ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Lover murder case: 4.5 ಲಕ್ಷದ ಬೈಕ್‌ ಕೊಡಿಸಿದ ಪ್ರೇಯಸಿಯೇ ಕೈಕಾಲು ಕಟ್ಟಿಹಾಕಿ, ಬೆಂಕಿ ಹಚ್ಚಿ ಪ್ರಿಯಕರನ ಕೊಂದಳೇಕೆ?

ಫೆಬ್ರವರಿ 14ರ ‘ವ್ಯಾಲೆಂಟೈನ್ಸ್ ಡೇ’ ದಿನ ಪ್ರೇಮಾ ತನ್ನ ಪ್ರೀತಿಯನ್ನು ನಿವೇದಿಸಿದ್ದಳು. ಕಿರಣ್ ಕೂಡ ಒಪ್ಪಿಕೊಂಡಿದ್ದ. ಪ್ರಿಯಕರನಿಗಾಗಿ ಪ್ರೇಮಾ ಬರೋಬ್ಬರಿ 4.5 ಲಕ್ಷ ರೂಪಾಯಿ ಮೌಲ್ಯದ ಬೈಕ್ ಮತ್ತು ಮೊಬೈಲ್ ಫೋನ್ ಕೊಡಿಸಲು ಮುಂದಾಗಿದ್ದಳು. ಕೊಲೆ ಕೃತ್ಯ ನಡೆದ ದಿನವೂ ಇಬ್ಬರೂ ಸೇರಿ ಬೈಕ್ ನೋಡಲು ಹೋಗಿದ್ದರು ಎನ್ನಲಾಗಿದೆ.

4.5 ಲಕ್ಷದ ಬೈಕ್‌ ಕೊಡಿಸಹೊರಟ ಪ್ರೇಯಸಿಯೇ ಬೆಂಕಿ ಹಚ್ಚಿ ಕೊಂದಳೇಕೆ?

ಮೃತ ಕಿರಣ್‌, ಆರೋಪಿ ಪ್ರೇಮಾ -

ಹರೀಶ್‌ ಕೇರ
ಹರೀಶ್‌ ಕೇರ Apr 22, 2026 10:11 AM

ಬೆಂಗಳೂರು, ಏ.22: ಬೆಂಗಳೂರಿನ (Bengaluru crime news) ಬ್ಯಾಡರಹಳ್ಳಿಯಲ್ಲಿ ನಡೆದ ಕಿರಣ್ ಕೊಲೆ ಪ್ರಕರಣ (lover murder case) ಸಂಬಂಧ ಒಂದೊಂದೇ ಭಯಾನಕ ವಿಚಾರಗಳು ಇದೀಗ ಹೊರಬರುತ್ತಿವೆ. ಸದ್ಯ ಆತನ ಪ್ರೇಯಸಿ ಪ್ರೇಮಾ ಪೊಲೀಸರ ವಶದಲ್ಲಿದ್ದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾಳೆ. ಕಿರಣ್‌ನ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ ಹಾಕಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದೆ ಎಂದು ಆಕೆ ನೀಡಿರುವ ಹೇಳಿಕೆ ಕೇಳಿ ಖುದ್ದು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.

