ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Drowned: ತುಂಗಭದ್ರಾ ನದಿಯಲ್ಲಿ ಮುಳುಗಿ ಬೆಂಗಳೂರಿನ ಯುವಕರಿಬ್ಬರ ಸಾವು

ಎಲೆಬಿಚ್ಚಾಲಿ ಗುರುರಾಯರ ಏಕಶಿಲಾ ವೃಂದಾವನ ದರ್ಶನಕ್ಕೆ ಬೆಂಗಳೂರಿನಿಂದ 15 ಜನ ಸ್ನೇಹಿತರ ತಂಡ ಆಗಮಿಸಿತ್ತು. ಈ ವೇಳೆ ಮುತ್ತುರಾಜ್ ಮತ್ತು ಮದನ್ ನದಿಯಲ್ಲಿ ಈಜಲು ತೆರಳಿದ್ದಾರೆ. ನದಿಯಲ್ಲಿ ತಗ್ಗು ಪ್ರದೇಶದಲ್ಲಿ ಸಿಲುಕಿ ಒದ್ದಾಡಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ತುಂಗಭದ್ರಾ ನದಿಯಲ್ಲಿ ಮುಳುಗಿ ಬೆಂಗಳೂರಿನ ಯುವಕರಿಬ್ಬರ ಸಾವು

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Apr 18, 2025 9:46 AM

ರಾಯಚೂರು: ತುಂಗಭದ್ರಾ ನದಿಯಲ್ಲಿ (Tungabhadra river) ಈಜಲು ತೆರಳಿದ ಬೆಂಗಳೂರು ಮೂಲದ ಇಬ್ಬರು ಯುವಕರು (Bengaluru youths) ಮುಳುಗಿ ಸಾವನ್ನಪ್ಪಿರುವ (Drowned) ಘಟನೆ ರಾಯಚೂರು (Raichuru news) ತಾಲೂಕಿನ ಎಲೆಬಿಚ್ಚಾಲಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮೂಲದ ಮುತ್ತುರಾಜ್‌ (24) ಮತ್ತು ಮದನ್‌ (20) ಎಂದು ಗುರುತಿಸಲಾಗಿದೆ. ಯುವಕರ ಈಜಲು ತೆರಳಿದ್ದಾಗ ದುರ್ಘಟನೆ ನಡೆದಿದೆ. ರಕ್ಷಿಸಲು ಹೋಗುವ ಮುನ್ನವೇ ಇಬ್ಬರೂ ಕೈಕಾಲು ಬಡಿದು ತಳ ಸೇರಿದ್ದರು.

ಎಲೆಬಿಚ್ಚಾಲಿ ಗುರುರಾಯರ ಏಕಶಿಲಾ ವೃಂದಾವನ ದರ್ಶನಕ್ಕೆ ಬೆಂಗಳೂರಿನಿಂದ 15 ಜನ ಸ್ನೇಹಿತರ ತಂಡ ಆಗಮಿಸಿತ್ತು. ಈ ವೇಳೆ ಮುತ್ತುರಾಜ್ ಮತ್ತು ಮದನ್ ನದಿಯಲ್ಲಿ ಈಜಲು ತೆರಳಿದ್ದಾರೆ. ನದಿಯಲ್ಲಿ ತಗ್ಗು ಪ್ರದೇಶದಲ್ಲಿ ಸಿಲುಕಿ ಒದ್ದಾಡಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಘಟನೆ ಕುರಿತಂತೆ ಯರಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಡೆಗೋಡೆಗೆ ಪಿಕಪ್‌ ಡಿಕ್ಕಿಯಾಗಿ ನಾಲ್ವರು ಸಾವು

ರಾಯಚೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಗ್ರಾಮದ ಬಳಿ ನಡೆದಿದೆ. ಗೂಡ್ಸ್ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ನಾಗರಾಜ್ (28) ಸೋಮು (38) ನಾಗಭೂಷಣ್ (36) ಹಾಗೂ ಮುರಳಿ (38) ಎಂದು ಗುರುತಿಸಲಾಗಿದೆ.

ಮೃತಪಟ್ಟ ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಗೂಡ್ಸ್ ಪಿಕಪ್ ವಾಹನ ಚಾಲಕ ಆನಂದ್‌ಗೆ ಗಂಭೀರವಾದ ಗಾಯಗಳಾಗಿವೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕುರಿ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಾಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ಕುರಿತು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Accident news: ಮೆಟ್ರೋ ವಯಾಡಕ್ಟ್‌ ಬಿದ್ದು ಆಟೋ ಚಾಲಕ ಸಾವು ಪ್ರಕರಣ: ಮೂವರ ಮೇಲೆ ಎಫ್‌ಐಆರ್