈಸೂರು : ಕಾರ್ ರೇಸ್‌ನಲ್ಲಿ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಆಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಳಿಮಾವು ಎಂಬಲ್ಲಿ ನಡೆದಿದೆ. ಹುಳಿಮಾವು ಸಮೀಪದ ಫಿಲ್ಮಿ ಸಿಟಿ ಬಳಿ ಆಯೋಜಿಸಿದ ಕಾರು ರೇಸ್‌ನಲ್ಲಿ ನಿಯಂತ್ರಣ ಕಳೆದುಕೊಂಡು ಕಾರು ಪಲ್ಟಿಯಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಪ್ರಜ್ವಲ್ ಎಂಬವರ ಕೈಗೆ ಗಂಭೀರವಾದ ಗಾಯವಾಗಿದೆ. ಖಾಸಗಿ ಸಂಸ್ಥೆಯೊಂದು ಕಾರು ರೇಸ್ ಆಯೋಜನೆ ಮಾಡಿತ್ತು. ರೇಸ್ ವೇಳೆ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ರೇಸ್‌ನಲ್ಲಿ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೇ ಇಲ್ಲವೇ ಎಂದು ಪರಿಶೀಲಿಸಲಾಗುತ್ತಿದೆ.

Udupi news: ಆತ್ಮಹತ್ಯೆಗೆ ಬಾವಿಗೆ ಜಿಗಿಯುವಾಗ ರುಂಡ ಬೇರ್ಪಟ್ಟು ಸಾವು!