ಪೊಲೀಸರ ತನಿಖೆಯ ವೇಳೆ ದೊರೆತ ಮಾಹಿತಿ ಪ್ರಕಾರ, ಮೃತ ಕಿರಣ್ ಮತ್ತು ಆರೋಪಿ ಯುವತಿ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ವರ್ಷ ಆಗಸ್ಟ್‌ನಲ್ಲಿ ಪ್ರೇಮಾಗೆ ಕಿರಣ್ ಪರಿಚಯವಾಗಿದ್ದ. ಈ ವರ್ಷದ ಫೆಬ್ರವರಿ 14ರ ‘ವ್ಯಾಲೆಂಟೈನ್ಸ್ ಡೇ’ ದಿನ ಪ್ರೇಮಾ ತನ್ನ ಪ್ರೀತಿಯನ್ನು ನಿವೇದಿಸಿದ್ದಳು. ಕಿರಣ್ ಕೂಡ ಒಪ್ಪಿಕೊಂಡಿದ್ದ. ಪ್ರಿಯಕರನಿಗಾಗಿ ಪ್ರೇಮಾ ಬರೋಬ್ಬರಿ 4.5 ಲಕ್ಷ ರೂಪಾಯಿ ಮೌಲ್ಯದ ಬೈಕ್ ಮತ್ತು ಮೊಬೈಲ್ ಫೋನ್ ಕೊಡಿಸಲು ಮುಂದಾಗಿದ್ದಳು. ಕೊಲೆ ಕೃತ್ಯ ನಡೆದ ದಿನವೂ ಇಬ್ಬರೂ ಸೇರಿ ಬೈಕ್ ನೋಡಲು ಹೋಗಿದ್ದರು ಎನ್ನಲಾಗಿದೆ.

ಆದರೆ, ಇತ್ತೀಚೆಗೆ ಕಿರಣ್ ಪ್ರೇಮಾಳಿಂದ ಅಂತರ ಕಾಯ್ದುಕೊಳ್ಳಲು ಶುರು ಮಾಡಿದ್ದ. ಇದರಿಂದ ಮನನೊಂದಿದ್ದ ಪ್ರೇಮಾ, ಆತನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಮೊದಲೇ ತೀರ್ಮಾನಿಸಿದ್ದಳು. ಅದಕ್ಕಾಗಿಯೇ ಪೆಟ್ರೋಲ್ ಮತ್ತು ಸೀಮೆಎಣ್ಣೆಯನ್ನು ಮೊದಲೇ ಖರೀದಿಸಿ ತಂದಿಟ್ಟುಕೊಂಡಿದ್ದಳು. ಮದುವೆ ವಿಚಾರವಾಗಿ ಮನೆಯಲ್ಲಿ ಮತ್ತೆ ಗಲಾಟೆ ಆರಂಭವಾದಾಗ, ಪ್ಲಾನ್ ಪ್ರಕಾರ ಕಿರಣ್‌ನನ್ನು ಮಂಚಕ್ಕೆ ಕಟ್ಟಿ ಹಾಕಿ ಬೆಂಕಿ ಹಚ್ಚಿದ್ದಾಳೆ.

Bengaluru Murder Case: ವೆಸ್ಟರ್ನ್ ಸ್ಟೈಲ್‌ನಲ್ಲಿ ಪ್ರಪೋಸ್ ಮಾಡ್ತೀನಿ ಎಂದು ಯುವಕನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಯಸಿ!

ಮಂಗಳವಾರ ಯುವತಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಿರಣ್ ಅಲ್ಲಿಗೆ ತೆರಳಿದ್ದ. ಈ ವೇಳೆ ಯುವತಿ ನಿನಗೆ ವೆಸ್ಟರ್ನ್ ಸ್ಟೈಲ್‌ನಲ್ಲಿ ಪ್ರಪೋಸ್ ಮಾಡ್ತೀನಿ ಎಂದು ನಂಬಿಸಿ ಕಿರಣ್‌ನ ಕಣ್ಣಿಗೆ ಬಟ್ಟೆ ಕಟ್ಟಿ, ಕೈ-ಕಾಲುಗಳನ್ನು ಹಗ್ಗದಿಂದ ಬಿಗಿದಿದ್ದಾಳೆ. ನಂತರ ಆತನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಬೆಂಕಿಯ ಜ್ವಾಲೆಯಿಂದ ತಪ್ಪಿಸಿಕೊಳ್ಳಲಾಗದೆ ಕಿರಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸದ್ಯ ಬ್ಯಾಡರಹಳ್ಳಿ ಪೊಲೀಸರು ಈಕೆಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಹತ್ಯೆಗೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.