Shocking News: ಇಬ್ಬರು ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ, ಪತಿಯ ಮೇಲೆ ದೂರು
Bengaluru: ತಾನು ಮತ್ತೊಂದು ಮದುವೆಯಾಗಿದ್ದು, ಡೈವೋರ್ಸ್ ಕೊಡುವಂತೆ ಪತ್ನಿಗೆ ಪತಿ ರಮೇಶ್ ಬೆದರಿಕೆ ಹಾಕುತ್ತಿದ್ದ. ಇದರಿಂದಲೇ ನೊಂದು ತನ್ನ ಇಬ್ಬರು ಮಕ್ಕಳನ್ನು ಕೊಂದು ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

-

ಬೆಂಗಳೂರು: ರಾಜಧಾನಿಯಲ್ಲಿ (Bengaluru) ಒಂದು ಘೋರ ದುರಂತ ಸಂಭವಿಸಿದ್ದು, 5 ವರ್ಷದ ಪುತ್ರಿ ಹಾಗು ಒಂದುವರೆ ವರ್ಷದ ಪುತ್ರನ ಕೊಂದು ಮಹಿಳೆ ಆತ್ಮಹತ್ಯೆಗೆ (Self harming) ಶರಣಾಗಿದ್ದಾರೆ. ಬೆಂಗಳೂರಿನ ಬಾಗಲಗುಂಟೆ ಪಾಳ್ಯ ಭುವನೇಶ್ವರಿ ನಗರದಲ್ಲಿ ಈ ದುರಂತ ಸಂಭವಿಸಿದೆ. ಐದು ವರ್ಷದ ಪುತ್ರಿ ಹಾಗೂ ಒಂದೂವರೆ ವರ್ಷದ ಪುತ್ರನ ಕೊಂದು ತಾಯಿ ವಿಜಯಲಕ್ಷ್ಮಿ ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಾಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 5 ವರ್ಷದ ಹಿಂದೆ ವಿಜಯಲಕ್ಷ್ಮಿ, ರಮೇಶ್ ಎಂಬಾತನ ಜೊತೆ ಮದುವೆ ಮಾಡಿಕೊಂಡಿದ್ರು. ಆಕೆಯ ಪತಿ ಮಾಲ್ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಲ್ಲಿ ನೆಲೆಸಿದ್ದ ಈ ದಂಪತಿಗೆ 4 ವರ್ಷದ ಬೃಂದಾ, ಒಂದೂವರೆ ವರ್ಷದ ಭುವನ್ ಎಂಬ ಇಬ್ಬರು ಮಕ್ಕಳಿದ್ದರು. ಇವರ ಸಂಸಾರದಲ್ಲಿ ಕೆಲ ಸಮಸ್ಯೆಗಳಿದ್ದವು, ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ನಿನ್ನೆ ವಿಜಯಲಕ್ಷ್ಮಿ ತಂಗಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆಂದು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Self Harming: ಬೇರೊಬ್ಬಳ ಜೊತೆ ಗಂಡನ ಚಾಟಿಂಗ್, ನೊಂದು ನವವಿವಾಹಿತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
ತಾನು ಮತ್ತೊಂದು ಮದುವೆಯಾಗಿದ್ದು, ಡೈವೋರ್ಸ್ ಕೊಡುವಂತೆ ಪತ್ನಿಗೆ ಪತಿ ರಮೇಶ್ ಬೆದರಿಕೆ ಹಾಕುತ್ತಿದ್ದ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಹೀಗಾಗಿ ಪದೇ ಪದೆ ಕುಟುಂಬದಲ್ಲಿ ಜಗಳ ಆಗುತ್ತಿತ್ತು. ಈ ವಿಚಾರ ವಿಜಯಲಕ್ಷ್ಮಿ ತನ್ನ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದಳು ಎನ್ನಲಾಗುತ್ತಿದೆ. ಇದರಿಂದಲೇ ನೊಂದು ತನ್ನ ಮಕ್ಕಳನ್ನು ಕೊಂದು ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್, ಯುವಕ ಆತ್ಮಹತ್ಯೆ
ಕಾರ್ಕಳ: ಖಾಸಗಿ ವಿಡಿಯೋ ಇಟ್ಟುಕೊಂಡು ಗೆಳೆಯರು ಮಾಡುತ್ತಿದ್ದ ಬ್ಲ್ಯಾಕ್‌ಮೇಲ್‌ನಿಂದ (Blackmail) ಆಘಾತಗೊಂಡು ಯುವಕನೊಬ್ಬ ಆತ್ಮಹತ್ಯೆಗೆ (Self Harming) ಶರಣಾದ ಘಟನೆ ಉಡುಪಿ (Udupi news) ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಳಣ್ಣಿನ ಖಾಸಗಿ ಲಾಡ್ಜ್‌ನಲ್ಲಿ ನಡೆದಿದೆ. ಮೃತ ಯುವಕನನ್ನು ನಿಟ್ಟೆ ಗ್ರಾಮದ ಅಭಿಷೇಕ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಪ್ರೀತಿಸಿದ ಯುವತಿ ಜತೆಗಿದ್ದ ಖಾಸಗಿ ವಿಡಿಯೋವನ್ನು ವೈರಲ್ ಮಾಡುವುದಾಗಿ ಗೆಳೆಯರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಅಭಿಷೇಕ್ ಆಚಾರ್ಯ ಬರೆದಿಟ್ಟ ಡೆತ್ ನೋಟ್‌ನಲ್ಲಿ ಬ್ಲ್ಯಾಕ್‌ಮೇಲ್ ಮಾಡಿದ ನಾಲ್ವರು ಸ್ನೇಹಿತರ ಹೆಸರು ಉಲ್ಲೇಖಿತವಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ಮೃತ ಯುವಕನ ಮೊಬೈಲ್ ಮತ್ತು ತಾಂತ್ರಿಕ ಆಯಾಮದಲ್ಲಿ ಪರಿಶೀಲನೆ ನಡೆಯುತ್ತಿದೆ. ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಹೆಸರಿಸಿದವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.